ಬ್ರೇಕಿಂಗ್ ನ್ಯೂಸ್
14-09-23 10:37 am Bangalore Correspondent ಕರ್ನಾಟಕ
ಬೆಂಗಳೂರು, ಸೆ.14: ಬೈಂದೂರು ವಿಧಾನಸಭಾಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ ಎಸಗಿದ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧಿತರಾದ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ಐದು ಮಂದಿಯನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣ ಪ್ರಮುಖ ಆರೋಪಿತೆಯಾಗಿರುವ ಚೈತ್ರಾ ಕುಂದಾಪುರ, ರಮೇಶ್, ದೇವರಾಜ್, ಶ್ರೀಕಾಂತ್, ಪ್ರಜ್ವಲ್ ಅವರನ್ನು ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಬಂಧಿಸಿ ಬುಧವಾರ ಸಿಸಿಬಿ ಕಚೇರಿಗೆ ಅಧಿಕಾರಿಗಳು ಕರೆತಂದರು.
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಗಳನ್ನ ಹಾಜರುಪಡಿಸಿದರು. ಆರೋಪಿಗಳ ವಿರುದ್ಧ 5 ಕೋಟಿಗೂ ಹೆಚ್ಚು ಹಣ ವಂಚನೆ ಇದ್ದು, ಕೃತ್ಯ ಎಸಗಲು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದರು. ಬಂಧಿತರಿಂದ ಹಣವನ್ನ ರಿಕವರಿ ಮಾಡಿಕೊಳ್ಳಬೇಕಿದೆ. ಈ ಸಂಬಂಧ 10 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಬೇಕು ಎಂದು ಸಿಸಿಬಿ ಪರ ವಕೀಲರು ಮನವಿ ಮಾಡಿದರು. ಮನವಿಗೆ ಪುರಸ್ಕರಿಸಿದ ನ್ಯಾಯಾಲಯವು ಸೆ.23ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿತು. ಪ್ರಕರಣದ ಮತ್ತೊಬ್ಬ ಆರೋಪಿತ ಗಗನ್ ಕಡೂರು ಎಂಬಾತನ್ನ ನಿನ್ನೆ ಬಂಧಿಸಿ ಈಗಾಗಲೇ ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ಚುರುಕುಗೊಳಿಸಿದ ಸಿಸಿಬಿ:
ಪ್ರಕರಣದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶಾಮೀಲಾಗಿರುವ ಆರು ಮಂದಿ ಆರೋಪಿಗಳನ್ನ ಹೆಚ್ಚು ವಿಚಾರಣೆಗೊಳಪಡಿಸಲಾಗಿದೆ. ಗೋವಿಂದಬಾಬು ಪೂಜಾರಿ ಹೇಗೆ ಪರಿಚಯವಾಯಿತು ? ಬಿಜೆಪಿಯಿಂದ ಟಿಕೆಟ್ ನೀಡುವುದಾಗಿ ಆಮಿಷವೊಡ್ಡಿ ಹೇಗೆ ವಂಚಿಸಲಾಯಿತು ಎಂಬುದರ ಬಗ್ಗೆ ಚೈತ್ರಾ ಕುಂದಾಪುರಗೆ ತನಿಖಾಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ. ಸಹ ಆರೋಪಿಗಳಿಗೆ ದೊಡ್ಡಮಟ್ಟದಲ್ಲಿ ವಂಚನೆ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದಿರಲಿಲ್ಲ ಎಂಬುವುದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ.
ಸ್ವಾಮೀಜಿ ಅಭಿನವ ಹಾಲಶ್ರೀಗಾಗಿ ಶೋಧ:
ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿಜಯನಗರದವ ಹಾಲಶ್ರೀ ಮಠದ ಅಭಿನವ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಅಜ್ಞಾತ ವಾಸದಲ್ಲಿದ್ದಾರೆ. ಪತ್ತೆಗಾಗಿ ಸಿಸಿಬಿ ಶೋಧ ಕಾರ್ಯ ಚುರುಕುಗೊಳಿಸಲಾಗಿದೆ. ವಿಚಾರಣೆ ಮುಕ್ತಾಯದ ಬಳಿಕ ಡೈರಿ ವೃತ್ತದಲ್ಲಿರುವ ಮಹಿಳಾ ಸ್ವಾಂತನ ಕೇಂದ್ರಕ್ಕೆ ಚೈತ್ರಾಳನ್ನ ಬಿಡಲಾಗಿದ್ದು, ಇಂದು ಸಿಸಿಬಿ ಕಚೇರಿಗೆ ಕರೆತಂದು ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.
