Kpcc M Lakshman, Chaitra Kundapur: ಚೈತ್ರಾಳಿಂದ 17 ಜನರಿಗೆ ಮೋಸ ; ಬಿಜೆಪಿ ಟಿಕೆಟ್ ಡೀಲ್ ನಲ್ಲಿ 40 ಜನ ಇದ್ದಾರೆ, 185 ಕೋಟಿ ಅವ್ಯವಹಾರ ಆಗಿದೆ ; ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ

20-09-23 09:37 pm       HK News Desk   ಕರ್ನಾಟಕ

ಚೈತ್ರಾ ಕುಂದಾಪುರ ಅವರಿಂದ ಒಟ್ಟು 17ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದಾರೆ. 23 ಮಂದಿಗೆ ಟಿಕೆಟ್ ಕೊಡಿಸಿ ಅವರಿಂದ ಹಣ ಪಡೆದಿದ್ದಾರೆ. 40 ಜನರು ಈ ಟಿಕೆಟ್ ಪಡೆಯುವ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ.

ಮೈಸೂರು, ಸೆ.20: ಚೈತ್ರಾ ಕುಂದಾಪುರ ಅವರಿಂದ ಒಟ್ಟು 17ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದಾರೆ. 23 ಮಂದಿಗೆ ಟಿಕೆಟ್ ಕೊಡಿಸಿ ಅವರಿಂದ ಹಣ ಪಡೆದಿದ್ದಾರೆ. 40 ಜನರು ಈ ಟಿಕೆಟ್ ಪಡೆಯುವ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. 185 ಕೋಟಿ ರೂಪಾಯಿ ಕೈ ಬದಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9 ಜನರ ತಂಡ ಕಟ್ಟಿಕೊಂಡು ಮೋಸ ಮಾಡಿದ್ದಾರೆ. ಇವರೆಲ್ಲಾ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರು. ಇನ್ನೆರಡು ದಿನಗಳಲ್ಲಿ ಚೈತ್ರಾ ಕುಂದಾಪುರ ಪ್ರಕರಣದ ಎಲ್ಲ ವಿವರ ಬಹಿರಂಗ ಆಗಲಿದೆ. 

ಚೈತ್ರಾ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಜೊತೆ ನೇರ ಸಂಪರ್ಕ ಹೊಂದಿದ್ದಾರೆ. ಸಿ.ಟಿ.ರವಿ, ಬಿ.ಎಸ್.ಯಡಿಯೂರಪ್ಪ, ಸೂಲಿಬೆಲೆ ಜೊತೆ ಈಕೆಯ ಸಂಬಂಧ ಏನು ಎಂಬುದನ್ನು ಸ್ಪಷ್ಟ ಪಡಿಸಬೇಕು. ಚೈತ್ರಾ ಬಿಜೆಪಿ ಅವಧಿಯಲ್ಲಿ ನಡೆದಿರುವ ಪಿಎಸ್ಐ ಅಕ್ರಮ ಸೇರಿ ನಾಲ್ಕು ಹಗರಣಗಳಲ್ಲಿ ಭಾಗಿಯಾಗಿರುವ ಮಾಹಿತಿಗಳಿವೆ. ಚೈತ್ರಾಗೆ ಜೈಲಿನಲ್ಲಿರುವ ವ್ಯಕ್ತಿಗಳ ಜೊತೆಗೂ ನೇರ ಸಂಪರ್ಕ ಇದೆ ಎಂದು ಲಕ್ಷ್ಮಣ್ ಹೇಳಿದ್ದಾರೆ.

KPCC spokesperson M Lakshman Slams Chaitra Kundapur says 17 have been cheated, 185 crore dealing has been done.