ಬ್ರೇಕಿಂಗ್ ನ್ಯೂಸ್
31-08-23 09:48 pm HK News Desk ಕರ್ನಾಟಕ
ಮಂಡ್ಯ, ಆಗಸ್ಟ್ 31: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ ಹಾಗೂ ಟಿಬೆಟಿಯನ್ ಧರ್ಮಗುರು ದಲೈಲಾಮಾ ಡಿಸೆಂಬರ್ ತಿಂಗಳಲ್ಲಿ ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ತಾಲೂಕಿನ ಹಲ್ಲೇಗೆರೆಯಲ್ಲಿ ಭೂತಾಯಿ ಟ್ರಸ್ಟ್ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರಕ್ಕೆ(ಮದರ್ ಆಫ್ ಅರ್ಥ್) ಇಬ್ಬರೂ ಗಣ್ಯರು ಶಂಕುಸ್ಥಾಪನೆ ನೆರವೇರಿಸುವರು.
ಈ ಹಿನ್ನೆಲೆಯಲ್ಲಿ ಭೂತಾಯಿ ಟ್ರಸ್ಟ್ ನ ಅಧ್ಯಕ್ಷರೂ ಆದ ಅಮೆರಿಕದ ವೈದ್ಯ ಡಾ.ಲಕ್ಷ್ಮೀ ನರಸಿಂಹಮೂರ್ತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿಯಾಗಿ ಸಮಾಲೋಚನೆ ನಡೆಸಿತು.
ಸಿಎಂ ಜೊತೆ ಮಾತುಕತೆ
ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರವು ಹಲ್ಲೇಗೆರೆ ಗ್ರಾಮ ಅಥವಾ ಮಂಡ್ಯ ಜಿಲ್ಲೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ನಿಯೋಗದ ಸದಸ್ಯರು ಕೇಂದ್ರದ ಕರ‍್ಯ ಸ್ವರೂಪವನ್ನು ಮುಖ್ಯಮಂತ್ರಿಗೆ ವಿವರಿಸಿದರು. ಜತೆಗೆ ಟ್ರಸ್ಟ್ ಮಾಡುತ್ತಿರುವ ಸಾಮಾಜಿಕ ಕಾರ್ಯ ಹಾಗೂ ಕೋವಿಡ್ ಸಂದರ್ಭದಲ್ಲಿ ಮಂಡ್ಯ ಮತ್ತು ಮಡಿಕೇರಿ ಜಿಲ್ಲೆಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಕೋವಿಡ್ ನಿಯಂತ್ರಣ ಪರಿಕರಗಳನ್ನು ವಿತರಿಸಿದ ಬಗ್ಗೆ ಮಾಹಿತಿ ನೀಡಿದರು.
ಭೂತಾಯಿ ಟ್ರಸ್ಟ್ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರವನ್ನು ಸ್ಥಾಪಿಸುವ ಮಹದಾಶಯ ಹೊಂದಿದೆ. ಇದರ ಶಂಕುಸ್ಥಾಪನೆಗಾಗಿ ಬರಾಕ್ ಒಬಾಮಾ ದಂಪತಿ ಹಾಗೂ ಟಿಬೆಟಿಯನ್ ಧರ್ಮಗುರು ದಲೈಲಾಮಾ ಆಗಮಿಸುವರು. ಹೀಗಾಗಿ ಹಲ್ಲೇಗೆರೆ ಗ್ರಾಮದಲ್ಲಿ ಹೆಲಿಪ್ಯಾಡ್, ರಸ್ತೆ ನಿರ್ಮಾಣ, ವಿದ್ಯುತ್ ದೀಪಗಳ ವ್ಯವಸ್ಥೆ, ಚರಂಡಿ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸರಕಾರದಿಂದ ಒದಗಿಸಿಕೊಡಬೇಕೆಂದು ನಿಯೋಗದ ಸದಸ್ಯರು ಮುಖ್ಯಮಂತ್ರಿಗೆ ಮನವಿ ಮಾಡಿದರು.
ಸಿಎಂ ಸಕಾರಾತ್ಮಕ ಸ್ಬಂದನೆ
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, ನೀವು ಮಾಡುವ ಒಳ್ಳೆಯ ಕಾರ್ಯಗಳಿಗೆ ನಿಮ್ಮೊಂದಿಗೆ ನಾವಿರುತ್ತೇವೆ. ಗ್ರಾಮಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಜತೆಗೆ ಸರ್ಕಾರದಿಂದ ಎಲ್ಲ ರೀತಿಯ ಬೆಂಬಲ ನೀಡಲಾಗುವುದು. ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತೇನೆ" ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ಶಾಸಕರಾದ ದಿನೇಶ್ ಗೂಳಿಗೌಡ, ಪಿ.ರವಿಕುಮಾರ್, ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಅಮೆರಿಕದ ಅಕ್ಕ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಮೂರ್ತಿ ಕೀಲಾರ ಇತರರಿದ್ದರು.
ಅಮೆರಿಕ ಹಾಲಿ ಅಧ್ಯಕ್ಷ ಜೋ ಬೈಡನ್ ಅವರ ವೈದ್ಯಕೀಯ ಸಲಹೆಗಾರ ಡಾ.ವಿವೇಕ್ ಮೂರ್ತಿ ಅವರು ಭಾರತೀಯ ಮೂಲದವರು. ಡಾ.ವಿವೇಕ ಮೂರ್ತಿ ಅಮೆರಿಕದ ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೂ ವೈದ್ಯಕೀಯ ಸಲಹೆಗಾರರಾಗಿದ್ದರು.
ಡಾ.ವಿವೇಕ್ ಮೂರ್ತಿ ಅವರ ತಂದೆ, ಅನಿವಾಸಿ ಭಾರತೀಯ ಡಾ.ಲಕ್ಷ್ಮೀನರಸಿಂಹ ಮೂರ್ತಿ(ಎಲ್.ಎನ್.ಮೂರ್ತಿ) ಅವರು ತಮ್ಮ ಮಾತೃಭೂಮಿಯ ಅಭ್ಯುದಯಕ್ಕೆ ಪಣ ತೊಟ್ಟಿದ್ದಾರೆ. ಅವರ ಸ್ವಂತ ಊರು ಮಂಡ್ಯ ಜಿಲ್ಲೆಯ ಹಲ್ಲೇಗೆರೆ ಗ್ರಾಮದಲ್ಲಿನ 13 ಎಕರೆ ಪಿತ್ರಾರ್ಜಿ ಜಮೀನಿನಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಭೂತಾಯಿ ಟ್ರಸ್ಟ್ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಯೋಗ ಮತ್ತು ಧ್ಯಾನ ಕೇಂದ್ರ ತೆರೆಯಲು ಯೋಜಿಸಿ, ಕಾರ್ಯ ಪ್ರವೃತ್ತರಾಗಿದ್ದಾರೆ.
ಭೂತಾಯಿ ಟ್ರಸ್ಟಿನಿಂದ ಮೂರ್ತಿ ಕುಟುಂಬವು ಮಹತ್ತರ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ. ಇತ್ತೀಚೆಗೆ ಎಲ್.ಎನ್.ಮೂರ್ತಿ ಅವರನ್ನು ಮಂಡ್ಯದಲ್ಲಿ ನಾನಾ ಸಂಘಸಂಸ್ಥೆಗಳು ಸನ್ಮಾನಿಸಿ ಗೌರವಿಸಿದ್ದವು.
ಸ್ಥಳೀಯ ಸಹಕಾರ ಟ್ರಸ್ಟ್ ಕಾರ್ಯಗಳಿಗೆ ಮಂಡ್ಯ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡುತ್ತಿದೆ. ಮಾತೃಭೂಮಿ ಟ್ರಸ್ಟ್ ಗೆ ಶಾಶಕ ದಿನೇಶ್ ಗೂಳಿಗೌಡ ಅವರು ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನವನ್ನು ನೀಡುವುದಾಗಿ ಘೋಷಿಸಿದ್ದಾರೆ.
Barack Obama couple to visit Mandya karnataka in December.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm