Tumkur Car Accident: ತುಮಕೂರು ; ರಥೋತ್ಸವ ಕಾರ್ಯಕ್ರಮಕ್ಕೆ ತೆರಳುವ ವೇಳೆ ದುರಂತ ; ಕಾರು - ಲಾರಿ ಡಿಕ್ಕಿ , ಸ್ಥಳದಲ್ಲೇ ಮೂವರ ದುರ್ಮರಣ

26-09-23 12:37 pm       HK News Desk   ಕರ್ನಾಟಕ

ತಾಲ್ಲೂಕಿನ ಮಿಡಿಗೇಶಿ ಗ್ರಾಮದ ಬಳಿ ಸೋಮವಾರ ರಾತ್ರಿ ಕಾರ್ ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಧುಗಿರಿ, ಸೆ.26: ತಾಲ್ಲೂಕಿನ ಮಿಡಿಗೇಶಿ ಗ್ರಾಮದ ಬಳಿ ಸೋಮವಾರ ರಾತ್ರಿ ಕಾರ್ ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಾವಗಡ ತಾಲ್ಲೂಕಿನ ಗುಜ್ಜನುಡು ಗ್ರಾಮದ ಆಕಾಶ್ ( 26) , ಕಾರ್ತಿಕ್ (28) ಹೇಮಂತ್ (30) ಮೃತರು. ಗಾಯಾಳು ಉಜ್ವಲ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಪಾವಗಡಕ್ಕೆ ಹೋಗುತ್ತಿದ್ದ ಕಾರು, ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಮುಖಾಮುಖಿಯಾಗಿವೆ. ಮೃತರು ಗುಜ್ಜನಡು ಗ್ರಾಮದಲ್ಲಿ ನಡೆಯುತ್ತಿದ್ದ ಮಾರಮ್ಮ ದೇವಿ ರಥೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು.

ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಶವಗಾರದ‌ ಬಳಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tumkur Car Accident, three killed on spot near Pavagada.