BJP Activist Shakunthala arrest, Udupi Video: ಉಡುಪಿ ವಿಡಿಯೋ ಪ್ರಕರಣ ; ಸಿದ್ದರಾಮಯ್ಯ ಕುಟುಂಬದ ಬಗ್ಗೆ ಅವಹೇಳನ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಅರೆಸ್ಟ್ 

28-07-23 03:32 pm       Bangalore Correspondent   ಕರ್ನಾಟಕ

ಉಡುಪಿ ವಿಡಿಯೋ ಪ್ರಕರಣ ಮುಂದಿಟ್ಟು ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದ ವಿರುದ್ಧ ಟ್ವಿಟ್ಟರ್‌ನಲ್ಲಿ ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್‌ ಹಾಕಿದ್ದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು, ಜುಲೈ 28: ಉಡುಪಿ ವಿಡಿಯೋ ಪ್ರಕರಣ ಮುಂದಿಟ್ಟು ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದ ವಿರುದ್ಧ ಟ್ವಿಟ್ಟರ್‌ನಲ್ಲಿ ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್‌ ಹಾಕಿದ್ದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ಬಂಧಿಸಿದ್ದಾರೆ. 

ಶಕುಂತಲಾ ಎಂಬವರು ಸಿದ್ದರಾಮಯ್ಯ ಸೊಸೆ ಅಥವಾ ಹೆಂಡ್ತಿಯ ವಿಡಿಯೋ ಮಾಡ್ತಿದ್ದರೆ ಇವರು ಬಿಡುತ್ತಿದ್ದರಾ ಎಂದು ಟ್ವೀಟ್ ಮಾಡಿದ್ದರು. ಈ ಬಗ್ಗೆ ಹೈಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹನುಮಂತಯ್ಯ ಎಂಬ ಯುವ ಕಾಂಗ್ರೆಸ್​ ಕಾರ್ಯಕರ್ತ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಿಸಲಾಗಿದ್ದು, ಐಪಿಸಿ ಸೆಕ್ಷನ್ 509 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

High Court To Hear Petition To Disqualify Karnataka Chief Minister  Siddaramaiah On July 28

ವ್ಯಕ್ತಿಯ ಘನತೆಗೆ ಧಕ್ಕೆ ತರುವ ರೀತಿ ವರ್ತನೆ ಮಾಡಿದ್ದಾರೆಂದು ಕೇಸ್ ದಾಖಲಾಗಿದ್ದು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾರ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಬಂಧನ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ.

BJP member arrested for posting derogatory post about CM Siddaramaiah and family in connection to Udupi Video Camera case.