ಬ್ರೇಕಿಂಗ್ ನ್ಯೂಸ್
13-08-23 12:38 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ 'ಶಕ್ತಿ ಯೋಜನೆ' ವಿರುದ್ಧ ರಾಜ್ಯದಲ್ಲಿ ಖಾಸಗಿ ಸಾರಿಗೆ ಸಂಘಟನೆಗಳು ಮತ್ತೆ ಸಿಡಿದೆದ್ದಿದ್ದು, ಆ.19ರಂದು ರಾಜ್ಯಾದ್ಯಂತ ಖಾಸಗಿ ಬಸ್, ಆಟೋ ಮುಷ್ಕರ ನಡೆಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿವೆ.
ಖಾಸಗಿ ಬಸ್, ಆಟೋ, ಟ್ಯಾಕ್ಸಿ ಚಾಲಕರಿಗೆ ಇದುವರೆಗೂ ರಾಜ್ಯ ಸರ್ಕಾರ ಯಾವುದೇ ಪರಿಹಾರ ನೀಡದೇ ಇರುವ ಹಿನ್ನೆಲೆ ಸಂಘಟನೆಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ. ಅಂದು ಬಹುತೇಕ ಆಟೋ, ಖಾಸಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಆಟೋರಿಕ್ಷಾ ಸೇರಿ ಸಾರ್ವ ಜನಿಕ ಸೇವೆಯ ಖಾಸಗಿ ವಾಹನ ಚಾಲಕರಿಗೆ ಮಾಸಿಕ 10 ಸಾವಿರ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು.
ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದ ನಷ್ಟಕ್ಕೆ ಒಳಗಾದ ಖಾಸಗಿ ಬಸ್, ಕ್ಯಾಬ್, ರಿಕ್ಷಾ ಚಾಲಕರಿಗೆ ಪರಿಹಾರ ಘೋಷಣೆ ಮಾಡಬೇಕೆಂಬ ಬೇಡಿಕೆ ಇದೆ. ಖಾಸಗಿ ಸಾರಿಗೆ ಉದ್ಯಮ ವಿವಿಧ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾಗಿದ್ದು, ರಾಜ್ಯ ಸರ್ಕಾರದಿಂದ ಇದಕ್ಕಾಗಿ ಕೈಗೊಳ್ಳಬೇಕಿರುವ ಪರಿಹಾರ ಕ್ರಮಗಳು ಮತ್ತು ಸಾರಿಗೆ ಉದ್ಯಮದ ನಷ್ಟದ ಬಗ್ಗೆ ವರದಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ವರದಿ ಆಧರಿಸಿ ಪರಿಹಾರ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೊರೋನಾ ಸೇರಿ ವಿವಿಧ ಕಾರಣದಿಂದ 3-4 ವರ್ಷಗಳಿಂದ ಸಾರಿಗೆ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರದ ಶಕ್ತಿ ಯೋಜನೆಯ ಉಚಿತ ಪ್ರಯಾಣದಿಂದ ಸಮಸ್ಯೆ ಹೆಚ್ಚಾಗಿದೆ. ಖಾಸಗಿ ಬಸ್, ಕ್ಯಾಬ್, ಆಟೋಗಳಿಗೆ ಪ್ರಯಾಣಿಕರ ತೀವ್ರ ಕೊರತೆ ಎದುರಾಗಿ ನಷ್ಟಕ್ಕೊಳಗಾಗಿದೆ. ಹೀಗಾಗಿ ಪರಿಹಾರ ಕೊಡಬೇಕೆಂದು ಸಂಘಟನೆಗಳು ಹೋರಾಟ ನಡೆಸಿದ್ದವು. ಸಾರಿಗೆ ಸಚಿವರು ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದು, ಸಿಎಂ ಜೊತೆಗೆ ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಪರಿಹಾರ ಕ್ರಮಗಳ ಕುರಿತು ಸಾರಿಗೆ ಇಲಾಖೆಗೆ ವರದಿ ನೀಡಲು ಸಿಎಂ ಸೂಚಿಸಿದ್ದಾರೆ. ವರದಿ ಆಧರಿಸಿ ಪರಿಹಾರ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Chief Minister Siddaramaiah has asked the transport department to submit a report on the relief measures that can be taken by the state government and the losses incurred by the transport industry as the private transport industry in the state is in distress due to the 'Shakti' project and other reasons. They are likely to announce compensation based on the report.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm