NIA raid in Bangalore : ಬೆಂಗಳೂರಿನಲ್ಲಿ ಎನ್ಐಎ ದಾಳಿ ; ಅಕ್ರಮ ಬಾಂಗ್ಲಾ ವಲಸಿಗರ ಬಂಧನ 

08-08-23 01:44 pm       Bangalore Correspondent   ಕರ್ನಾಟಕ

ಬೆಂಗಳೂರಿನಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು, ಆಗಸ್ಟ್ 8: ಬೆಂಗಳೂರಿನಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಗ್ಗೆ ಪ್ರಕರಣವೊಂದರ ತನಿಖೆಗೆ ಆಗಮಿಸಿದ್ದ ಎನ್ ಐಎ ಅಧಿಕಾರಿಗಳು ಬೆಳ್ಳಂದೂರು ಭಾಗದಲ್ಲಿ ಪರಿಶೀಲನೆ ವೇಳೆ ಮೂವರು ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಖಲೀಲ್, ಅಬ್ದುಲ್, ಮೊಹಮ್ಮದ್ ಜಾಹಿದ್ ಎಂದು ಗುರುತಿಸಲಾಗಿದೆ.

ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ. ಎನ್ ಐಎ ಅಧಿಕಾರಿಗಳು ಆರೋಪಿಗಳನ್ನು ಬೆಳ್ಳಂದೂರು ಪೊಲೀಸರಿಗೆ ಅಕ್ರಮ ವಲಸಿಗರನ್ನು ಒಪ್ಪಿಸಿದ್ದಾರೆ. ಅಕ್ರಮವಾಗಿ ಉಳಿದುಕೊಂಡ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

NIA raid in Bangalore, Bangladeshi refugees taken to custody.