ಬ್ರೇಕಿಂಗ್ ನ್ಯೂಸ್
30-07-23 04:15 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30: ಬೆಂಗಳೂರು ಸೇರಿ ರಾಜ್ಯದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ ಐವರು ಶಂಕಿತ ಉಗ್ರರ ಬಂಧನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಸದ್ಯದಲ್ಲೇ ಅಧಿಕೃತವಾಗಿ ತನಿಖೆ ಕೈಗೆತ್ತಿಕೊಳ್ಳಲಿದೆ.
ಬೆಂಗಳೂರಿನ ಸಿಸಿಬಿ ಪೊಲೀಸರು ಐವರು ಶಂಕಿತರ ಪ್ರಾಥಮಿಕ ವಿಚಾರಣೆ ನಡೆಸಿ ಇಡೀ ವರದಿಯನ್ನು ದೆಹಲಿಯಲ್ಲಿರುವ ಕೇಂದ್ರ ಕಚೇರಿಗೆ ರವಾನೆ ಮಾಡಿದ್ದಾರೆ. ಶಂಕಿತರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯಲ್ಲಿ ಸಕ್ರಿಯವಾಗಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಉಗ್ರ ಸಂಘಟನೆ ಸೇರಿದ್ದ ಶಂಕಿತರು, ಶಸ್ತ್ರಾಸ್ತ್ರ ಸ್ವೀಕರಿಸುವಾಗ ಆಣೆ ಪ್ರಮಾಣ ಮಾಡಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.
ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಅಪರಾಧಿಯಾಗಿರುವ ಅಬ್ದುಲ್ ನಾಜೀರ್ ಪ್ರಚೋದನೆಯಿಂದ ಜೈಲಿನಿಂದ ಹೊರಬಂದು ಅರಬ್ ರಾಷ್ಟ್ರದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಎಂಬಾತ ಅಲ್ಲಿದ್ದುಕೊಂಡೇ ಲಷ್ಕರ್ ಉಗ್ರರಿಂದ ಲಕ್ಷಾಂತರ ಹಣ ಪಡೆದು ಭಾರತದಲ್ಲಿ ಅಡಗಿರುವ ತನ್ನ ಸಹಚರರಿಗೆ ಹಂಚಿದ್ದಾನೆ. ವಿದೇಶದಿಂದಲೇ ಜುನೈದ್‌ಗೆ ಹಣ ಸಂದಾಯವಾಗಿರುವ ಮಾಹಿತಿ ಸಿಕ್ಕಿದೆ.

ಎಲ್‌ಇಟಿ ಉಗ್ರರು ಕೂಡ ಜುನೈದ್ ಹಾಗೂ ಇತರೆ ಶಂಕಿತರಿಗೆ ಕೆಲವು ಟಾರ್ಗೆಟ್ ನೀಡಿದ್ದರು. ಅದರಂತೆ, ಇವರೆಲ್ಲ ಒಂದೇ ಗುರಿಯಿಟ್ಟು ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇದಕ್ಕಾಗಿ ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು, ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನ ಕೆಲವು ಭಾಗಗಳನ್ನು ಶಂಕಿತರು ಟಾರ್ಗೆಟ್ ಮಾಡಿದ್ದರು. ಇದರ ಬೆನ್ನಲ್ಲೇ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದರು ಎಂಬುದು ಪತ್ತೆಯಾಗಿದೆ. ಈ ಎಲ್ಲದರ ಬಗ್ಗೆ ಬೆಂಗಳೂರಿನ ಎನ್‌ಐಎ ಅಧಿಕಾರಿಗಳು ಕೇಂದ್ರ ಕಚೇರಿಗೆ ವರದಿ ಕಳುಹಿಸಿದ್ದಾರೆ.

ಸಿಸಿಬಿ ಪೊಲೀಸರು ಈಗಾಗಲೇ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ(ಯುಎಪಿಎ) ಅಡಿ ಪ್ರಕರಣ ದಾಖಲಿಸಿಕೊಂಡಿದೆ. ಈ ಮಧ್ಯೆ ಸಿಸಿಬಿಯ ಅಧಿಕಾರಿಗಳು ಪರಾರಿಯಾಗಿರುವ ಸಲ್ಮಾನ್ ಹಾಗೂ ಜುನೈದ್ ಪತ್ತೆಗಾಗಿ ಕೇಂದ್ರದ ತನಿಖಾ ಸಂಸ್ಥೆಗಳ ನೆರವು ಕೋರಿದ್ದಾರೆ. ಗ್ರೇನೇಡ್ ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸುವ ಮೊದಲು ಜುನೈದ್, ಐವರು ಶಂಕಿತರಿಂದ ಈ ವಿಚಾರವನ್ನು ಯಾರೊಂದಿಗೂ ಹೇಳಿಕೊಳ್ಳುವುದಿಲ್ಲ. ಕಳುಹಿಸಿದ ಪಾರ್ಸ್‌ಲ್ ಅನ್ನು ನಾವು ಹೇಳುವವರೆಗೂ ತೆರೆಯುವುದಿಲ್ಲ ಎಂದು ಆಣೆ ಮಾಡಿಸಿಕೊಂಡಿದ್ದರು ಎಂಬುದು ಗೊತ್ತಾಗಿದೆ.
Terror case in Bangalore, NIA to take over case. In a swift operation carried out on July 18, the Bengaluru Central Crime Branch (CCB) police arrested five youths with a history of crime for alleged possession of seven country-made pistols and 45 live bullets, and for allegedly planning some form of terror attack in the future.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm