ಬ್ರೇಕಿಂಗ್ ನ್ಯೂಸ್
21-08-23 10:52 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 21: ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷರ ಅಧಿಕಾರದ ಅವಧಿಯನ್ನು ಈಗ ಇರುವ ಎರಡೂವರೆ ವರ್ಷದ ಬದಲು ಐದು ವರ್ಷಗಳಿಗೆ ಹೆಚ್ಚಿಸಲು ಕಾಯ್ದೆಗೆ ತಿದ್ದುಪಡಿ ತರುವ ಇಂಗಿತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ಪ್ರಮುಖ ವಿಷಯಗಳಿಗೆ ಸಂಬಂಧಿಸಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಯಿತು. ಕಾಂಗ್ರೆಸ್ ನೇತೃತ್ವದ ಸರ್ಕಾರವು ಹಿಂದಿನ ಅವಧಿಯಲ್ಲಿ ರೂಪಿಸಿದ್ದ ಕಾಯ್ದೆಯಂತೆ ಪಂಚಾಯಿತಿ ಅಧ್ಯಕ್ಷರಿಗೆ ಐದು ವರ್ಷಗಳ ಅಧಿಕಾರ ಅವಧಿ ನೀಡಲು ಕಾಯ್ದೆಗೆ ಪುನಃ ತಿದ್ದುಪಡಿ ತರುವ ವಿಷಯ ಸಭೆಯಲ್ಲಿ ಪ್ರಸ್ತಾಪವಾಯಿತು.
ಈ ವಿಷಯವನ್ನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಂಡಿಸಿ, ಶಾಸಕರ ಅಭಿಪ್ರಾಯ ಆಲಿಸಿದ ಬಳಿಕ ಮುಂದುವರಿಯಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.
ಹಿಂದಿನ ಐದು ವರ್ಷಗಳ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ₹ 10,500 ಕೋಟಿ ಮೊತ್ತದ 37,000 ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ₹ 3,500 ಕೋಟಿ ಮಾತ್ರ ಅನುದಾನ ಒದಗಿಸಲಾಗಿತ್ತು. ಈ ಕಾಮಗಾರಿಗಳಿಗೆ ₹ 7,000 ಕೋಟಿ ಬಿಡುಗಡೆ ಮಾಡಬೇಕಿದೆ. ಹಳೆಯ ಬಾಕಿ ಬಿಲ್ ಭಾರ ಹೆಚ್ಚಿರುವುದರಿಂದ ಈ ವರ್ಷವೇ ₹ 3,500 ಕೋಟಿ ಅಗತ್ಯವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆಗೆ ಶಾಸಕರಿಂದ ಮನವಿಗಳು ಬರುತ್ತಲೇ ಇವೆ. ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ (ಕೆಆರ್‌ಐಡಿಎಲ್) ಅಗತ್ಯವಿಲ್ಲದಿದ್ದರೂ 800 ಮಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದು, ಈ ಹೊರೆಯನ್ನು ತಗ್ಗಿಸಬೇಕು ಎಂದು ಖರ್ಗೆ ಪ್ರಸ್ತಾಪಿಸಿದ್ದಾರೆ. ಇದಲ್ಲದೆ, ಕಲ್ಯಾಣ ಕರ್ನಾಟಕ ಭಾಗದ ಗ್ರಾಮ ಪಂಚಾಯಿತಿಗಳಿಗೆ ಮುಂದಿನ ವರ್ಷದಿಂದ ತಲಾ ₹ 1 ಕೋಟಿ ಅನುದಾನ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
Chief Minister Siddaramaiah has proposed to amend the Act to increase the tenure of presidents of gram panchayats, taluk panchayats and zilla panchayats to five years from the existing two-and-a-half years.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm