ಬ್ರೇಕಿಂಗ್ ನ್ಯೂಸ್
16-08-23 01:10 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ಕಳೆದ ಕೆಲವು ದಿನಗಳಿಂದ ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ 6 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಭಾರತೀಯ ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಡೆಹ್ರಾಡೂನ್, ಪುರಿ, ತೆಹ್ರಿ, ನೈನಿತಾಲ್, ಚಂಪಾವತ್ ಮತ್ತು ಉಧಮ್ ಸಿಂಗ್ ನಗರಗಳು ಸೇರಿದಂತೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ನಡುವೆ ಉತ್ತರಾಖಂಡದಲ್ಲಿ ಮಳೆ ರೌದ್ರನರ್ತನಕ್ಕೆ ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ ಪೀಡಿತ ಪ್ರದೇಶವಾದ ಜೋಶಿಮಠ ಸಮೀಪದ ಹೆಲಾಂಗ್‌ನಲ್ಲಿ ಮಂಗಳವಾರ ತಡರಾತ್ರಿ ಕಟ್ಟಡವೊಂದು ಕುಸಿದುಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆಗಳು ವ್ಯಕ್ತವಾಗಿವೆ. ಈವರೆಗೂ ಮೂವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಯಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ತ್ವರಿತ ಗತಿಯಲ್ಲಿ ನಡೆಸಲಾಗುತ್ತಿದೆ.
ಮಂಗಳವಾರ ತಡರಾತ್ರಿ ಬದರಿನಾಥ ಹೆದ್ದಾರಿಯ ಪಿಪಲ್ಕೋಟಿ ಮತ್ತು ಜೋಶಿಮಠ ನಡುವಿನ ಹೆಲಾಂಗ್ ಗ್ರಾಮದಲ್ಲಿ ಕಟ್ಟಡ ಕುಸಿತ ಸಂಭವಿಸಿದೆ.
ಅಲಕನಂದಾ ನದಿ ದಡದಲ್ಲಿರುವ ಕ್ರಷರ್ ಘಟಕದ ಬಳಿ ಎರಡು ಅಂತಸ್ತಿನ ಮನೆ ನಿರ್ಮಿಸಲಾಗಿದ್ದು, ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಕಟ್ಟಡ ಶಿಥಿಲಾವಸ್ಥೆ ತಲುಪಿದೆ. ಕ್ರಷರ್ ಘಟಕದಲ್ಲಿ ಕೆಲಸ ಮಾಡುವವರು ಈ ಮನೆಯಲ್ಲಿ ವಾಸಿಸುತ್ತಿದ್ದರು. ಈ ಅವಘಡ ಸಂಭವಿಸಿದಾಗ ಕಟ್ಟಡದಲ್ಲಿ ಸಾಕಷ್ಟು ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವರ್ಷದ ಆರಂಭದಲ್ಲಿ ಜೋಶಿಮಠದಲ್ಲಿ ಭೂಕುಸಿತದಿಂದ ಹಲವಾರು ಮನೆಗಳು ಹಾನಿಗೊಳಗಾಗಿದ್ದವು ಮತ್ತು ಮಳೆಗಾಲದ ಆರಂಭದಲ್ಲಿ ಮನೆಗಳಲ್ಲಿ ಮತ್ತೆ ಬಿರುಕು ಕಾಣಿಸಿಕೊಳ್ಳುತ್ತಿದೆ.
ಈ ನಡುವೆ ಮಳೆ ಸೃಷ್ಟಿಸಿದ ಅವಾಂತರಕ್ಕೆ ಹಿಮಾಚಲ ಪ್ರದೇಶದಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ, ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಈ ವರೆಗೂ 66 ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡಿ ಪ್ರದೇಶದಲ್ಲಿ ಅತಿ ಹೆಚ್ಚು ಜನರು ಮೃತಪಟ್ಟಿದ್ದಾರೆ. ಭೂಕುಸಿತದಿಂದ ಹೆದ್ದಾರಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯದಲ್ಲಿ ವಿಪತ್ತು ನಿರ್ವಹಣಾ ತಂಡ ತೊಡಗಿದೆ. ಚಂಡೀಗಢ–ಶಿಮ್ಲಾ ನಡುವಿನ ರಾಷ್ಟ್ರೀಯ ಹೆದ್ದಾರಿಗಳು ಸಂಚಾರಕ್ಕೆ ಮುಕ್ತವಾಗಿದ್ದು, ರಾಜ್ಯ ಹೆದ್ದಾರಿಗಳ ತೆರವಿಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
Incessant rains and landslides killed 66 people in Himachal Pradesh and Uttarakhand as operations continued to rescue the injured and pull out bodies from debris due to house collapses in several places.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm