ರಾಷ್ಟ್ರೀಯ ತಂಡದಿಂದ ಸಿಟಿ ರವಿ ಹೊರಕ್ಕೆ ; ಬಿಎಲ್ ಸಂತೋಷ್ ಮುಂದುವರಿಕೆ, ಅಧ್ಯಕ್ಷ ಸ್ಥಾನಕ್ಕೆ ಸೀಟಿ ಊದಲಿದ್ದಾರೆಯೇ ರವಿ ? 

29-07-23 08:03 pm       Bangalore Correspondent   ಕರ್ನಾಟಕ

2024 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಹೈಕಮಾಂಡ್‌ ಹೊಸ ತಂಡವನ್ನು ರಚಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ರಚಿಸಲಾದ ತಂಡಕ್ಕೆ ಹೊಸತಾಗಿ ರಾಷ್ಟ್ರೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ.

ಬೆಂಗಳೂರು, ಜುಲೈ 29: 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಹೈಕಮಾಂಡ್‌ ಹೊಸ ತಂಡವನ್ನು ರಚಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ರಚಿಸಲಾದ ತಂಡಕ್ಕೆ ಹೊಸತಾಗಿ ರಾಷ್ಟ್ರೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಕರ್ನಾಟಕದಿಂದ ಏಕೈಕ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿಟಿ ರವಿ ಅವರನ್ನು ಕೈಬಿಡಲಾಗಿದೆ. 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಹೊಸ ತಂಡದಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸ್ಥಾನದಲ್ಲಿ ಬಿಎಲ್ ಸಂತೋಷ್ ಅವರನ್ನು ಮುಂದುವರಿಸಲಾಗಿದೆ. ಅವರನ್ನು ಹೊರತುಪಡಿಸಿ, ಕರ್ನಾಟಕದ ಯಾವುದೇ ನಾಯಕರು ಸ್ಥಾನ ಪಡೆದಿಲ್ಲ. ಸಿಟಿ ರವಿ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಕೈಬಿಟ್ಟು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುತ್ತಾರೆ ಎನ್ನುವ ವದಂತಿ ಹರಡಿದೆ.‌ ಆಗಸ್ಟ್ ಮೊದಲ ವಾರದಲ್ಲಿ ಕರ್ನಾಟಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ ಆಗುವ ಸಾಧ್ಯತೆಯಿದೆ. 

Jagadish Shettar | Karnataka MLA B S Yediyurappa criticises former Chief  Minister Jagadish Shettar for deciding to quit BJP - Telegraph India

Bigger role awaits Karnataka CM's son B Y Vijayendra in BJP | Deccan Herald

Amit Shah cancels Karnataka poll campaign to closely monitor Manipur  clashes | Latest News India - Hindustan Times

ಇತ್ತೀಚೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಪಕ್ಷದ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೆಹಲಿಯಲ್ಲಿ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರೂ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ಇವರಲ್ಲಿ ಒಬ್ಬರಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ಸಿಗಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಬಿಜೆಪಿ ರಾಷ್ಟ್ರೀಯ ನಾಯಕರು ಬೇರೆ ನಿರ್ಧಾರಕ್ಕೆ ಬಂದಂತೆ ಕಾಣುತ್ತಿದೆ. 

Karnataka Assembly Elections: CM Basavaraj Bommai files nomination from  Shiggaon

ಒಕ್ಕಲಿಗ ನಾಯಕ ರಾಜ್ಯಾಧ್ಯಕ್ಷರಾದರೆ ಲಿಂಗಾಯತ ನಾಯಕರೊಬ್ಬರನ್ನು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ವಿರೋಧ ಪಕ್ಷದ ನಾಯಕನ ಸ್ಥಾನದ ರೇಸಿನಲ್ಲಿದ್ದಾರೆ.  ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಎಲ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡವರೇ ಆಯ್ಕೆಯಾಗೋದು ಖಚಿತವಾಗಿದೆ.‌ ಸಂತೋಷ್ ಬಣದ ಸಿಟಿ ರವಿ ಅಧ್ಯಕ್ಷ ಸ್ಥಾನಕ್ಕೇರಿದಲ್ಲಿ ಬಸವರಾಜ ಬೊಮ್ಮಾಯಿ ಅವರೇ ಪ್ರತಿಪಕ್ಷ ನಾಯಕ ಆಗೋದು ಪಕ್ಕಾ ಎನ್ನಲಾಗುತ್ತಿದೆ.

BJP president J P Nadda reshuffled the party's team of central office-bearers on Saturday. Senior leader from Karnataka, C T Ravi was dropped as the party's National General Secretary.