ಬ್ರೇಕಿಂಗ್ ನ್ಯೂಸ್
13-09-23 08:21 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13: ಕಳೆದ 123 ವರ್ಷಗಳಲ್ಲೇ ರಾಜ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ತಮಿಳುನಾಡಿಗೆ ಇನ್ನೂ 15 ದಿನ ನಿತ್ಯ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕರೆಯಲಾಗಿತ್ತು.
ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಬರ ಇದೆ. ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಕೊರತೆಯಾಗಿದೆ. ಡ್ಯಾಂಗಳಲ್ಲಿ ನೀರಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗುವ ಸಾಧ್ಯತೆ ಇದೆ. ಇಂತಹ ಸಂದಿಗ್ಥ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದರು.
ತಮಿಳುನಾಡಿಗೆ ನಿತ್ಯ 5000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ(CWRC) ಆದೇಶ ನೀಡಿದೆ. ಇದನ್ನು ಮರು ಪರಿಶೀಲನೆ ಮಾಡುವಂತೆ ಮನವಿ ಮಾಡಲು ನಿರ್ಧರಿಸಿದ್ದೇವೆ. ವಸ್ತುಸ್ಥಿತಿ ವಿವರಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೆ ಪತ್ರ ಬರೆಯುತ್ತೇವೆ ಎಂದು ಸಿಎಂ ತಿಳಿಸಿದರು.
ನೀರು ಬಿಡಬೇಕಾ ಬೇಡವಾ ಎಂಬ ಬಗ್ಗೆ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗುವುದು ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ಕಾನೂನು ತಂಡದೊಂದಿಗೆ ಚರ್ಚಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಮಿತಿಯ ಮುಂದೆ ಮತ್ತೊಂದು ಅರ್ಜಿ ಹಾಕುತ್ತೇವೆ. ಸುಪ್ರೀಂಕೋರ್ಟ್ಗೆ ವಾಸ್ತವಾಂಶ ತಿಳಿಸುವ ಕೆಲಸ ಮಾಡುತ್ತೇವೆ. ಸೆಪ್ಟೆಂಬರ್ 11 ರ ತನಕ ನಾವು 99 ಟಿಎಂಸಿ ನೀರಿನ ಬದಲು 37 ಟಿಎಂಸಿ ಮಾತ್ರ ಬಿಟ್ಟಿದ್ದೇವೆ. ನಾವೀಗ ಸಂಪೂರ್ಣ ನೀರು ಬಿಡ್ತಿಲ್ಲ. ಬೆಳೆ ಉಳಿಸಿಕೊಳ್ಳಲು ನಮಗೆ 70 ಟಿಎಂಸಿ ಬೇಕು. 30 ಟಿಎಂಸಿ ಕುಡಿಯುವ ನೀರು ಹಾಗೂ 3 ಟಿಎಂಸಿ ಕೈಗಾರಿಕೆಗೆ ಬೇಕು. ನಮ್ಮ ಬಳಿ ಈಗ ಇರುವುದು 53 ಟಿಎಂಸಿ ಮಾತ್ರ. ನಾಲ್ಕು ಜಲಾಶಯಗಳಿಂದ ಕೇವಲ 53 ಟಿಎಂಸಿ ನೀರು ಮಾತ್ರ ನಮ್ಮತ್ರ ಇದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಕಾವೇರಿ ನದಿಯ ಒಳಹರಿವು 30 ವರ್ಷಗಳಲ್ಲೇ ಕಡಿಮೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಕಾವೇರಿ ನದಿಯ ಒಳಹರಿವು 30 ವರ್ಷಗಳಲ್ಲೇ ಅತ್ಯಂತ ಕಡಿಮೆಯಾಗಿದೆ. ನೈಋತ್ಯ ಮಾನ್ಸೂನ್ ಮುಗಿಯುವ ಹಂತದಲ್ಲಿದೆ. ಜಲಾಶಯಗಳಿಗೆ ಒಳ ಹರಿವಿನ ಪ್ರಮಾಣ ಕ್ಷೀಣಿಸುತ್ತಿದ್ದು, ಈಗಿರುವ ನೀರನ್ನು ನಮ್ಮ ಅಗತ್ಯಗಳಿಗೆ ಕಾಯ್ದಿರಿಸಬೇಕಾಗಿದೆ ಎಂದು ಹೇಳಿದ್ದಾರೆ.
ಮೂರು ದಶಕಗಳಲ್ಲಿ ಸರಾಸರಿ ಶೇ.54 ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದಲ್ಲಿ ಬೆಳೆದಿರುವ ಬೆಳೆಗಳಿಗೆ 70.20 ಟಿಎಂಸಿ ನೀರು ಬೇಕು. ಕುಡಿಯುವ ನೀರಿನ ಉದ್ದೇಶಕ್ಕೆ 2024ರ ಸೆಪ್ಟೆಂಬರ್‌ನಿಂದ ಜುಲೈವರೆಗೆ 33 ಟಿಎಂಸಿ, ಕೈಗಾರಿಕೆಗಳ ಬಳಕೆಗೆ 3 ಟಿಎಂಸಿ ಅಗತ್ಯವಿದೆ. ಒಟ್ಟಾರೆ ಕರ್ನಾಟಕಕ್ಕೆ 106.20 ಟಿಎಂಸಿ ನೀರು ಬೇಕು ಎಂದು ವಿವರಿಸಿದರು.
ಆದರೆ, ಕಾವೇರಿ ಕಣಿವೆಯ ರಾಜ್ಯದ ನಾಲ್ಕು ಜಲಾಶಯಗಳಲ್ಲಿ ಲಭ್ಯವಿರುವ ಲೈವ್ ಸ್ಟೋರೇಜ್ 53.287 ಟಿಎಂಸಿ ಎಂದು ಡಿಸಿಎಂ ತಿಳಿಸಿದ್ದಾರೆ.
Karnataka Chief Minister Siddaramaiah on Wednesday said that his state is facing a severe rain deficit due to which it is not in a position to release water from the Cauvery river to Tamil Nadu. He said that the government has decided to make an application before the Cauvery River Regulatory Committee again, stating that the state has no water.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm