ಉಡುಪಿ ವಿಡಿಯೋ ಪ್ರಕರಣ ; ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಕಣ್ರೀ, ಸಿಎಂ ಸಿದ್ದು ಕಿಡಿ, ಎಫ್‌ಐ ಆರ್ ದಾಖಲಾಗಿದೆ, ಕ್ರಮ ಕೈಗೊಳ್ತೀವಿ !

29-07-23 06:34 pm       Bangalore Correspondent   ಕರ್ನಾಟಕ

ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಎಂದು ಕಿಡಿಕಾರಿದರು.

ಬೆಂಗಳೂರು, ಜುಲೈ 29: ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಎಂದು ಕಿಡಿಕಾರಿದರು.

ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐ ಆರ್ ದಾಖಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು.

Catch them young: BJP youth wing starts work on its blueprint for 2024,  starts with ideological grounding of its functionaries - The Economic Times

ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿಯ ವಿಡಿಯೋ ಚಿತ್ರೀಕರಣ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ.

Khushbu Sundar calls for thorough probe of Udupi college washroom video row

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಈಗಾಗಲೇ ಪ್ರಕರಣ ದಾಖಲು ಮಾಡಲಾಗಿದೆ. ಈ ನಡುವೆ ಕೇಂದ್ರ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಉಡುಪಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆದರೆ ಶೌಚಾಲಯದಲ್ಲಿ ಗುಪ್ತ ಕ್ಯಾಮೆರಾವನ್ನು ಅಳವಡಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಮತ್ತೊಂದು ಕಡೆಯಲ್ಲಿ ಉಡುಪಿ ಘಟನೆಯನ್ನು ಎನ್‌ಐಎಗೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ಜುಲೈ 18ರಂದು ಘಟನೆ ಬೆಳಕಿಗೆ ಬಂದಿದೆ. ಬಿಜೆಪಿ ಪ್ರತಿಭಟನೆ ಬಳಿಕ 26ರಂದು ಎಫ್‍ಐಆರ್ ಮಾಡಿದ್ದಾರೆ. ಅಗೆದಷ್ಟೂ ವಿಚಾರ ಆಳಕ್ಕೆ ಹೋಗುತ್ತಿದೆ. ಈ ಥರದ ಘಟನೆ ಆರೇಳು ತಿಂಗಳಿಂದ ನಡೆಯುತ್ತಿದೆ ಎಂದು ಕಾಲೇಜು ವಿದ್ಯಾರ್ಥಿನಿಯರೇ ಹೇಳುತ್ತಿದ್ದಾರೆ. ಇದರ ಹಿಂದೆ ದೊಡ್ಡ ಜಾಲ ಇದೆ ಎಂದು ಆರೋಪಿಸಿದರು. ಅದು ಪಿಎಫ್‍ಐ ಇದೆಯೋ, ಜಿಹಾದಿ ಸಂಘಟನೆಗಳಿವೆಯೇ?- ಇದರ ಬಗ್ಗೆ ತನಿಖೆ ಮಾಡಬೇಕು ಎಂದು ವಿಧಾನಪರಿಷತ್‌ ಸದಸ್ಯ ಎನ್‌ ರವಿಕುಮಾರ್ ಆಗ್ರಹಿಸಿದ್ದಾರೆ.

IS module planned attacks in Kerala too, says NIA | Onmanorama

ವಿಡಿಯೋ ರೆಕಾರ್ಡ್ ಆದ ಮೊಬೈಲನ್ನು ಹುಡುಗರು ಒಯ್ಯುತ್ತಿದ್ದರೆಂಬ ಮಾಹಿತಿ ಸಿಕ್ಕಿದೆ. ವಿಡಿಯೋ ಪಡೆಯಲು ಬರುತ್ತಿದ್ದ ಹುಡುಗರು ಯಾರು? ಪಿಎಫ್‍ಐ ಜಾಲದ ಅನೇಕ ಮಹಿಳೆಯರೂ ಇದರಲ್ಲಿ ಇರುವುದಾಗಿ ಗೊತ್ತಾಗುತ್ತಿದೆ. ಸಮಗ್ರ ತನಿಖೆಗಾಗಿ ಎನ್‍ಐಎಗೆ ಕೊಡಿ ಎಂಬುವುದು ಬಿಜೆಪಿ ವಾದವಾಗಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಹೆಣಗಳ ಮೇಲೆ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

Udupi college video case, CM Siddaramaiah slams BJP with his first reaction, Says we will take action as FIR has bern lodged.