Bengaluru Bandh, Cauvery water: ಕಾವೇರಿ ಹೋರಾಟ ; ಪ್ರತಿಭಟನೆಗೆ ಮುಂದಾದ ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯರ್ತರನ್ನು ವಶಕ್ಕೆ ಪಡೆದ ಪೊಲೀಸರು !

26-09-23 05:41 pm       Bangalore Correspondent   ಕರ್ನಾಟಕ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳು ನೀಡಿರುವ ಬಂದ್​ಗೆ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ ನಾಯಕರನ್ನು ಹಾಗೂ ಜೆಡಿಎಸ್ ಮುಖಂಡರು ಹಾಗೂ​ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಬೆಂಗಳೂರು, ಸೆ.26: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳು ನೀಡಿರುವ ಬಂದ್​ಗೆ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ ನಾಯಕರನ್ನು ಹಾಗೂ ಜೆಡಿಎಸ್ ಮುಖಂಡರು ಹಾಗೂ​ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, ಸಪ್ತಗಿರಿ ಗೌಡ ಸೇರಿ ಕೆಲ ಬಿಜೆಪಿ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಮುಂದಾದರು. 144 ಸೆಕ್ಷನ್ ಇರುವ ಕಾರಣ ಪ್ರತಿಭಟನೆ ನಡೆಸದಂತೆ ಪೊಲೀಸರು ಸೂಚನೆ ನೀಡಿದರು. ಯಾವುದೇ ರ‍್ಯಾಲಿ ಹೋಗುವುದಿಲ್ಲ, ಪ್ರತಿಭಟನೆಗೆ ಅವಕಾಶ ಕೊಡಿ ಎಂದು ಪೊಲೀಸರಿಗೆ ಮನವಿ ಮಾಡಿದರು‌. ಈ ವೇಳೆ ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಪೊಲೀಸರು ಚದುರಿಸಿದರು.

Various combinations worked for BJP in Sira: N Ravikumar

Protests part of democratic traditions, will not prevent them: Chief  Minister Siddaramaiah - The Hindu

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಎನ್. ರವಿಕುಮಾರ್, ಬೆಂಗಳೂರಿನ ಜನ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಇದ್ದೇವೆ ಎಂಬುದನ್ನು ಬಂದ್ ಮಾಡುವ ಮೂಲಕ ತೋರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಇದು ಅವಮಾನದ ಸಂಗತಿ. ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘಿಸಿ ಅವರು ಜೈಲಿಗೆ ಹೋಗಬೇಕಾಗಿತ್ತು. ಹಾಗಾಗಿದ್ದರೆ ರೈತರಿಗಾಗಿ ಹೋಗುತ್ತಿದ್ದರು ತಾನೇ? ಎಂದು ಪ್ರಶ್ನಿಸಿದರು. ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಪ್ತಗಿರಿ ಗೌಡ ಮತ್ತು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು. ಬಳಿಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರನ್ನು ವಶಕ್ಕೆ ಪಡೆದು ಹೊಯ್ಸಳದಲ್ಲಿ ಕರೆದೊಯ್ದರು.

Janata Dal (Secular) - Wikipedia

ಜೆಡಿಎಸ್​ ಕಾರ್ಯಕರ್ತರು ವಶಕ್ಕೆ:

ಪಕ್ಷದ ಕೇಂದ್ರ ಕಚೇರಿ ಜೆ ಪಿ ಭವನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಜೆಡಿಎಸ್ ಕಚೇರಿ ಸಮೀಪವೇ ತಡೆದು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಕರೆದೊಯ್ದರು. ಇದಕ್ಕೂ ಮುನ್ನ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ ಮಾತನಾಡಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ದಮನಕಾರಿ, ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಕಾವೇರಿ ನದಿ ನೀರಿನ ಹೋರಾಟ ನಮ್ಮ ಹಕ್ಕಾಗಿದೆ. ಪ್ರತಿಭಟನೆ ನಮಗೆ ಸಂವಿಧಾನ ಬದ್ಧ ಹಕ್ಕು ಕೊಟ್ಟಿದೆ. ನ್ಯಾಯಬದ್ಧವಾಗಿ, ಶಾಂತಿಯುತವಾಗಿ ಪ್ರತಿಭಟನೆಗೆ ಸಜ್ಜಾಗಿದ್ದ ನಮ್ಮನ್ನು, ನಮ್ಮ ಜೊತೆ ಬಂದಿದ್ದ ನೂರಾರು ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆಗೆ ಅವಕಾಶವನ್ನು ನೀಡದೆ ಪೊಲೀಸ್ ದರ್ಪವನ್ನು ಬಳಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಈ ಹಿಂದೆ ಪ್ರತಿಪಕ್ಷ ಆಗಿದ್ದ ಸಮಯದಲ್ಲಿ ನಡೆಸಿದ ಮೇಕೆದಾಟು ಪಾದಯಾತ್ರೆ ವೇಳೆ, ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ, ಪ್ರತಿಭಟನೆ ಮಾಡಿದ್ದರು. ಆದೇ ಕಾಂಗ್ರೆಸ್ ಪಕ್ಷ ಈಗ ಪ್ರತಿಪಕ್ಷಗಳ ವಿರುದ್ಧ ಅಧಿಕಾರ ಚಲಾಯಿಸಿ ಹಕ್ಕುಗಳನ್ನು ಮೊಟಕು ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಈ ಸರ್ಕಾರ ವಿಫಲವಾಗಿದ್ದು, ಅದನ್ನು ಬಯಲು ಮಾಡಲು ಹೊರಟಿರುವ ಪ್ರತಿಪಕ್ಷ ಮತ್ತು ಹೋರಾಟಗಾರರನ್ನು ಹತ್ತಿಕ್ಕಲು ಅಧಿಕಾರ, ಪೊಲೀಸರ ದುರ್ಬಳಕೆ ಮಾಡುತ್ತಿರುವ ಈ ಸರ್ಕಾರಕ್ಕೆ ರಾಜ್ಯದ ಜನ ತಕ್ಕ ಪಾಠ ಕಲಿಸಲಿದ್ದಾರೆ. ವಿನಾಶ ಕಾಲದಲ್ಲಿ ವಿಪರೀತ ಬುದ್ಧಿ ಎನ್ನುವಂತೆ ಈ ಸರ್ಕಾರ ವರ್ತಿಸುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.

ನಗರ ಘಟಕದ ಅಧ್ಯಕ್ಷ ರಮೇಶ್ ಗೌಡ, ಮುಖಂಡರಾದ ಎ ಪಿ ರಂಗನಾಥ್, ಭದ್ರೆಗೌಡ, ಡಾ. ಆಂಜನಪ್ಪ ಸೇರಿದಂತೆ ಹಲವಾರು ಮುಖಂಡರು ಭಾಗವಿಸಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನಾ ನಿರತರನ್ನು ಪ್ರಿವೆಂಟಿವ್​ ಅರೆಸ್ಟ್ ಮಾಡಿದ ಪೊಲೀಸರು, ಪ್ರತಿಭಟನಾಕಾರರನ್ನು ಬಿಎಂಟಿಸಿ ಬಸ್​ನಲ್ಲಿ ಸಿಆರ್ ಕೇಂದ್ರ ಸ್ಥಾನಕ್ಕೆ ಕರೆದುಕೊಂಡು ಹೋದರು.

Rakshana Vedike alleges false cases are booked against Kannada activists

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಪೊಲೀಸ್ ವಶಕ್ಕೆ:

ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಟಿ ಎ ನಾರಾಯಣ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಗಾಂಧಿ ನಗರದಲ್ಲಿರುವ ರಕ್ಷಣಾ ವೇದಿಕೆ ಕಚೇರಿಯಿಂದ ಹೋರಾಟ ಪ್ರಾರಂಭಿಸಲು ಮುಂದಾದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

The Bengaluru bandh called by various organisations over the Cauvery river water dispute evoked partial response on Tuesday with most of the public services functioning normally. Farmers and Kannada organisations, backed by the opposition BJP and JD(S) had made the call for shutdown in protest against the release of Cauvery water to neighbouring Tamil Nadu.