ಪೊಲೀಸರ ಕಣ್ತಪ್ಪಿಸಿ ಕಾಂಗ್ರೆಸ್ ಜೊತೆ ಗುರುತಿಸಿಕೊಂಡ ಮುಸ್ಲಿಂ ಗೆಳತಿಯ ಮನೆಯಲ್ಲಿ ಅವಿತಿದ್ದ ಚೈತ್ರಾ ;
ಸೆ. 12 ರಾತ್ರಿ ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ಸ್ಥಳದಲ್ಲಿ ಚೈತ್ರಾ ಸಿಕ್ಕಿಬಿದ್ದಿದ್ದಾಳೆ. ಇನ್ನು ಇದಕ್ಕೂ ಮೊದಲು ಚೈತ್ರಾ ಕಾಂಗ್ರೆಸ್ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದಳು ಎನ್ನುವ ಮಾಹಿತಿ ತಿಳಿದುಬಂದಿದೆ. ಇದೀಗ ಆರೋಪಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಿದೆ.
ನಾನು ನಮ್ಮ ಮನೆಯಲ್ಲಿ ಯಾವುದೇ ಆಶ್ರಯ ಕೊಟ್ಟಿಲ್ಲ. ಇದೆಲ್ಲವೂ ಸುಳ್ಳು ಸುದ್ದಿ. ನನಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಸ್ಪಷ್ಟಪಡಿಸಿದ್ದಾರೆ.
ಕಳೆದ 7 ದಿನಗಳಿಂದ ನಾನು ಚೈತ್ರಾಳಿಗೆ ಆಶ್ರಯ ಕೊಟ್ಟಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ವಂಚನೆ ಪ್ರಕರಣದ ಎಫ್‌ಐಆರ್ ದಾಖಲಾಗಿರುವುದೇ ಸೆಪ್ಟೆಂಬರ್ 8 ರಂದು. ಮತ್ತೆ ಹೇಗೆ 7 ದಿನಗಳಿಂದ ಆಶ್ರಯ ನೀಡುವುದಕ್ಕೆ ಸಾಧ್ಯ? ಸುಳ್ಳು ಸುದ್ದಿಯಿಂದ ನನಗೆ ಮಾನಸಿಕವಾಗಿ ನೋವು ಆಗಿದೆ ಎಂದರು.
ಸುದ್ದಿವಾಹಿನಿಯಲ್ಲಿ ಕೆಲಸ ಮಾಡಿದ್ದೆವಷ್ಟೇ ;
ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ನಾವಿಬ್ಬರೂ ಕೆಲಸ ಮಾಡಿದ್ದೆವು. ಆಕೆಯ ಸಂಪರ್ಕ ಸಂಖ್ಯೆ ಇದೆ. ಆ ಬಳಿಕ ನಮ್ಮ ನಡುವೆ ಬೇರೆ ಯಾವ ರೀತಿಯ ಸಂಬಂಧವೂ ಇಲ್ಲ. ಸಿಸಿಬಿ ಪೊಲೀಸರು ಶ್ರೀಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ವಶಪಡೆದಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಆದರೂ ನನ್ನ ಮನೆಯಲ್ಲಿ ಎನ್ನುವ ಸುಳ್ಳು ಸುದ್ದಿಯನ್ನು ಹರಿ ಬಿಡಲಾಗುತ್ತಿದೆ. ನನಗೆ ಸಿಸಿಬಿ ಪೊಲೀಸರಿಂದ ಯಾವ ನೋಟಿಸ್‌ವೂ ಬಂದಿಲ್ಲ. ಕಾಲ್ ರೆಕಾರ್ಡ್ ಪರಿಶೀಲನೆ ಮಾಡುತ್ತಾರೆ ಎಂದು ಸುರಯ್ಯ ಅಂಜುಂ ತಿಳಿಸಿದರು.
Chaitra Kundapur and 5 others to CCB Police custody for 10 days, Investigation reveals that Chaitra took shelter in Congress leader Suraiya Anjum house. Chaitra Kundapur, along with her associates, extorted Rs 7 crore to a businessman from Byndur, believing that he would be given a ticket by the BJP in the last assembly elections. The letter that he was cheated on went viral on social media.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
13-02-25 10:08 am
Mangalore Correspondent
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm