ಬ್ರೇಕಿಂಗ್ ನ್ಯೂಸ್
28-08-23 10:44 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 28: ಫೇಸ್ಬುಕ್ ನಲ್ಲಿ ಅವಾಚ್ಯವಾಗಿ ಟೀಕೆ ಮಾಡಿದ್ದಾರೆಂದು ಕಾಂಗ್ರೆಸ್ ನಾಯಕಿಯೊಬ್ಬರು ನೀಡಿದ ದೂರಿನಂತೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಸ್ಟ್ 24ರಂದು ಕಾಂಗ್ರೆಸ್ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ದೂರು ದಾಖಲಿಸಿದ್ದರು. ಆರೋಪ ಸಾಬೀತಾದರೆ ಒಂದು ವರ್ಷ ಜೈಲು ಹಾಗೂ ದಂಡ ವಿಧಿಸಬಹುದು. ಫೇಸ್ಬುಕ್ನಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.
ಚಂದ್ರಯಾನ 3 ಯಶಸ್ವಿ ಆಗಲಿ ಎಂದು ಚಕ್ರವರ್ತಿ ಸೂಲಿಬೆಲೆ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು. ಪೋಸ್ಟಿಗೆ ಕಮೆಂಟ್ ಮಾಡಿದ್ದ ಸೌಗಂಧಿಕಾ ರಘುನಾಥ್, ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದು ತಮ್ಮ ಅಭಿಪ್ರಾಯ ಬರೆದಿದ್ದರು.
ಇದಕ್ಕೆ ಚಕ್ರವರ್ತಿ ಸೂಲಿಬೆಲೆ, “ನಿನಗೆ ಎಲ್ಲಿ, ಯಾಕೆ ಉರಿ ಬಂತೋ ಗೊತ್ತಿಲ್ಲ” ಎಂದು ಕಮೆಂಟ್ ಹಾಕಿದ್ದರು. ತನ್ನ ಬಗ್ಗೆ ಫೇಸ್ಬುಕ್ನಲ್ಲಿ ಅವಾಚ್ಯವಾಗಿ ಕಾಮೆಂಟ್ ಹಾಕಿದ್ದಾರೆ ಎಂದು ಸೌಗಂಧಿಕಾ ಆರೋಪಿಸಿ ದೂರು ನೀಡಿದ್ದಾರೆ.
Complaint lodged against Chakravarty Sulibele in Shivamogga for bad comment against women in Facebook.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 12:41 pm
HK News Desk
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm