ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು ; ದಿಢೀರ್ ಆಸ್ಪತ್ರೆಗೆ ದಾಖಲು, ಅಪೋಲೊ ವೈದ್ಯರಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

30-08-23 03:15 pm       Bangalore Correspondent   ಕರ್ನಾಟಕ

ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ತಡರಾತ್ರಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ, ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು, ಆಗಸ್ಟ್ 30: ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ತಡರಾತ್ರಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ, ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ದಕ್ಕಿದ್ದಂತೆ ಸುಸ್ತು ಮತ್ತು ವೀಕ್ನೆಸ್ ಕಾಣಿಸಿಕೊಂಡ ಹಿನ್ನೆಲೆ ನಸುಕಿನ ಜಾವ 3.40ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕುಮಾರಸ್ವಾಮಿ ಅವರ ಆರೋಗ್ಯ ಕುರಿತಾಗಿ ಜಯನಗರದ ಅಪೋಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಡಾಕ್ಟರ್ ಪಿ.ಸತೀಶ್​ ಚಂದ್ರ & ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಜೊತೆಗೆ ಅವರ ಆರೋಗ್ಯ ಸ್ಥಿತಿಯನ್ನು ಗಮನಿಸಲಾಗುತ್ತಿದೆ ಎಂದು ವೈದ್ಯರ ತಂಡ ಹೇಳಿದೆ. 

ಎಚ್.ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಜೊತೆಗೆ ನಿಂತಿದ್ದಾರೆ. ಇದರ ಬೆನ್ನಲ್ಲೇ ಮಗನ ಆರೋಗ್ಯ ವಿಚಾರಿಸಲು ದೇವೆಗೌಡರು ಆಸ್ಪತ್ರೆಗೆ ಆಗಮಿಸಿದ್ದಾರೆ. ವೀಕ್ನೆಸ್ ಮತ್ತು ಸುಸ್ತಾಗಿ ಕುಮಾರಸ್ವಾಮಿ ಬಳಲುತ್ತಿದ್ದರು. ಚಿಕಿತ್ಸೆ ಕೊಡಲಾಗಿದ್ದು, ಚಿಕಿತ್ಸೆಗೆ ಸಕಾರಾತ್ಮಕ ವಾಗಿ ಸ್ಪಂದಿಸುತ್ತಿದ್ದಾರೆ. ಈಗ ಅವರ ಆರೋಗ್ಯ ಸ್ಥಿತಿ ಚೇತರಿಕೆ ಕಂಡಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರಾದ ಡಾ. ಪಿ. ಸತೀಶ್ ಚಂದ್ರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌. 

ಮೂರು ತಿಂಗಳ ಹಿಂದೆ ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ವೇಳೆ ಕುಮಾರಸ್ವಾಮಿಗೆ ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿತ್ತು. ಈ ವೇಳೆ ಸಣ್ಣ ಪ್ರಮಾಣದಲ್ಲಿ ಲಂಗ್ಸ್​ ಇನ್ಫೆಕ್ಷನ್ ಹಾಗೂ ಡಸ್ಟ್​ ಅಲರ್ಜಿ ಇರುವುದು ತಿಳಿದುಬಂದಿತ್ತು. ಆಗ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚುನಾವಣೆ ಫಲಿತಾಂಶದ ನಂತರ ವಿಶ್ರಾಂತಿಗಾಗಿ ಕುಟುಂಬದ ಜೊತೆಗೆ ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ತೆರಳಿದ್ದರು.

Former Chief Minister and senior JD(S) leader H.D. Kumaraswamy got admitted to a private hospital on Wednesday morning after he complained of fever. Sources close to him said that Kumaraswamy developed fever and fatigue due to hectic activity in the last week.