ಬ್ರೇಕಿಂಗ್ ನ್ಯೂಸ್
01-09-23 03:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 1: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆ ಅನೂರ್ಜಿತಗೊಂಡಿದೆ. ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಚುನಾವಣಾ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿ ಅನೂರ್ಜಿತಗೊಳಿಸಿದೆ. ಪ್ರಜ್ವಲ್ ರೇವಣ್ಣ ಈಗ ಅನರ್ಹತೆ ಭೀತಿಯಲ್ಲಿದೆ. ಲೋಕಸಭಾ ಚುನಾವಣೆಗೆ 6 ತಿಂಗಳು ಇರುವಾಗ ಆಯ್ಕೆ ಅಸಿಂಧುವಾಗಿರುವುದು, ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾಗಿದೆ.
ನ್ಯಾಯಮೂರ್ತಿ ಕೆ ನಟರಾಜನ್ ನೇತೃತ್ವದ ಪೀಠದಿಂದ ಆದೇಶ ಪ್ರಕಟವಾಗಿದೆ. ಹಾಲಿ ಜೆಡಿಎಸ್ ಶಾಸಕರಾಗಿರುವ ಎ ಮಂಜು ತಾವು ಬಿಜೆಪಿಯಲ್ಲಿದ್ದಾಗ ಪ್ರಜ್ವಲ್ ರೇವಣ್ಣ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅಕ್ರಮ ಎಸಗಿರುವುದರಿಂದ ತಮ್ಮನ್ನು ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಕೋರಿದ್ದ ಪರಾಜಿತ ಅಭ್ಯರ್ಥಿ ಮಂಜು ಮನವಿ ಪುರಸ್ಕರಿಸಲು ನ್ಯಾಯಾಲಯ ನಿರಾಕರಿಸಿದೆ. ಅರ್ಜಿದಾರರು ಚುನಾವಣಾ ಅಕ್ರಮ ಎಸಗಿರುವುದರಿಂದ ಅವರನ್ನೂ ವಿಜೇತ ಅಭ್ಯರ್ಥಿ ಎಂದು ಘೋಷಿಸಲಾಗದು ಎಂದು ನ್ಯಾಯಾಲಯ ಆದೇಶಿಸಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿಯನ್ನು ನೀಡಿದ್ದರು ಎಂದು ಆರೋಪಿಸಲಾಗಿತ್ತು. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಎ ಮಂಜು ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದರು. ಈ ಬಗ್ಗೆ ಚುನಾವಣಾ ಆಯೋಗವು ಕೂಡ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿತ್ತು. ಹಲವು ವಿಚಾರಣೆಗಳನ್ನು ಕೂಡ ನಡೆಸಲಾಗಿತ್ತು.
ಒಂದು ವೇಳೆ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತ ಗೊಳಿಸಿದರೆ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಗಳಿಸಿದ ಎರಡನೇ ಅಭ್ಯರ್ಥಿಯಾಗಿರುವ ತಮ್ಮನ್ನೇ ಆಯ್ಕೆಯಾದ ಅಭ್ಯರ್ಥಿ ಎಂದು ಪರಿಗಣಿಸಬೇಕು ಎಂದು ಎ ಮಂಜು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ದೇವರಾಜೇಗೌಡ ಅವರಿಂದ ಕೂಡ ದೂರು!
ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ವಕೀಲ ಹಾಗೂ ಕೆಡಿಪಿ ಮಾಜಿ ಸದಸ್ಯ ಜಿ ದೇವರಾಜೇಗೌಡ 2019ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಪ್ರಜ್ವಲ್ ರೇವಣ್ಣ ಅವರು ಪ್ರಮಾಣ ಪತ್ರದಲ್ಲಿ ಹಲವಾರು ಸುಳ್ಳು ಮಾಹಿತಿಗಳನ್ನು ನೀಡಿದ್ದು ಅವರ ನಾಮಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವಂತೆ ಜಿ ದೇವರಾಜೇಗೌಡ ತಮ್ಮ ದೂರಿನಲ್ಲಿ ತಿಳಿಸಿದ್ದರು. ಈ ಹಿನ್ನೆಲೆ ಕೂಲಂಕುಷವಾಗಿ ಪರಿಶೀಲನೆ ನಡೆಸಿ ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗವು ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.
ಪ್ರಜ್ವಲ್ ರೇವಣ್ಣಗೆ ಅನರ್ಹತೆ ಭೀತಿ
ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಹೈಕೋರ್ಟ್ ಅನೂರ್ಜಿತಗೊಳಿಸಿರುವ ಕಾರಣ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಪ್ರಜ್ವಲ್ ರೇವಣ್ಣ ಅವರನ್ನು ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಬಹುದು. ಹಾಗಾಗಿ, ಈಗ ಪ್ರಜ್ವಲ್ ರೇವಣ್ಣ ಅವರು 30 ದಿನಗಳ ಒಳಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಅಲ್ಲಿ ಹೈಕೋರ್ಟ್ ತೀರ್ಪಿಗೆ ತಡೆ ಪಡೆದರೆ ಮಾತ್ರ ಪ್ರಜ್ವಲ್ ರೇವಣ್ಣ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ ಎಂಬುದು ಕಾನೂನು ತಜ್ಞರ ಅಭಿಪ್ರಾಯವಾಗಿದೆ. ಒಂದು ವೇಳೆ ಅನರ್ಹಗೊಂಡರೆ 6 ವರ್ಷ ಪ್ರಜ್ವಲ್ ರೇವಣ್ಣ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.
The Karnataka High Court has disqualified JD(S) leader Prajwal Revanna as a Member of Parliament from the Hassan district over irregularities in his 2019 general poll affidavit. The decision was made by a single bench judge, K Natrajan.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:23 pm
HK News Desk
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm