ಚಿತ್ರದುರ್ಗದಲ್ಲಿ ಭೀಕರ ಅಪಘಾತ ;  ಚಿಕ್ಕಮಗಳೂರು ಪ್ರವಾಸ ಹೊರಟಿದ್ದ ಒಂದೇ ಕುಟುಂಬದ ಐವರ ಸಾವು

13-08-23 12:33 pm       HK News Desk   ಕರ್ನಾಟಕ

ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭಾನುವಾರ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.

ಚಿತ್ರದುರ್ಗ, ಆಗಸ್ಟ್ 13: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭಾನುವಾರ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.

ಖಾಸಗಿ ಬ್ಯಾಂಕ್​​ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಹಾಗೂ ಚಾಲಕ ಮಧುಸೂಧನ್ (25) ಮೃತ ದುರ್ದೈವಿಗಳಾಗಿದ್ದಾರೆ.

ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಅವರಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದವರಾದ ಏಳು ಜನರು ರಜೆ ಹಿನ್ನೆಲೆಯಲ್ಲಿ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ಇಡೀ ಕುಟುಂಬ ರಾತ್ರಿ 11 ಗಂಟೆಗೆ ಮನೆಯಿಂದ ಕಾರಿನಲ್ಲಿ ಹೊರಟಿತ್ತು. ಇಂದು ನಸುಕಿನ ಜಾವ 3:30ಕ್ಕೆ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟು ಮೂವರಿಗೆ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ‌ ಎಸ್​​​ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Chitradurga Four of a Family Including 8 year Child Killed in Tragic Car Lorry Collision.