ಬ್ರೇಕಿಂಗ್ ನ್ಯೂಸ್
11-09-23 12:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.11: ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಕುರಿತ ವದಂತಿಗಳಿಗೆ ಕಡೆಗೂ ತೆರೆ ಬಿದ್ದಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಖಚಿತವಾಗಿದ್ದು, ಹೆಚ್‌ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರೇ ಈ ಬಗ್ಗೆ ಖಚಿತಪಡಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಈ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ನಾನು ದೆಹಲಿಗೆ ಹೋಗಿದ್ದೂ ನಿಜ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೂ ನಿಜ ಎಂದು ದೇವೇಗೌಡರು ಹೇಳಿದ್ದಾರೆ.
ಕುಮಾರಸ್ವಾಮಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ವಿಶೇಷ ಪ್ರೀತಿ, ವಿಶ್ವಾಸ ಇದೆ. 2018ರಲ್ಲಿಯೇ ದೆಹಲಿಯಲ್ಲಿ ಒಮ್ಮೆ, "ಈ ಕೂಡಲೇ ರಾಜೀನಾಮೆ ನೀಡಿ. ನಾಳೆಯೇ ಹೊಸದಾಗಿ ಪ್ರಮಾಣ ಸ್ವೀಕಾರ ಮಾಡಿ. ಬಿಹಾರದ ನಿತೀಶ್ ಕುಮಾರ್ ಅವರಂತೆ ನಿಮ್ಮನ್ನೂ ದೀರ್ಘಾವಧಿ ಮುಖ್ಯಮಂತ್ರಿಯನ್ನಾಗಿ ಮಾಡುವುದು ನನ್ನ ಜವಾಬ್ದಾರಿ ಎಂದು ಹೇಳಿದ್ದರು. ಆದರೆ, ನನ್ನನ್ನು ನೋಡಿಕೊಂಡು ಕುಮಾರಸ್ವಾಮಿ ಅವರು ಮೋದಿ ಅವರ ಆಫರ್ ಅನ್ನು ನಯವಾಗಿ ತಿರಸ್ಕರಿಸಿದ್ದರು ಎನ್ನುವ ವಿಚಾರವನ್ನು ತಿಳಿಸಿದ್ದಾರೆ.
ಹೊಸ ಮೈತ್ರಿ ಮಾತುಕತೆಯ ನೈತಿಕತೆ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ. ನಾನು ದೆಹಲಿಯಲ್ಲಿ ಯಾರನ್ನು ಭೇಟಿ ಮಾಡಿದೆ ಎನ್ನುವುದರಲ್ಲಿ ರಹಸ್ಯ ಏನೂ ಇಲ್ಲ. ಆದರೆ, ನೈತಿಕತೆ ಬಗ್ಗೆ ಮಾತನಾಡುವ ರಾಜ್ಯದ ಯಾವ್ಯಾವ ನಾಯಕರಿಗೆ ಅದೆಷ್ಟು ನೈತಿಕತೆ ಇದೆ ಎಂದು ನಾನು ವಿಶ್ಲೇಷಣೆ ಮಾಡಬಲ್ಲೆ. ಆದರೆ, ವ್ಯಕ್ತಿಗತ ನಿಂದನೆ ಮಾಡುವುದು ನನ್ನ ಉದ್ದೇಶ ಅಲ್ಲ, ಈ 91ನೇ ವಯಸ್ಸಿನಲ್ಲಿ ಅಂಥ ನಿಂದನೆಯಿಂದ ನಾನೇನು ಸಾಧಿಸ್ತೀನಿ ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ನಾಯಕರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದು ಹೌದು. ದೇವೇಗೌಡ ಮತ್ತೆ ಪ್ರಧಾನಿ ಆಗೋದಕ್ಕೆ ಈ ಭೇಟಿ ಮಾಡಿದ್ದಲ್ಲ, ನಮ್ಮ ಪಕ್ಷ ಉಳಿಸುವುದಕ್ಕಷ್ಟೆ ಈ ಭೇಟಿ. ಆದರೆ ನಾವು ಯಾವ ಸೀಟನ್ನು ಕೇಳಲಿಲ್ಲ. ಹಾಗೆಂದು ಜೆಡಿಎಸ್‌ನಲ್ಲಿ ಏನೂ ಇಲ್ಲ ಎಂದು ಯಾರೂ ಭಾವಿಸಬಾರದು. ಈ ಬಗ್ಗೆ ಬಿಜೆಪಿ ನಾಯಕರಿಗೆ ಮಾತುಕತೆಯ ವೇಳೆಯೇ ಹೇಳಿದ್ದೇನೆ. ಮಂಡ್ಯದಲ್ಲಿ ಬಿಜೆಪಿ ಮತಗಳು ಇಲ್ಲವೇ? ರಾಮನಗರದಲ್ಲಿ ಬಿಜೆಪಿಯ ಓಟ್ ಇಲ್ವೇ? ಕೋಲಾರ, ತುಮಕೂರಿನಲ್ಲಿ ಇಲ್ವೇ? ವಿಜಯಪುರದಲ್ಲಿ, ರಾಯಚೂರಿನಲ್ಲಿ ನನ್ನ ಪಕ್ಷದ ಶಕ್ತಿ ಕೊಟ್ಟರೆ ಮಾತ್ರ ಬಿಜೆಪಿ ಗೆಲ್ಲುತ್ತೆ ಎಂದು ಹೇಳಿದ್ದೇನೆ. ಬೀದರ್ ನಲ್ಲಿ ಎರಡು ಕ್ಷೇತ್ರಗಳಲ್ಲಿ ನಮ್ಮ ಶಕ್ತಿ ಇದೆ. ಚಿಕ್ಕಮಗಳೂರಿನ ಲೋಕಸಭೆ ಕ್ಷೇತ್ರದಲ್ಲಿಯೂ ನಮ್ಮ ಶಕ್ತಿ ಇದೆ. ನಾನು ವಿನಮ್ರವಾಗಿ ಈ ವಿಷಯ ತಿಳಿಸಿದ್ದೇನೆ ಎಂದು ಮೈತ್ರಿ ಬಗ್ಗೆ ಮಾಹಿತಿ ನೀಡಿದರು. ಅಂತಿಮವಾಗಿ ಎಷ್ಟು ಸೀಟು ಹಂಚಿಕೆ ಮಾಡಿಕೊಳ್ಳಬೇಕೆಂದು ಕುಮಾರಸ್ವಾಮಿ ತೀರ್ಮಾನ ಮಾಡುತ್ತಾರೆ ಎಂದು ದೇವೇಗೌಡರು ಹೇಳಿದರು.
Former Prime Minister and JD(S) supremo HD Deve Gowda on Sunday officially confirmed the party's alliance with the BJP. Announcing that JD(S) will fight together with the BJP, Gowda said that the alliance is necessary to save the regional party.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm