Hd Kumaraswamy, Bengaluru Bandh Cauvery: ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದ ಬಾಡಿಗೆ ಸರ್ಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ? ರೈತರ ಬಂಧನಕ್ಕೆ ಎಚ್ಡಿಕೆ ಕಿಡಿ 

26-09-23 12:28 pm       Bangalore Correspondent   ಕರ್ನಾಟಕ

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್‌ಗೆ ಕರೆ ನೀಡಿದ ಹಿನ್ನೆಲೆ ರೈತರು ಹಾಗೂ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭ ಪೊಲೀಸರು ಹಲವು ಕಾರ್ಯಕರ್ತರನ್ನು ಹಾಗೂ ಮುಖಂಡರನ್ನು ವಶಕ್ಕೆ ಪಡೆದಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು, ಸೆ.26: ಕಾವೇರಿ ನೀರಿಗಾಗಿ ಬೆಂಗಳೂರು ಬಂದ್‌ಗೆ ಕರೆ ನೀಡಿದ ಹಿನ್ನೆಲೆ ರೈತರು ಹಾಗೂ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭ ಪೊಲೀಸರು ಹಲವು ಕಾರ್ಯಕರ್ತರನ್ನು ಹಾಗೂ ಮುಖಂಡರನ್ನು ವಶಕ್ಕೆ ಪಡೆದಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು ಬಂದ್ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕಾವೇರಿ ನೀರಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್‌ಗೆ ನನ್ನ ಸಂಪೂರ್ಣ ಬೆಂಬಲವಿದೆ. ಹೋರಾಟ ಶಾಂತಿಯುತವಾಗಿರಲಿ. ಬಂದ್ ಯಶಸ್ವಿಯಾಗಲಿ. ಜನತಾದಳ ಪಕ್ಷದ ಕಾರ್ಯಕರ್ತರೂ ಕೂಡ ಬಂದ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. 

ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್ ಸರ್ಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?  

ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ? 

ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಮ್ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

Farmers and pro-Kannada activists are protesting against the Bengaluru bandh called for cauvery water. Former Chief Minister HD Kumaraswamy took to Twitter to express his anger over the detention of several activists and leaders by the police.