ಬ್ರೇಕಿಂಗ್ ನ್ಯೂಸ್
15-08-23 05:23 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್15: ರಾಜ್ಯ ಕಾಂಗ್ರೆಸ್ ಸರಕಾರದ ಲಂಚಾವತಾರದ ನಾಟಕಗಳ ಒಂದೊಂದೇ ಅಂಕ ತೆರೆದುಕೊಳ್ಳುತ್ತಿದೆ. ಸೀಸನ್ 1, ಸೀಸನ್ 2 ಎನ್ನುವ ರೀತಿಯಲ್ಲಿ ಎಲ್ಲವೂ ಬಯಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.
ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಕನ್ನಡದಲ್ಲಿ ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚೆಚ್ಚು ಬರುತ್ತಿವೆ. ಚಾಪ್ಟರ್ 1, ಚಾಪ್ಟರ್ 2 ಎಂದೆಲ್ಲಾ ಬರುತ್ತಿವೆ. ಅದೇ ರೀತಿ ಈ ಸರಕಾರದ ಭ್ರಷ್ಟಾಚಾರದ ಹಗರಣಗಳು ಕೂಡ ಅದೇ ರೀತಿ ಹೊರಗೆ ಬರುತ್ತಿವೆ. ಸಿನಿಮಾ ಎಂದ ಮೇಲೆ ಕೊನೆ ಎಂಬುದು ಇರಲೇಬೇಕು, ನಾಟಕ ಎಂದರೆ ಅದಕ್ಕೆ ಅಂತಿಮ ತೆರೆ ಎಳೆಯಲೇಬೇಕು. ಈ ಸರಕಾರದ ಲಂಚಾವತಾರಕ್ಕೂ ಅಂತಿಮ ತೆರೆ ಬೀಳುವ ದಿನ ದೂರವಿಲ್ಲ ಎಂದು ಅವರು ಮಾರ್ಮಿಕವಾಗಿ ಹೇಳಿದರು.
ನನಗೆ ಬುದ್ಧಿಭ್ರಮಣೆ ಆಗಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ನನ್ನ ಬಗ್ಗೆ ಅವರು ಚಿಂತಿಸುವುದು ಬೇಡ ಎಂದ ಅವರು; ನಮ್ಮ ಕುಟುಂಬದಲ್ಲೇ ಸಾಕಷ್ಟು ಜನ ವೈದ್ಯರಿದ್ದಾರೆ. ಇನ್ನೊಬ್ಬರಿಂದ ನಾನು ಸರ್ಟಿಫಿಕೇಟ್ ತಗೆದುಕೊಳ್ಳಬೇಕಾಗಿಲ್ಲ. ನನಗೆ ಬುದ್ಧಿಭ್ರಮಣೆ ಆಗಿದ್ದರೆ ನಾನು ತಪಾಸಣೆ ಮಾಡಿಸಿಕೊಳ್ಳುತ್ತೇನೆ. ಆದರೆ, ಮತ ಹಾಕಿದ ಮತದಾರ ಪ್ರಭುಗಳ ಬುದ್ಧಿಗೆ ಮಣ್ಣೆರಚುವ ರೀತಿಯಲ್ಲಿ ಇವರು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಇಂಥ ಕೆಟ್ಟ ಸರಕಾರ ಹಿಂದೆ ಇರಲಿಲ್ಲ, ಮುಂದೆಯೂ ಬರಲ್ಲ ಎಂದು ಕಿಡಿಕಾರಿದರು.
ಸಿಎಂ ಗೆ ಕ್ರಮಕೈಗೊಳ್ಳುವ ಎದೆಗಾರಿಕೆ ಇದೆಯಾ?
ಸೋಮವಾರದ ದಿನ ಕಾಂಗ್ರೆಸ್ ಕಚೇರಿಯಲ್ಲಿ ಸಭೆಯೊಂದು ನಡೆದಿದೆ. ಆ ಸಭೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರೂ ವೀರಾವೇಶದಲ್ಲಿ ಮಾತಾಡಿದ್ದಾರೆ. ಮುಖ್ಯಮಂತ್ರಿ ಪೆನ್‌ಡ್ರೈವ್ʼಗೆ ಪ್ರತಿಯಾಗಿ ಪೆನ್ ತೆಗೆದು ತೋರಿಸಿ ಅಭಿನಯ ಮಾಡಿದ್ದಾರೆ. ಅವರ ಅಭಿನಯಕ್ಕೆ ಉತ್ತರ ಕೊಡದೇ ಇರಲಾರೆ. ನಾನು ಇಡುವ ಸಾಕ್ಷ್ಯಕ್ಕೆ ಪ್ರತಿಯಾಗಿ ಆರೋಪಿತ ವ್ಯಕ್ತಿಯ ಮೇಲೆ ಕ್ರಮ ಜರುಗಿಸುವ ಎದೆಗಾರಿಕೆ ಮುಖ್ಯಮಂತ್ರಿಗೆ ಇದೆಯಾ? ಇದ್ದರೆ ಹೇಳಲಿ ಎಂದು ಮಾಜಿ ಮುಖ್ಯಮಂತ್ರಿಗಳು ಸವಾಲು ಹಾಕಿದರು.
40 ಪರ್ಸೆಂಟ್ ಡಿಮಾಂಡ್ ಮಾಡುತ್ತಿದ್ದಾರೆ ಎಂದು ಗುತ್ತಿಗೆದಾರರು ಹಾದಿ ಬೀದಿಲಿ ಮಾತನಾಡುತ್ತಿದ್ದರು. ಅವರೇ ಬಾಣಲೆಯಿಂದ ಬೆಂಕಿಗೆ ಬಿದ್ದೆವು ಎಂದು ಮಾಧ್ಯಮಗಳಿಗೇ ಹೇಳಿದರು. ಆದರೆ ಈಗ ಅವರ ವರಸೆಯೇ ಬದಲಾಗಿದೆ. ಮನುಷ್ಯನಾದವನಿಗೆ ಗಟ್ಟಿತನ ಬೇಕು, ಧೈರ್ಯವಾಗಿ ಮಾತಾಡಬೇಕು. ನಾನು ವಿದೇಶಕ್ಕೆ ಹೋಗುವ ಮುನ್ನ ಗುತ್ತಿಗೆದಾರರು ನಮ್ಮ ಮನೆಗೆ ಬಂದಿದ್ದರು. ಸಾಕಷ್ಟು ವಿಚಾರ ಚರ್ಚೆ ಮಾಡಿ ತಮ್ಮ ನೋವು ತೋಡಿಕೊಂಡರು. ಅವರಿಗೆ ಬೆಂಬಲ ನೀಡುವುದಾಗಿ ನಾನು ಪ್ರಾಮಾಣಿಕವಾಗಿ ಭರವಸೆ ಕೊಟ್ಟೆ ಎಂದು ಕುಮಾರಸ್ವಾಮಿ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.
ಗುತ್ತಿಗೆದಾರರನ್ನು ತಣ್ಣಗೆ ಮಾಡಿದವರು ಯಾರು?
ಹಗಲಲ್ಲಿ ವೀರಾವೇಶ ತೋರಿ ಅಜ್ಜಯ್ಯನ ಮೇಲೆ ಪ್ರಮಾಣ ಮಾಡಿ ಎಂದು ಸವಾಲು ಹಾಕಿದವರು, ರಾತ್ರಿಯಾಗುವ ಹೊತ್ತಿಗೆ ತಣ್ಣಗಾಗಿದ್ದಾರೆ. ಅವರನ್ನು ತಣ್ಣಗೆ ಮಾಡಿದವರು ಯಾರು? ಅವರ ಮೇಲೆ ಒತ್ತಡ ಹೇರಿ ಮಧ್ಯಸ್ಥಿಕೆ ವಹಿಸಿ, “ನಾನು ಭಾವುಕತೆಯಿಂದ ಈ ಆರೋಪ ಮಾಡಿದೆ” ಎಂದು ಹೇಳಿಕೆ ಕೊಡಿಸಿದರು ಎಂದು ಕುಮಾರಸ್ವಾಮಿ ಅವರು ದೂರಿದರು.
ಆತ್ಮಹತ್ಯೆ ಪ್ರಕರಣದಲ್ಲಿ ದುಡ್ಡು ಕೊಟ್ಟು ಸರಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಶಾಸಕೊಬ್ಬರು ಮಾತಾಡಿದ್ದಾರೆ. ಅವರು ದುಡ್ಡಿನಿಂದ ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ ಎಂದರು.
ನಾನು ಹಿಟ್ ಅಂಡ್ ರನ್ ಅಲ್ಲ :
ಕುಮಾರಸ್ವಾಮಿ ಅವರದು ನಾನು ಹಿಟ್ ಅಂಡ್ ರನ್ ಎಂದಿರುವ ಸಿಎಂಗೆ ಪ್ರಿತಿಕ್ರಿಯಿಸಿ, ನಾನು ಹಿಟ್ ಅಂಡ್ ರನ್ ಎಂದು ಅವರು ಹೇಳುತ್ತಾರೆ. ನಮ್ಮ ಬಳಿ ಇರುವುದು ಖಾಲಿ ಪೆನ್ ಡ್ರೈವ್ ಅಲ್ಲ. ಹಿಂದೆ ವೀರಪ್ಪ ಮೊಯಿಲಿ ಅವರ ಕಾಲದಲ್ಲಿ ಒಂದು ಟೇಪ್ ಆಚೆಗೆ ಬಂತು. ನಮಗೆ ಹಣದ ಆಮಿಷ ಒಡ್ಡಿದರು ಎಂದು ಮಾಧ್ಯಮಗಳ ಮುಂದೆ ನೋಟಿನ ಕಂತೆಗಳನ್ನು ಪ್ರದರ್ಶನ ಮಾಡಿದರು. ಕೊನೆಗೆ ಅದರ ಕಥೆ ಏನಾಯಿತು? ನಾವು ಕೊಡುವ ದಾಖಲೆಗಳನ್ನು ಇವರು ಪ್ರಾಮಾಣಿಕವಾಗಿ ತನಿಖೆ ಮಾಡಿಸುತ್ತಾರಾ? ಸಚಿವರ ವಿರುದ್ಧ ರಾಜ್ಯಪಾಲರಿಗೆ ಬರೆದ ಪತ್ರದ ಬಗ್ಗೆ ತನಿಖೆಗೆ ಮೊದಲೇ ನಕಲಿ ಪತ್ರ ಎಂದರನ್ನು ಹೇಗೆ ನಂಬುವುದು? ಎಂದು ಅವರು ಪ್ರಶ್ನಿಸಿದರು.
Janata Dal (Secular) chief H D Kumaraswamy Tuesday hit out at Congress leaders for calling him a “BJP spokesperson”, and maintained that he was the “spokesperson of the 6 crore people” in Karnataka.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm