CM Siddaramaiah, BJP: ಬಿಜೆಪಿ ಸರ್ಕಾರದಲ್ಲಿ ನಡೆದ ಎಲ್ಲಾ ಹಗರಣಗಳ ತನಿಖೆ ಮಾಡ್ತೀವಿ ; ತನಿಖೆ ವಿಚಾರದಲ್ಲಿ ಟಾರ್ಗೆಟ್ ಎಂಬ ಪ್ರಶ್ನೆಯೇ ಇಲ್ಲ ಎಂದ ಸಿಎಂ 

29-08-23 01:02 pm       HK News Desk   ಕರ್ನಾಟಕ

ಕಳೆದ ಅವಧಿಯಲ್ಲಿ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದಲ್ಲಿ ನಡೆದ ಎಲ್ಲಾ ಹಗರಣಗಳ  ಬಗ್ಗೆಯೂ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ಮೈಸೂರು, ಆಗಸ್ಟ್ 29: ಕಳೆದ ಅವಧಿಯಲ್ಲಿ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದಲ್ಲಿ ನಡೆದ ಎಲ್ಲಾ ಹಗರಣಗಳ  ಬಗ್ಗೆಯೂ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಹಗರಣದ ತನಿಖೆ ವಿಚಾರದಲ್ಲಿ ಟಾರ್ಗೆಟ್ ಎಂಬ ಪ್ರಶ್ನೆಯೇ ಇಲ್ಲ. ಪಿಎಸ್ಐ ಹಗರಣ, 40% ಹಗರಣ, ಕೋವಿಡ್ ಹಗರಣ ಎಲ್ಲವನ್ನೂ ತನಿಖೆಗೆ ಒಳಪಡಿಸಿದ್ದೇವೆ. ಹಗರಣದ ಬಗ್ಗೆ ತನಿಖೆ ಮಾಡದೆ ಇವರು ತಿಂದುಕೊಂಡು ಹಾಗೇ ಹೋಗಲಿ ಎಂದು ಬಿಡಬೇಕಾ? ಅವರ ಕಾಲದಲ್ಲೇ ಹಗರಣದ ತನಿಖೆಗೆ ಆಗ್ರಹಿಸಿದ್ದೇವೆ. ಅವರು ತನಿಖೆ ಮಾಡಿಸಲಿಲ್ಲ. ಹೀಗಾಗಿ ನಾವು ತನಿಖೆ ಮಾಡಿಸುತ್ತಿದ್ದೇವೆ ಎಂದು ಹೇಳಿದರು.

ರಾಜ್ಯ ಸರ್ಕಾರ 100 ದಿನ ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ‌. ಖುದ್ದು ಪಿಎಂ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ ರಾಜ್ಯ ಸರ್ಕಾರ ಯಾವ ದಿವಾಳಿಯೂ ಆಗಿಲ್ಲ. ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದರು.

Karnataka CM Siddaramaiah launches registration for 'Gruha Lakshmi' scheme  | Bengaluru - Hindustan Times

ಇನ್ನು ಗೃಹ ಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತೆ ಎಂದ ಸಿದ್ದರಾಮಯ್ಯ, ದೇಶದ ಇತಿಹಾಸದಲ್ಲೇ ಒಂದು ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ಹೇಳಿದರು.

DK Shivakumar: Priority is to bring Congress back in karnataka, not CM seat  | Bengaluru News - Times of India

ಡಿ.ಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವಿನ ಸಂಬಂಧದ ಬಗ್ಗೆ ವಿಪಕ್ಷಗಳು ಟೀಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ವಿರೋಧ ಪಕ್ಷಗಳು ಎಷ್ಟು ನಮ್ಮನ್ನ ದೂರ ಮಾಡಲು ಯತ್ನ ಮಾಡುತ್ತಿದ್ಧಾರೋ ನಾವಿಬ್ಬರು ಅಷ್ಟು ಹತ್ತಿರವಾಗುತ್ತಿದ್ದೇವೆ ಎಂದು ಹೇಳಿದರು.

ಇದೇ ಪ್ರಶ್ನೆಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ವಿರೋಧ ಪಕ್ಷಗಳು ನಮ್ಮ ಸಂಬಂಧ, ವಿಚಾರ ಮಾತನಾಡುತ್ತಲೇ ಇರಲಿ. ನಾವು ಮಾತ್ರ ಸದಾ ಒಟ್ಟಾಗಿರುವುದನ್ನ ನೀವು ನೋಡುತ್ತಾ ಇರುತ್ತೀರಿ ಎಂದು ಹೇಳಿದರು.

CM Siddaramaiah says all charges of corruption against BJP will be investigated. No Target all that are involved in corruption charges they will be taken action he added in Mysuru.