ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ ಕರ್ನಾಟಕದಿಂದ ನೆರವು; 15 ಕೋಟಿ ರೂ. ಬಿಡುಗಡೆಗೆ ಸಿಎಂ ಆದೇಶ

21-08-23 08:27 pm       Bangalore Correspondent   ಕರ್ನಾಟಕ

ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ.

ಬೆಂಗಳೂರು, ಆಗಸ್ಟ್ 21: ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಸಂಕಷ್ಟದ ಸಮಯದಲ್ಲಿ ನಮ್ಮ ಸಹೋದರ ಸಹೋದರಿಯರೊಂದಿಗೆ ನಿಲ್ಲುವುದು ಮುಖ್ಯವಾಗಿದೆ. ಕರ್ನಾಟಕದ ಜನರು ಹಿಮಾಚಲ ಪ್ರದೇಶದ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾರೆ ಎಂದು ಹೇಳಿದ್ದಾರೆ.

Centre approves release of Rs 200 crore to flood-hit Himachal Pradesh

ಛತ್ತೀಸ್ ಗಢ ಸರ್ಕಾರ ಕೂಡಾ ಹಿಮಾಚಲ ಪ್ರದೇಶಕ್ಕೆ ನೆರವು ನೀಡಿದ್ದು, ವಿಪತ್ತು ಸಂತ್ರಸ್ತರ ಪರಿಹಾರ ಮತ್ತು ಪುನವರ್ಸತಿಗಾಗಿ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು 11 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ. ಅದೇ ರೀತಿ ರಾಜಸ್ಥಾನ ಸರ್ಕಾರ ಕೂಡಾ 15 ಕೋಟಿ ರೂ. ಆರ್ಥಿಕ ನೆರವನ್ನು ಹಿಮಾಚಲ ಪ್ರದೇಶಕ್ಕೆ ನೀಡಿದೆ.

Karnataka Chief Minister Siddaramaiah has released funds of Rs 15 crore for relief measures in flood-hit Himachal Pradesh. Siddaramaiah took to social media platform X, formerly Twitter, to announce the relief amount and extend support to the state.