ಬ್ರೇಕಿಂಗ್ ನ್ಯೂಸ್
07-08-23 12:21 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 7: ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಅವರ ಪತ್ನಿ ನಟಿ ಸ್ಪಂದನಾ ಬ್ಯಾಂಕಾಕ್ ಪ್ರವಾಸದಲ್ಲಿದ್ದಾಗ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಸ್ನೇಹಿತರು ಮತ್ತು ಕುಟುಂಬದವರ ಜೊತೆ ತೆರಳಿದ್ದಾಗ ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಂದು ಮದುವೆಯಾಗಿದ್ದರು. ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ಸ್ಪಂದನಾ ಅವರ ಸಹೋದರ ರಕ್ಷಿತ್ ಶಿವರಾಂ ಇತ್ತೀಚೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
ಸ್ಪಂದನಾ ನಿಧನನ ಸುದ್ದಿ ತಿಳಿದು ಸ್ಯಾಂಡಲ್‌ಮಂದಿ ಶಾಕ್ ಆಗಿದ್ದಾರೆ. ವಿಜಯ ರಾಘವೇಂದ್ರ ಮೂರು ದಿನಗಳ ಹಿಂದೆ ಪತ್ನಿ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು. ಸ್ಪಂದನಾಗೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳನ್ನು ಹೊರತುಪಡಿಸಿ ಬೇರೆ ಆರೋಗ್ಯ ಸಮಸ್ಯೆಗಳು ಇರಲಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. ವಿಷಯ ತಿಳಿದ ಕೂಡಲೇ ಸ್ಪಂದನಾ ತಂದೆ ಹಾಗೂ ಸಹೋದರ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಬ್ಯಾಂಕಾಕ್‌ಗೆ ತೆರಳಿದ್ದಾರೆ. ನಾಳೆ, ಬ್ಯಾಂಕಾಂಕ್‌ನಿಂದ ಬೆಂಗಳೂರಿಗೆ ಸ್ಪಂದನಾ ಮೃತದೇಹವನ್ನು ತರಲಾಗುವುದು ಎಂದು ಸ್ಯಾಂಡಲ್‌ವುಡ್ ಮೂಲಗಳು ತಿಳಿಸಿವೆ.
'ಅಪೂರ್ವ' ಚಿತ್ರದಲ್ಲಿ ನಟಿಸಿದ್ದ ಸ್ಪಂದನಾ
ಸ್ಪಂದನಾ ವಿಜಯ್ ರಾಘವೇಂದ್ರ ಕೂಡ ಸಿನಿಮಾವೊಂದರಲ್ಲಿ ಬಣ್ಣ ಹಚ್ಚಿದ್ದರು. ರವಿಚಂದ್ರನ್ ನಟಿಸಿ, ನಿರ್ದೇಶಿಸಿದ್ದ 'ಅಪೂರ್ವ' ಚಿತ್ರದಲ್ಲಿ ವಿಜಯ್ ರಾಘವೇಂದ್ರ ಜೊತೆಗೆ ಸ್ಪಂದನಾ ಕೂಡ ಅತಿಥಿ ಪಾತ್ರ ಮಾಡಿದ್ದರು. ಆ ಸಿನಿಮಾದಲ್ಲಿ ಈ ಜೋಡಿ ತೆರೆಮೇಲೆಯೂ ದಂಪತಿಯಾಗಿಯೇ ಕಾಣಿಸಿಕಂಡಿದ್ದರು. ಅಲ್ಲದೆ, ವಿಜಯ್ ರಾಘವೇಂದ್ರ ನಟಿಸಿ, ನಿರ್ದೇಶಿಸಿದ್ದ 'ಕಿಸ್ಮತ್' ಚಿತ್ರವನ್ನು ಸ್ಪಂದನಾ ಅವರು ನಿರ್ಮಾಣ ಮಾಡಿದ್ದರು
ಇನ್ನೇನು 19 ದಿನ ಕಳೆದಿದ್ದರೆ ಈ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವುದರಲ್ಲಿದ್ದರು. ಆದರೆ ಇದೀಗ ಸ್ಪಂದನಾ ಅವರ ಅಗಲಿಕೆ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ.
ಡಾ ರಾಜ್‌ಕುಮಾರ್ ಕುಟುಂಬದಲ್ಲಿ ಒಂದಾದ ಮೇಲೊಂದು ಆಘಾತಗಳು ಎದುರಾಗುತ್ತಿವೆ. 2021ರ ಅಕ್ಟೋಬರ್ 29ರಂದು ನಟ ಪುನೀತ್ ರಾಜ್‌ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಕೆಲ ತಿಂಗಳ ಹಿಂದೆ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್ ಅವರ ಸಹೋದರ ಶ್ರೀನಿವಾಸ್ ಪತ್ರ ಧ್ರುವನ್‌ಗೆ ಅಪಘಾತವಾಗಿ ಕಾಲನ್ನು ಕತ್ತರಿಸಲಾಗಿದೆ. ಇದೀಗ ಪಾರ್ವತಮ್ಮ ರಾಜ್‌ಕುಮಾರ್ ಅವರ ಮತ್ತೋರ್ವ ಸಹೋದರ ಎಸ್ ಎ ಚಿನ್ನೇಗೌಡ ಅವರ ಸೊಸೆ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿರುವುದು ದುರದೃಷ್ಟಕರ.
Spandana had been on vacation in Thailand’s capital city and was set to return on Monday when the incident occurred. Family sources said that she had suffered from low blood pressure and cardiac arrest, leading to her demise.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 09:18 pm
Mangalore Correspondent
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
12-02-25 06:23 pm
Bangalore Correspondent
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm