ಬ್ರೇಕಿಂಗ್ ನ್ಯೂಸ್
02-08-23 04:57 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 2: ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಪ್ರತಿಭಟನೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪಿಸಿ ಖರ್ಗೆಯವರ ಮೈ ಬಣ್ಣದ ಬಗ್ಗೆ ವ್ಯಂಗ್ಯವಾಡಿ ಪೇಚಿಗೆ ಸಿಲುಕಿದ್ದಾರೆ.
ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರ ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ಸ್ಥಳೀಯ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಆರಗ ಜ್ಞಾನೇಂದ್ರ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿ ಮಾಡಿದರೆ ಮಲೆನಾಡು ಭಾಗಕ್ಕೆ ಆಗಬಹುದಾದ ದುಷ್ಪರಿಣಾಮ ಏನು ಎಂಬ ಬಗ್ಗೆ ಸರ್ಕಾರಕ್ಕೆ ಅರಿವಿರಬೇಕು. ಇದಕ್ಕೆ ಸರಿಯಾಗಿ ಕಾಡಿನ ಬಗ್ಗೆ ಅರಿವೇ ಇರದಂತಹ ಜನಪ್ರತಿನಿಧಿಯನ್ನು ಅರಣ್ಯ ಸಚಿವರನ್ನಾಗಿ ಮಾಡಿದ್ದಾರೆ.
ಅವರಿಗೆಲ್ಲ ಮರ, ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ. ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ, ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ. ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ... ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯದ ಮಾತನ್ನಾಡಿದ್ದಾರೆ.
ಮಾಜಿ ಗೃಹ ಸಚಿವರಾಗಿರುವ ಆರಗ ಜ್ಞಾನೇಂದ್ರ ಅವರು, ಪರಿಶಿಷ್ಟ ಜಾತಿಗೆ ಸೇರಿದ ಮಲ್ಲಿಕಾರ್ಜುನ ಖರ್ಗೆಯವರನ್ನು ಅನಗತ್ಯವಾಗಿ ಟೀಕಿಸಿದ್ದು ಪೇಚಿಗೆ ಸಿಲುಕುವಂತಾಗಿದೆ. ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು ಈ ರೀತಿಯ ಹೇಳಿಕೆ ಕೊಟ್ಟವರನ್ನು ನಿಮ್ಹಾನ್ಸ್ ಸೇರಿಸಬೇಕೆಂದು ಹೇಳಿದ್ದಾರೆ.
Former Home Minister and senior BJP leader Araga Jnanendra has made an objectionable comment on All India Congress Committee (AICC) president Mallikarjun Kharge during a protest against Forest Minister Eshwar Khandre for his statement on the K. Kasturirangan report.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm