ಬ್ರೇಕಿಂಗ್ ನ್ಯೂಸ್
20-09-23 06:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.20: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದಿರುವ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ವೇದಾಂತ ಗುರುಕುಲಂ ಸಂಸ್ಕೃತ ಕಾಲೇಜಿಗೆ ತುಳು ಭಾಷಾ ಅಲ್ಪಸಂಖ್ಯಾತ ಸಂಸ್ಥೆಯೆಂದು ಪರಿಗಣಿಸಿ ಮಾನ್ಯತೆ, ಸ್ಥಾನಮಾನ ನೀಡಬೇಕು ಎಂದು ಕಾಲೇಜಿನ ಪ್ರಾಂಶುಪಾಲರು ರಾಜ್ಯದ ಕಾಲೇಜು ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.
ಸಾಂವಿಧಾನಿಕ ಮಾನ್ಯತೆ ಇಲ್ಲದೆ, ಸರಕಾರದ ಪ್ರೋತ್ಸಾಹವಿಲ್ಲದೆ, ಅಲ್ಪಸಂಖ್ಯಾತರ ಭಾಷೆಯಾಗಿ ಉಳಿದು ತುಳು ಭಾಷೆ ನಲುಗಿದೆ. ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಬೇಕು ಎಂದು ತುಳು ಭಾಷಿಕರು ಒತ್ತಾಯ ಮಾಡುತ್ತಿರುವ ನಡುವೆಯೇ ಪೂರ್ಣಪ್ರಜ್ಞ ವಿದ್ಯಾಪೀಠದ ಸಂಸ್ಕೃತ ಕಾಲೇಜು ಪ್ರಾಂಶುಪಾಲರು ಪತ್ರ ಬರೆದಿದ್ದು ಸರ್ಕಾರದ ಗಮನ ಸೆಳೆದಿದ್ದಾರೆ.
ಸಂಸ್ಕೃತ ವಿಷಯವನ್ನು ಬೋಧಿಸುತ್ತಿರುವ ಈ ಕಾಲೇಜಿಗೆ ತುಳು ಭಾಷಾ ಅಲ್ಪಸಂಖ್ಯಾತರ ಸ್ಥಾನಮಾನ ಕೋರಿರುವುದು ಉನ್ನತ ಶಿಕ್ಷಣ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪೂರ್ಣ ಪ್ರಜ್ಞ ವಿದ್ಯಾಪೀಠದ ವೇದಾಂತ ಗುರುಕುಲಂ ಸಂಸ್ಕೃತ ವಿಷಯವನ್ನು ಬೋಧಿಸುತ್ತಿದೆ. ಈ ಕಾಲೇಜನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಟ್ರಸ್ಟಿಯಾಗಿರುವ ಪೇಜಾವರ ಅಧೋಕ್ಷಜ ಟ್ರಸ್ಟ್ ನಡೆಸುತ್ತಿದೆ. ಅಲ್ಲದೆ, ಈ ಕಾಲೇಜಿಗೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯವು ಮಾನ್ಯತೆ ನೀಡಿದೆ. ಸಂಸ್ಕೃತದ ವಿವಿಧ ವಿಷಯಗಳಲ್ಲಿ ಬಿಎ ಮತ್ತು ಎಂಎ ಕೋರ್ಸ್ಗಳನ್ನು ನಡೆಸುತ್ತಿದೆ.
ಕಾಲೇಜಿಗೆ ತುಳು ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯನ್ನಾಗಿ ಚಾಲ್ತಿಯಲ್ಲಿರುವ ಕಾಯ್ದೆ, ನಿಯಮಗಳ ಅಡಿಯಲ್ಲಿ ಪರಿಗಣಿಸಿ ಮಾನ್ಯತೆ ನೀಡಬೇಕು ಎಂದು ಪತ್ರದಲ್ಲಿ ಕೋರಲಾಗಿದೆ. ತುಳು ಭಾಷೆಯನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ರಚಿಸಿದ್ದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ನೇತೃತ್ವದ ತಂಡವು ಈಗಾಗಲೇ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.
ಕಳೆದ ಬಾರಿ ಅಧಿವೇಶನದಲ್ಲಿ ಚರ್ಚೆಗೆ ಬಂದ ಸಂದರ್ಭದಲ್ಲಿ ಮೋಹನ್ ಆಳ್ವ ವರದಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಭಿಪ್ರಾಯ ಪಡೆಯುವಂತೆ ಸಿದ್ದರಾಮಯ್ಯ ಸರಕಾರ ಸೂಚಿಸಿತ್ತು. ಕರಾವಳಿ ಸೇರಿದಂತೆ ದೇಶ- ವಿದೇಶದಲ್ಲಿ ನೆಲೆಸಿರುವ ಸುಮಾರು ಒಂದು ಕೋಟಿ ಜನ ತುಳು ಭಾಷಿಕರಿದ್ದಾರೆ. 1994ರಲ್ಲಿ ವೀರಪ್ಪ ಮೊಯ್ಲಿ ಸಿಎಂ ಆಗಿದ್ದಾಗ ತುಳು ಅಕಾಡೆಮಿ ಆರಂಭಿಸಲಾಗಿತ್ತು. 2007ರಲ್ಲಿ ಕೇರಳ ಸರಕಾರ ತುಳು ಅಕಾಡಮಿ ಆರಂಭಿಸಿತ್ತು. ಅಮೆರಿಕದ ವಿಶ್ವವಿದ್ಯಾನಿಲಯದಲ್ಲಿ 133 ಜಾಗತಿಕ ಭಾಷೆಗಳ ಪೈಕಿ 17 ಭಾರತೀಯ ಭಾಷೆಗಳಿವೆ. ಅದರಲ್ಲಿ ತುಳು ಭಾಷೆ ಒಂದು ಎಂಬುದಾಗಿ ವಿಧಾನ ಮಂಡಲದ ಅಧಿವೇಶನದಲ್ಲಿ ಅಶೋಕ್ ಕುಮಾರ್ ರೈ ವಿವರಿಸಿದ್ದರು.
The principal of Poornaprajna Vidyapeetha Vedanta Gurukulam Sanskrit College in Bengaluru, which is accredited by the Karnataka Sanskrit University, has written to the state's college education department seeking recognition and status as a Tulu language minority institution.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm