ಬ್ರೇಕಿಂಗ್ ನ್ಯೂಸ್
11-08-23 05:29 pm HK News Desk ಕರ್ನಾಟಕ
ಬೆಳಗಾವಿ, ಆಗಸ್ಟ್ 11: ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ ಪಾಟೀಲ್ ಕುಟುಂಬಸ್ಥರು ನ್ಯಾಯ ಸಿಕ್ಕಿಲ್ಲ. ಮರು ತನಿಖೆ ಮಾಡಬೇಕು ಎಂದು ಮನವಿ ಕೊಟ್ಟಿದ್ದಾರೆ. ಕಾನೂನು ಇಲಾಖೆ ಜೊತೆಗೆ ಚರ್ಚೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಬಾವುರಾವ್ ದೇಶಪಾಂಡೆ ಪಶು ವೈದ್ಯಕೀಯ ಮಹಾವಿದ್ಯಾಲಯ ಕಟ್ಟಡ ಉದ್ಘಾಟನೆ ಮತ್ತು ಅಥಣಿ ತಾಲೂಕಿನ ಗ್ರಾಮೀಣ ಭಾಗದ ಜಮೀನುಗಳಿಗೆ ಕೃಷ್ಣಾ ನದಿಯಿಂದ ನೀರು ಒದಗಿಸುವ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಸಂಘದ ಏತನೀರಾವರಿ ಯೋಜನೆಯ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶುಕ್ರವಾರ ಬೆಳಗಾವಿಗೆ ಆಗಮಿಸಿದರು.
ಈ ಸಂದರ್ಭದಲ್ಲಿ, ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಸಂತೋಷ್ ಪಾಟೀಲ್ ಅವರ ಕುಟುಂಬ, ಪ್ರಕರಣದಲ್ಲಿ ಹಿಂದಿನ ಸರ್ಕಾರವಿದ್ದಾಗ ಬಿ ರಿಪೋರ್ಟ್ ಸಲ್ಲಿಕೆಯಾಗಿದ್ದು ಅದರಿಂದ ತಮಗೆ ನ್ಯಾಯ ಸಿಗದಂತಾಗಿದೆ ಎಂದು ಸಿಎಂ ಅವರಿಗೆ ತಿಳಿಸಿದರು. ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ, ಪುತ್ರ, ಸಂತೋಷ್ ಪಾಟೀಲ್ ಅವರ ತಾಯಿ ಪಾರ್ವತಿ, ಸಂತೋಷ್ ಪಾಟೀಲ್ ಅವರ ಸಹೋದರ ಪ್ರಶಾಂತ್ ಪಾಟೀಲ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.
ಹಿಂದಿನ ಸರ್ಕಾರ ನಡೆಸಿದ್ದ ತನಿಖೆಯಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅದರಿಂದ ಸಂತೋಷ್ ಪಾಟೀಲ್ ಅವರ ಸಾವಿಗೆ ನ್ಯಾಯ ಸಿಕ್ಕಿಲ್ಲ. ಈಗ ಆ ತನಿಖೆಯನ್ನು ಸಿಐಡಿಗೆ ಒಪ್ಪಿಸಬೇಕು ಅಥವಾ ಸಿಬಿಐಗಾದರೂ ಒಪ್ಪಿಸಬೇಕು ಎಂದು ಸಂತೋಷ್ ಕುಟುಂಬ ಸದಸ್ಯರು ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದರು.
ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕುಟುಂಬ ಮನವಿಯನ್ನು ವಿವರಿಸಿ ಹೇಳಿದರಲ್ಲದೆ, ಈ ಪ್ರಕರಣದ ತನಿಖೆಯನ್ನು ಪುನಃ ಆರಂಭಿಸುವ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ವಿಪಕ್ಷಗಳ ಟೀಕೆಗೆ ಉತ್ತರ ;
ಇನ್ನು, ಇದೇ ವೇಳೆ ನಾನಾ ರೀತಿಯ ವಿಚಾರಗಳ ಬಗ್ಗೆ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದರು. “ಸಿದರಾಮಯ್ಯ ಸರಕಾರ ಬಿನ್ ಲಾಡನ್ ಸರ್ಕಾರ’’ ಎಂದು ಆರ್ ಅಶೋಕ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, “ಬಿಜೆಪಿಯವರು ಹತಾಶರಾಗಿದ್ದಾರೆ. ಸುಳ್ಳು ಆರೋಪ ಮಾಡುತ್ತಿದ್ದಾರೆ’’ ಎಂದರು. ಬೆಳಗಾವಿಯಲ್ಲಿ ಪೊಲೀಸರಿಂದ ಅಂಗವಿಕಲನ ಮೇಲೆ ಹಲ್ಲೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, “ಪಿಎಸ್ ಐ ಮೇಲೆ ಇಲಾಖೆಯಿಂದ ತನಿಖೆ ಮಾಡಲು ಸೂಚಿಸುತ್ತೇವೆ. ಹಲ್ಲೆ ಮಾಡಿರೋದು ತಪ್ಪು. ತಪ್ಪು ಮಾಡಿದವರ ಮೇಲೆ ಶಿಸ್ತಿನ ಕ್ರಮ ವಹಿಸುತ್ತೇವೆ’’ ಎಂದರು.
Belagavi Santosh patil case to be reinvestigated say CM Siddaramaiah after Mother and wife cries.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm