ಬ್ರೇಕಿಂಗ್ ನ್ಯೂಸ್
10-11-20 01:21 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 10 : ಸಿಲಿಕಾನ್ ಸಿಟಿಯ ಮೈಸೂರು ರಸ್ತೆಯ ಬಾಪೂಜಿ ನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಕ್ಕಪಕ್ಕದ ವ್ಯಾಪಾರ ಕೇಂದ್ರಗಳಿಗೂ ಬೆಂಕಿ ಹಬ್ಬಿಕೊಂಡಿದೆ. ಬೆಂಕಿಯಿಂದಾಗಿ ಪರಿಸರದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಮತ್ತು ಪೊಲೀಸರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಫ್ಯಾಕ್ಟರಿಯಲ್ಲಿ ಪೇಂಟ್ ಮತ್ತು ಥಿನ್ನರ್ ಉತ್ಪಾದನೆಯಾಗುತ್ತಿದ್ದು ಇದಕ್ಕೆ ಸುಲಭದಲ್ಲಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಅದರ ಮಾಲೀಕ ನಾಪತ್ತೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಕಾಣಿಸಿಕೊಂಡಿದೆ. ಅಕ್ಕಪಕ್ಕದ ಮನೆಗಳ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಭಾರೀ ಹೊಗೆಯಿಂದಾಗಿ ಅಲ್ಲಿ ಉಸಿರುಕಟ್ಟುವ ವಾತಾವರಣ ಉಂಟಾಗಿದೆ. ಫ್ಯಾಕ್ಟರಿ ಹೊರಗೆ ನಿಲ್ಲಿಸಿದ್ದ ವಾಹನಗಳಿಗೂ ಬೆಂಕಿ ಹತ್ತಿಕೊಂಡಿದೆ.

ಕಾರಿನ ಶೆಡ್ ಮೂಲಕ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಇಡೀ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಜನನಿಬಿಡ ಪ್ರದೇಶದಲ್ಲಿ ಈ ಕಾರ್ಖಾನೆ ಇದ್ದು, ಕೂಡಲೇ ಅಲ್ಲಿನ ಸ್ಥಳೀಯರು ಮನೆ ಬಿಟ್ಟು ಹೊರಗೆ ಓಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಪೊಲೀಸರು ಮತ್ತು ಎಂಟು ಅಗ್ನಿಶಾಮಕ ವಾಹನಗಳು ಹಾಗೂ ಸಿಬಂದಿಗಳ ಜೊತೆ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
A massive fire broke out in a chemical factory in West Bengaluru on Tuesday morning, sending the locals in a state of frenzy.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm