ಬ್ರೇಕಿಂಗ್ ನ್ಯೂಸ್
10-11-20 03:13 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 10: ಆರ್.ಆರ್. ನಗರ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. 25ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಮುನಿರತ್ನ 1,25,665 ಮತಗಳನ್ನು ಪಡೆದಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸಿನ ಕುಸುಮಾ 67,995 ಮತಗಳನ್ನು ಗಳಿಸಿದ್ದಾರೆ.
ಮುನಿರತ್ನ ಈ ಕ್ಷೇತ್ರದಲ್ಲಿ ಸತತ ಮೂರನೇ ಗೆಲುವು ದಾಖಲಿಸಿದಂತಾಗಿದ್ದು, 57,672 ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ. ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರು 40 ಸಾವಿರ ಮತಗಳಿಂದ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದರು. ಆದರೆ, ನಿರೀಕ್ಷೆಗೂ ಮೀರಿದ ಮತಗಳನ್ನು ಮುನಿರತ್ನ ಪಡೆದಿದ್ದು ವಿಶೇಷ. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 9764 ಮತಗಳನ್ನಷ್ಟೇ ಪಡೆದಿದ್ದಾರೆ.
ಶಿರಾದಲ್ಲಿ ಅರಳಿದ ಕಮಲ
ತುಮಕೂರಿನ ಶಿರಾ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಹತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ದಾಖಲಿಸಿದ್ದಾರೆ. ಶಿರಾ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದ್ದು ಹೊಸ ಬೆಳವಣಿಗೆ. ರಾಜೇಶ್ ಗೌಡ 69,559 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ 58,190 ಮತಗಳನ್ನು ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ 32,508 ಮತಗಳನ್ನು ಪಡೆದಿದ್ದಾರೆ.
ಬಿಜೆಪಿಗೆ ನೆಲೆಯೇ ಇಲ್ಲದ ಶಿರಾ ಕ್ಷೇತ್ರದಲ್ಲಿ ಸಿಎಂ ಪುತ್ರ ವಿಜಯೇಂದ್ರ ಅವಿರತ ಶ್ರಮದಿಂದಾಗಿ ಕಮಲ ಅರಳುವಂತಾಗಿದೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm