Cheluvarayaswamy: ತನ್ನ ವಿರುದ್ಧ ರಾಜ್ಯಪಾಲರಿಗೆ ದೂರು ಯೋಜಿತ ಸಂಚಿನ ಭಾಗ, ನಕಲಿ ವ್ಯಕ್ತಿಗಳ ಕೃತ್ಯ ; ಸಚಿವ ಚೆಲುವರಾಯಸ್ವಾಮಿ ಸ್ಪಷ್ಟನೆ 

08-08-23 12:52 pm       Bangalore Correspondent   ಕರ್ನಾಟಕ

ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನನ್ನ ವಿರುದ್ಧ ದೂರು ನೀಡಿರುವುದು ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಿನ ಭಾಗ.

ಬೆಂಗಳೂರು, ಆಗಸ್ಟ್ 8: ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನನ್ನ ವಿರುದ್ಧ ದೂರು ನೀಡಿರುವುದು ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಿನ ಭಾಗ. ಇದರಲ್ಲಿ ಹುರುಳಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.

ಈ ಕುರಿತಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೃಷಿ ಇಲಾಖೆಯಲ್ಲಿ ವರ್ಗಾವಣೆಗಾಗಿ ಲಂಚಕ್ಕೆ ಒತ್ತಾಯಿಸಲಾಗಿದೆ ಎಂದು ಕೆಲವು ಮಾಧ್ಯಮದಲ್ಲಿ ಪ್ರಸಾರವಾಗಿರುವ ವರದಿ ಸತ್ಯಕ್ಕೆ ದೂರವಾಗಿದೆ. ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ. ನಮ್ಮ ಸರ್ಕಾರದ ಜನಪರ ಆಡಳಿತಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇಂತಹ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ ಎಂದು ಕಿಡಿಕಾರಿದ್ದಾರೆ.

High Court To Hear Petition To Disqualify Karnataka Chief Minister  Siddaramaiah On July 28

ರಾಜ್ಯಪಾಲರಿಗೆ ಸಲ್ಲಿಸಿರುವ ದೂರಿನ ಬಗ್ಗೆ ಮುಖ್ಯ ಕಾರ್ಯದರ್ಶಿ ಮೂಲಕ ತನಿಖೆ ಮಾಡಿ ವರದಿ‌ ಪಡೆಯುವಂತೆ ಚಲುವರಾಯಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. 

ರಾಜ್ಯಪಾಲರ ಕಚೇರಿಯಿಂದ ಮುಖ್ಯ ಕಾರ್ಯದರ್ಶಿ ಅವರಿಗೆ ಬರೆದ ಪತ್ರದಲ್ಲಿ "ಮಾನ್ಯ ರಾಜ್ಯಪಾಲರಿಗೆ ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಮತ್ತು ಮದ್ದೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿ ಉಲ್ಲೇಖಿತ ದೂರರ್ಜಿಯನ್ನು ಸಲ್ಲಿಸಿರುತ್ತಾರೆ. ದೂರರ್ಜಿಯಲ್ಲಿ ಮೇಲಿನ ಅಧಿಕಾರಿಗಳು ಉಲ್ಲೇಖಿಸಿರುವಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ 6-8 ಲಕ್ಷ ರೂಪಾಯಿಗಳನ್ನು ನೀಡುವಂತೆ ಮಾನ್ಯ ಸಚಿವರು ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿರುತ್ತಾರೆ. ಲಂಚ ಕೇಳುವ ಇಂತಹ ಅನಿಷ್ಠ ಪದ್ಧತಿಗೆ ಕಡಿವಾಣ ಹಾಕುವ ಸಂಬಂಧ ಕ್ರಮ ವಹಿಸದಿದ್ದಲ್ಲಿ ಅಧಿಕಾರಿಗಳು ಕುಟುಂಬದ ಸದಸ್ಯರ ಜೊತೆಗೆ ವಿಷ ಕುಡಿಯುವುದಾಗಿ ತಿಳಿಸಿರುತ್ತಾರೆ. ಈ ದೂರರ್ಜಿಯನ್ನು ನಿಮಾನುಸಾರ ಪರಿಶೀಲಿಸಿ, ಸೂಕ್ತ ಕ್ರಮ ವಹಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಿದ್ದೇನೆ ಎಂದು ಉಲ್ಲೇಖಿಸಲಾಗಿತ್ತು.

Mr. Cheluvarayaswamy said he had asked the Superintendent of Police, Mandya, to hold a preliminary inquiry into the matter. “Prima facie it appears to be fake. But, we have to find out who has written the letter,” he said.