ಬ್ರೇಕಿಂಗ್ ನ್ಯೂಸ್
22-09-23 04:36 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.22: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಗರದ ಆರ್.ಎಮ್.ಸಿ.ಯಾರ್ಡ್ ಬಳಿ ನಡೆದಿದೆ. ಮನಮೋಹನ್ (31) ಹಾಗೂ ನಿಖಿಲ್ (25) ಮೃತರು.
ಇಂದು ಮುಂಜಾನೆ 3:30ರ ಸಮಯದಲ್ಲಿ ಬಿಎಂಡಬ್ಲೂ (BMW) ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಅವಘಡ ಸಂಭವಿಸಿದೆ.
ಇಬ್ಬರು ಯುವಕರು ಸ್ನೇಹಿತರೊಂದಿಗೆ ಪಾರ್ಟಿ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದರು. ಈ ಸಂದರ್ಭದಲ್ಲಿ ಮಾರ್ಗಮಧ್ಯೆ ನಿಯಂತ್ರಣ ಕಳೆದುಕೊಂಡ ಬೈಕ್ ಕಂಬಕ್ಕೆ ಡಿಕ್ಕಿಯಾಗಿದೆ. ಇಬ್ಬರು ಬೈಕ್‌ನಿಂದ ಹಾರಿ ಕೆಲವು ಮೀಟರ್‌ಗಳಷ್ಟು ದೂರ ಬಿದ್ದಿದ್ದಾರೆ. ಪರಿಣಾಮ, ತೀವ್ರ ರಕ್ತಸ್ರಾವ ಉಂಟಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮದ್ಯಪಾನ ಮಾಡಿರುವುದು, ಹೆಲ್ಮೆಟ್ ಧರಿಸದೇ ಅತಿ ವೇಗವಾಗಿ ಬೈಕ್ ಚಾಲನೆ ಮಾಡಿರುವುದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BMW bike accident in Bangalore, two youths killed after bike lost control. It is said that the youths were not wearing helmet and is said to be drunk.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm