ಬ್ರೇಕಿಂಗ್ ನ್ಯೂಸ್
06-11-20 03:02 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 06: ರಾಜ್ಯದಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಮಾಡಿದೆ.
ದೀಪಾವಳಿಗೆ ಪ್ರತಿ ವರ್ಷ ಹಬ್ಬದ ಸಡಗರದಲ್ಲಿ ಪಟಾಕಿ ಸಿಡಿಸುವುದು ವಾಡಿಕೆ. ಆದರೆ, ಈ ಬಾರಿ ಕೊರೊನಾ ಮುಂಜಾಗ್ರತೆ ಮತ್ತು ಪರಿಸರ ಮಾಲಿನ್ಯ ತಪ್ಪಿಸುವ ನಿಟ್ಟಿನಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗುವುದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಸಂಜೆ ವೇಳೆಗೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಆದರೆ, ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದು ಹಿಂದು ಸಂಘಟನೆಗಳ ಕೋಪಕ್ಕೆ ಗುರಿಯಾಗಿದೆ. ವರ್ಷಕ್ಕೆ ಒಮ್ಮೆಯಷ್ಟೇ ಹಬ್ಬದ ನಿಮಿತ್ತ ಪಟಾಕಿ ಉರಿಸುವುದು ಹಿಂದಿನಿಂದಲೂ ಬಂದ ಸಂಪ್ರದಾಯ. ಅದನ್ನು ತಡೆಯಲು ಸರಕಾರ ಮುಂದಾಗುವುದು ಸರಿಯಲ್ಲ. ದೀಪಾವಳಿ ಹಬ್ಬದ ಒಂದು ದಿನಕ್ಕಷ್ಟೇ ಪಟಾಕಿ ಸಿಡಿಸಲು ಅವಕಾಶ ನೀಡಬೇಕೆಂದು ಆಗ್ರಹ ಮುಂದಿಟ್ಟಿವೆ.



ದೆಹಲಿಯಲ್ಲೂ ಪಟಾಕಿ ಬ್ಯಾನ್ !
ಇದೇ ವೇಳೆ, ದೆಹಲಿ ಸರಕಾರ ರಾಜಧಾನಿಯಲ್ಲಿ ಸಂಪೂರ್ಣ ಪಟಾಕಿ ನಿಷೇಧಿಸಿದೆ. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಿರುವ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಮತ್ತಷ್ಟು ಪರಿಸರ ಹದಗೆಡಿಸುವುದು ಬೇಡ ಎಂದು ಕೇಜ್ರಿವಾಲ್ ಸರಕಾರ ಪಟಾಕಿ ಸುಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಎನ್ ಜಿಟಿ ನೋಟಿಸ್ ಹಿನ್ನೆಲೆ ಪಟಾಕಿ ಬ್ಯಾನ್
ದೀಪಾವಳಿ ವೇಳೆ ವಾಯುಮಾಲಿನ್ಯಕ್ಕೆ ಕಾರಣವಾಗುವ ಪಟಾಕಿ ಸುಡುವುದನ್ನು ನಿಷೇಧಿಸುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ), ವಾಯುಮಾಲಿನ್ಯ ಹೆಚ್ಚಿರುವ, ಕರ್ನಾಟಕ ಸೇರಿದಂತೆ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿತ್ತು.
ಕೊರೊನಾ ಸಾಂಕ್ರಾಮಿಕದ ಜೊತೆಗೆ ದೀಪಾವಳಿ ಹಬ್ಬವೂ ಇರುವ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್ ಸಂಸ್ಥೆ ಮೇಲ್ಮನವಿ ಸಲ್ಲಿಸಿತ್ತು. ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ನವೆಂಬರ್ 7 ರಿಂದ 30 ರವರೆಗೆ ಪಟಾಕಿ ಬಳಕೆಯನ್ನು ನಿಷೇಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನವೆಂಬರ್ 2 ರಂದು ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ (ಎಂಒಇಎಫ್) ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳು ಪಟಾಕಿ ನಿಷೇಧಿಸುವ ನಿರ್ಧಾರ ಕೈಗೊಂಡಿದೆ.
Karnataka chief minister BS Yediyurappa on Friday said that the state has decided to ban firecrackers during Diwali in the wake of COVID-19.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm