ಬ್ರೇಕಿಂಗ್ ನ್ಯೂಸ್
25-08-23 03:35 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 25: ಚಂದ್ರಯಾನ 3 ಯಶಸ್ಸಿನ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ (ಆ.26) ಬೆಂಗಳೂರಿನ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಗೆ ಭರ್ಜರಿ ಸ್ವಾಗತ ನೀಡಲು ಬಿಜೆಪಿ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ.
ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ನಡುವೆ ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರವೂ ಮುಂದೂಡಲ್ಪಡುತ್ತಿದೆ. ರಾಜ್ಯ ಘಟಕದ ನಾಯಕತ್ವದ ಬಗ್ಗೆ ಕೇಂದ್ರದ ವರಿಷ್ಠರಿಗೂ ಉತ್ತಮ ಅಭಿಪ್ರಾಯ ಇಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಎಲ್ಲಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬೆಂಗಳೂರು ಭೇಟಿ ಸಮಯವನ್ನು ಸದುಪಯೋಗ ಮಾಡಿಕೊಳ್ಳಲು ರಾಜ್ಯ ಬಿಜೆಪಿ ಮುಂದಾಗಿದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ ರೋಡ್ ಶೋ ಹಮ್ಮಿಕೊಳ್ಳಲು ನಿರ್ಧಾರ ಚಿಂತನೆ ನಡೆಸುತ್ತಿದೆ. ಆದರೆ ರೋಡ್ ಶೋಗೆ ಇನ್ನೂ ಅನುಮತಿ ಸಿಕ್ಕಿಲ್ಲ ಎಂಬ ಮಾಹಿತಿ ಇದೆ.
ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪ್ರಧಾನಿ ಮೋದಿ ಅವರು ನೇರವಾಗಿ ಬೆಂಗಳೂರಿಗೆ ಬರುತ್ತಾರೆ. ಬಳಿಕ ಇಸ್ರೋ ವಿಜ್ಞಾನಿಗಳ ಜತೆ ಸಭೆ ನಡೆಸುತ್ತಾರೆ. ಬೆಳಗ್ಗೆ ಸ್ವಾಗತ ಕಾರ್ಯಕ್ರಮ ಇದೆ. ಆದರೆ ರೋಡ್ ಶೋ ಕುರಿತಾಗಿ ಯಾವುದೇ ಯೋಜನೆ ಆಗಿಲ್ಲ ಎಂದರು.
ಪ್ರಧಾನಿ ಮೋದಿ ಆಗಮನದ ಹಿನ್ನಲೆಯಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತ ಇರಲಿದೆ. ಇದರ ಹೊರತಾಗಿಬೇರೆ ಕಾರ್ಯಕ್ರಮ ಇರುವುದಿಲ್ಲ ಎಂದು ತಿಳಿಸಿದರು.
ಸಂಚಾರದಲ್ಲಿ ಬದಲಾವಣೆ ;
ಪ್ರಧಾನಿ ಮೋದಿಯವರ ಸ್ವಾಗತಕ್ಕೆ ಎಚ್‌ಎಎಲ್ ಏರ್‌ಪೋರ್ಟ್‌ನಲ್ಲಿಹೆಚ್ಚಿನ ಜನರನ್ನು ಸೇರಿಸಲು ಬಿಜೆಪಿಯು ಸಿದ್ಧತೆ ಮಾಡಿಕೊಳ್ಳುತ್ತಿದೆ. ಜತೆಗೆ, ಎಚ್‌ಎಎಲ್ ಬಳಿಯೇ ಮೋದಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆಯಿದೆ. ನಂತರ ಎಚ್‌ಎಎಲ್‌ನಿಂದ ರಸ್ತೆ ಮಾರ್ಗವಾಗಿ ಪೀಣ್ಯದ ಇಸ್ರೋಗೆ ತೆರಳಲಿದ್ದಾರೆ. ಹೀಗಾಗಿ, ಭದ್ರತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಹಲವು ರಸ್ತೆಗಳಲ್ಲಿ ಶನಿವಾರ ಬೆಳಗಿನ ಜಾವ 4.30ರಿಂದ 9.30ರವರೆಗೆ ಪೊಲೀಸರು ತಾತ್ಕಾಲಿಕವಾಗಿ ವಾಹನ ಸಂಚಾರ ನಿರ್ಬಂಧಿಸಲಿದ್ದಾರೆ.
ಹಳೆ ವಿಮಾನ ನಿಲ್ದಾಣ ರಸ್ತೆ, ಹಳೆ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ (ಮೇಖ್ರಿ ಸರ್ಕಲ...), ಸಿ.ವಿ.ರಾಮನ್ ರಸ್ತೆ, ಯಶವಂತಪುರ ಮೇಲ್ಸೇತುವೆ, ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರವರೆಗೆ), ಮಾಗಡಿ ರಸ್ತೆ, ಹೊರವರ್ತುಲ ರಸ್ತೆ (ಗೊರಗುಂಟೆ ಪಾಳ್ಯ ಜಂಕ್ಷನ್‌ನಿಂದ ಸುಮನಹಳ್ಳಿವರೆಗೆ), ಗುಬ್ಬಿ ತೋಟದಪ್ಪ ರಸ್ತೆ ಮತ್ತು ಜಾಲಹಳ್ಳಿ ಕ್ರಾಸ್ ರಸ್ತೆಯ ಸಂಚಾರ ವ್ಯವಸ್ಥೆಯಲ್ಲಿಬದಲಾವಣೆ ಮಾಡಲಾಗುತ್ತದೆ. ಸಾರ್ವಜನಿಕರು ಈ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗಗಳಲ್ಲಿಸಂಚರಿಸಬೇಕು. ನಗರದೊಳಗೆ ಬೆಳಗಿನ ಜಾವ 4 ಗಂಟೆಯಿಂದ 11 ಗಂಟೆವರೆಗೆ ಭಾರಿ ಸರಕು ಸಾಗಣೆ ವಾಹನಗಳ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
Prime Minister Narendra Modi will be in Bengaluru on August 26, to greet the ISRO scientists and officials for the successful landing of Candrayaan-3's lander and deployment of rover on moon's surface.The Karnataka BJP is planning a grand welcome for the Prime Minister by organising a mega road show in the city on his arrival, senior BJP leader and former Minister R Ashoka said on Thursday.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm