Over 70 Snakes, 6 Monkeys Seized, Bangalore Airport:ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಲಗೇಜ್​ನಲ್ಲಿ ಹೆಬ್ಬಾವು, ಕಿಂಗ್ ಕೋಬ್ರಾ, ಕೋತಿಗಳು ಸೇರಿದಂತೆ ಒಟ್ಟು 78 ಪ್ರಾಣಿಗಳು ಪತ್ತೆ ;  ಬೆಚ್ಚಿಬಿದ್ದ ಅಧಿಕಾರಿಗಳು 

07-09-23 10:58 pm       HK News Desk   ಕರ್ನಾಟಕ

ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಲಗೇಜ್​ಗಳನ್ನ ತಪಾಸಣೆ ಮಾಡಿದಾಗ ಆತನ ಸೂಟ್ ಕೇಸ್​ನಲ್ಲಿ 20 ವಿಷಕಾರಿ ಕಿಂಗ್ ಕೋಬ್ರಾಗಳು ಪತ್ತೆಯಾಗಿವೆ. ಹೆಬ್ಬಾವು, ಕೋತಿಗಳು ಸೇರಿದಂತೆ ಒಟ್ಟು 78 ಪ್ರಾಣಿಗಳು ಪತ್ತೆಯಾಗಿವೆ.

ದೇವನಹಳ್ಳಿ,  ಸೆ.7: ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಲಗೇಜ್​ಗಳನ್ನ ತಪಾಸಣೆ ಮಾಡಿದಾಗ ಆತನ ಸೂಟ್ ಕೇಸ್​ನಲ್ಲಿ 20 ವಿಷಕಾರಿ ಕಿಂಗ್ ಕೋಬ್ರಾಗಳು ಪತ್ತೆಯಾಗಿವೆ. ಹೆಬ್ಬಾವು, ಕೋತಿಗಳು ಸೇರಿದಂತೆ ಒಟ್ಟು 78 ಪ್ರಾಣಿಗಳು ಪತ್ತೆಯಾಗಿವೆ.

ಸೆಪ್ಟೆಂಬರ್​ 6 ರಂದು ಬ್ಯಾಂಕಾಕ್​ನಿಂದ ದೇವನಹಳ್ಳಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕ ಬಂದಿಳಿದ್ದಿದ್ದು, ರಾತ್ರಿ 10:30ಕ್ಕೆ ಫ್ಲೈಟ್ ನಂ. ಎಫ್‌ಡಿ 137 ಏರ್ ಏಷ್ಯಾ ವಿಮಾನದಲ್ಲಿ ಬಂದ ಪ್ರಯಾಣಿಕನ ಲಗೇಜ್ ಗಳನ್ನ ಪರಿಶೀಲನೆ ಮಾಡಿದಾಗ ಸೂಟ್ ಕೇಸ್​ನಲ್ಲಿ 20 ಜೀವಂತ ಕಿಂಗ್ ಕೋಬ್ರಾಗಳು ಪತ್ತೆಯಾಗಿದೆ. ಜೊತೆಗೆ 55 ಬಾಲ್ ಹೆಬ್ಬಾವುಗಳು ಪತ್ತೆಯಾಗಿದೆ. 6 ಕಪುಚಿನ್ ಮಂಗಗಳು ಸತ್ತಿರುವುದು ಕಂಡುಬಂದಿದೆ. ಒಟ್ಟು 78 ಪ್ರಾಣಿಗಳನ್ನ ಪ್ರಯಾಣಿಕ ಅಕ್ರಮವಾಗಿ ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯಿದೆ, 1972 ರ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

As many as 20 baby king cobras and other snakes, including ball pythons were found in the suitcase of a Tamil Nadu man who landed in Bengaluru Airport from Bangkok on Wednesday night.