ಬ್ರೇಕಿಂಗ್ ನ್ಯೂಸ್
16-08-23 09:54 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ಕಟ್ಟಡವೊಂದಕ್ಕೆ 23 ಕಿಲೋವಾಟ್ ಸಾಮರ್ಥ್ಯದ ವಿದ್ಯುತ್ ಸಂಪರ್ಕಕ್ಕೆ ಮಂಜೂರಾತಿ ನೀಡಲು 3.5 ಲಕ್ಷ ಲಂಚ ಪಡೆಯುತ್ತಿದ್ದ ಬೆಸ್ಕಾಂ ಎಸ್–1 ಜಯನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಧನಂಜಯ ಮತ್ತು ಅವರ ಪರವಾಗಿ ಹಣ ಪಡೆದ ಸೈಯದ್ ನಿಜಾಮ್ ಎಂಬ ಖಾಸಗಿ ವ್ಯಕ್ತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕಟ್ಟಡವೊಂದಕ್ಕೆ 23 ಕೆವಿ ಸಾಮರ್ಥ್ಯದ ವಿದ್ಯುತ್ ಸಂಪರ್ಕ ಕೋರಿ ಭರತ್ ಕುಮಾರ್ ಎನ್.ಎಂ. ಎಂಬ ಎಲೆಕ್ಟ್ರಿಕ್ ಕಾಮಗಾರಿಗಳ ಗುತ್ತಿಗೆದಾರ ಬೆಸ್ಕಾಂನ ಜಯನಗರ ಉಪ ವಿಭಾಗ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಮಂಜೂರಾತಿ ನೀಡಲು 13 ಲಕ್ಷ ಲಂಚ ನೀಡುವಂತೆ ಧನಂಜಯ ಬೇಡಿಕೆ ಇಟ್ಟಿದ್ದರು. 3.5 ಲಕ್ಷವನ್ನು ಬುಧವಾರವೇ ತಲಪಿಸುವಂತೆ ಅರ್ಜಿದಾರರಿಗೆ ಸೂಚಿಸಿದ್ದರು.
ಈ ಕುರಿತು ಭರತ್ ಕುಮಾರ್ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರಿಗೆ ದೂರು ನೀಡಿದ್ದರು. ಬೆಸ್ಕಾಂನ ಜಯನಗರ ಉಪ ವಿಭಾಗದ ಕಚೇರಿಯಲ್ಲಿ ದೂರುದಾರರು ಲಂಚದ ಹಣದೊಂದಿಗೆ ಧನಂಜಯ ಅವರನ್ನು ಬುಧವಾರ ಸಂಜೆ 4 ಗಂಟೆಗೆ ಭೇಟಿಮಾಡಿದ್ದರು. ಲಂಚದ ಹಣವನ್ನು ಅಲ್ಲಿಯೇ ಇದ್ದ ಸೈಯದ್ ನಿಜಾಮ್ ಅವರಿಗೆ ತಲುಪಿಸುವಂತೆ ಅಧಿಕಾರಿ ಸೂಚಿಸಿದರು. ಅದರಂತೆಯೇ ಭರತ್ ಕುಮಾರ್ ಹಣವನ್ನು ನೀಡಿದರು. ತಕ್ಷಣ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಧನಂಜಯ ಮತ್ತು ಸೈಯದ್ ನಿಜಾಮ್ ಇಬ್ಬರನ್ನೂ ಬಂಧಿಸಿದ್ದಾರೆ.
ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್‌ಪಿ ಕೆ.ವಿ. ಅಶೋಕ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ವೆಂಕಟೇಶ್ ಕೆ., ವಿಜಯಕೃಷ್ಣ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An Assistant Executive Engineer of BESCOM and a middleman were arrested by Lokayukta officials on Wednesday while they were accepting bribes from an electricity contractor. The AEE, Dhananjaya, and the middleman, Sayid Nizam, were arrested from the BESCOM Sub division office in Jayanagar.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm