ಬ್ರೇಕಿಂಗ್ ನ್ಯೂಸ್
29-07-23 04:48 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29: ಕಾಶಿ ಯಾತ್ರೆ ಕೈಗೊಳ್ಳುವ ಭಕ್ತರಿಗಾಗಿ ರಾಜ್ಯದಿಂದ ವಿಶೇಷ ರೈಲು ವ್ಯವಸ್ಥೆಯನ್ನು ಮಾಡಲಾಗಿದೆ. ಕರ್ನಾಟಕ ಭಾರತ್ ಗೌರವ್ ಹೆಸರಿನ ಕಾಶಿಯಾತ್ರೆಯ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.
ಯಶವಂತಪುರ ರೈಲ್ವೇ ನಿಲ್ದಾಣದಿಂದ ಹೊರಟಿರುವ ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆ ರೈಲು ವಾರಣಾಸಿ, ಅಯೋಧ್ಯೆ, ಪ್ರಯಾಗ್ ರಾಜ್ ದರ್ಶನ ಮಾಡಲಿರುವ ಯಾತ್ರಿಗಳನ್ನು ಕರೆದೊಯ್ಯಲಿದೆ. 8 ದಿನಗಳ ಕಾಶಿ ಯಾತ್ರೆ ಪ್ರವಾಸಕ್ಕೆ ಒಬ್ಬರಿಗೆ 20 ಸಾವಿರ ರೂ. ದರ ನಿಗದಿ ಮಾಡಲಾಗಿದೆ. ಇದರಲ್ಲಿ ರಾಜ್ಯ ಸರ್ಕಾರದಿಂದ 5 ಸಾವಿರ ರೂ. ಸಬ್ಸಿಡಿ ಸಿಗಲಿದೆ. ಊಟ, ವಸತಿ ವ್ಯವಸ್ಥೆ ಇದರಲ್ಲಿ ಒಳಗೊಳ್ಳಲಿದೆ. 700 ಸೀಟ್ ಸಾಮರ್ಥ್ಯ ಹೊಂದಿರುವ ರೈಲಿನಲ್ಲಿ ಈಗಾಗಲೇ 403 ಸೀಟ್ ಬುಕ್ಕಿಂಗ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.
ಯಶವಂತಪುರ ರೈಲು ನಿಲ್ದಾಣದಿಂದ ಕಾಶಿಗೆ ತಲುಪಲು ಎರಡು ದಿನ ಬೇಕಾಗುತ್ತದೆ. ವಾರಣಾಸಿಗೆ ತಲುಪಿದ ಬಳಿಕ ಗಂಗಾ ಸ್ನಾನ, ತುಳಸಿ ಮಂದಿರ ದರ್ಶನ, ಶ್ರೀ ಹನುಮಾನ್ ದರ್ಶನ, ಕಾಶಿ ವಿಶ್ವನಾಥ ದರ್ಶನ ಪಡೆದ ಬಳಿಕ ಒಂದು ದಿನ ಕಾಶಿಯಲ್ಲಿ ವಾಸ ಇರಲಿದೆ. ಬಳಿಕ 5ನೇ ದಿನ ವಾರಣಾಸಿಯಿಂದ ಆಯೋಧ್ಯೆಗೆ ತೆರಳಿ ಶ್ರೀರಾಮ ಭೂಮಿ ದರ್ಶನ ಮಾಡಿ, ಸಂಜೆ ಸರಯೂ ಆರತಿ ವೀಕ್ಷಣೆ ಮಾಡುವ ವ್ಯವಸ್ಥೆ ಇರಲಿದೆ. 6ನೇ ದಿನ ಪ್ರಯಾಗ್ ರಾಜ್ ರೈಲು ತಲುಪಲಿದೆ. ಬಳಿಕ ತ್ರಿವೇಣಿ ಸಂಗಮ ಸ್ನಾನ, ಶ್ರೀ ಹನುಮಾನ್ ಮಂದಿರ ದರ್ಶನ ಇರಲಿದೆ. ಅದೇ ದಿನ ಪ್ರಯಾಗ್ ರಾಜ್‍ನಿಂದ ಬೆಂಗಳೂರಿಗೆ ರೈಲು ಹೊರಡಲಿದೆ ಎಂದು ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ಕಾಶಿಯಾತ್ರೆಯ ಮೂರು ಟ್ರಿಪ್ ಮುಗಿದಿದೆ. ಇದು ನಾಲ್ಕನೇ ಟ್ರಿಪ್ ಇದಾಗಿದೆ. ರೈಲಿನಲ್ಲಿ ರಾಜ್ಯ ಆರೋಗ್ಯ ಇಲಾಖೆಯ ಇಬ್ಬರು ವೈದ್ಯರು ಇರಲಿದ್ದಾರೆ. ಆಗಸ್ಟ್ 15ಕ್ಕೆ ಮತ್ತೆ 5ನೇ ಕಾಶಿಯಾತ್ರೆ ಆರಂಭವಾಗಲಿದೆ. ಯಶವಂತಪುರ, ದಾವಣಗೆರೆ, ಬೀರೂರು, ಹಾವೇರಿ, ಹುಬ್ಬಳ್ಳಿ, ಬೆಳಗಾವಿ ಹಾಗೂ ರಾಯಭಾಗದಲ್ಲಿ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.
The Muzrai Department of the Karnataka goverment has made special train arrangements to Kashi from Karnataka. Muzrai Minister Ramalinga Reddy at Yeshwanthpur railway station flagged off the fourth train that left for Kashi from Karnataka. The ticket price for the Karnataka Bharat Gaurav Kashi Yatra train is Rs 20,000 but the goverment is giving a Rs 5,000 subsidy to people travelling on these trains.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 04:39 pm
HK News Desk
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm