ಬ್ರೇಕಿಂಗ್ ನ್ಯೂಸ್
02-10-23 12:31 pm HK News Desk ಕರ್ನಾಟಕ
ಶಿವಮೊಗ್ಗ, ಅ.2: ಭಾನುವಾರ ಸಂಜೆ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದಾಗ ಶಿವಮೊಗ್ಗ ನಗರದ ರಾಗಿಗುಡ್ಡ ರಸ್ತೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಿದ ಘಟನೆ ನಡೆದಿದ್ದು ಇದರ ಬೆನ್ನಲ್ಲೇ ಪೊಲೀಸರು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಸ್ಥಳಕ್ಕೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಭೇಟಿ ನೀಡಿದ್ದಾರೆ. ಅಲ್ಲದೇ ಆರ್ಎಎಫ್ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.
ಕಲ್ಲು ತೂರಾಟ ಘಟನೆಯಲ್ಲಿ ಐದಾರು ಮಂದಿಗೆ ಗಾಯಗಳಾಗಿವೆ. ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾಗಲೇ ಕಲ್ಲು ತೂರಾಟ ನಡೆದಿತ್ತು. ಉದ್ರಿಕ್ತರನ್ನು ಚದುರಿಸಿ ರಾಗಿಗುಡ್ಡಕ್ಕೆ ಸೀಮಿತವಾಗಿ 144 ಸೆಕ್ಷನ್ ಜಾರಿಗೊಳಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರ ಮೇಲೆಯೂ ಕಲ್ಲು ತೂರಿದ್ದು ಎಷ್ಟು ಮಂದಿ ಗಾಯಗೊಂಡಿದ್ದಾರೆಂಬ ಮಾಹಿತಿ ನೀಡಿಲ್ಲ.
ಘರ್ಷಣೆ ನಡೆದ ಸ್ಥಳಗಳಿಗೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದರು. ಈ ವೇಳೆ, ಪೊಲೀಸರು ಹೋಗುತ್ತಿದ್ದಂತಯೇ ಅವರ ಮೇಲೆ ಕಲ್ಲು ಬೀಸಿದ್ದರು. ಸ್ಥಳದಲ್ಲಿ ಸೀಮಿತ ಸಂಖ್ಯೆಯಲ್ಲಿದ್ದ ಪೊಲೀಸರು ಅಲ್ಲಿಂದ ವಾಪಸ್ ಆಗಿದ್ದರು. ಕೆಲವೇ ಹೊತ್ತಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬಂದಿ ಆಗಮಿಸಿದ್ದು ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲ್ಲು ತೂರಾಟ ಘಟನೆಗೆ ಕಾರಣರಾದವರನ್ನು ಪೊಲೀಸರು ಗುರುತಿಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, 7 ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋ, ಕಾರು, ಬೈಕ್ಗಳಿಗೂ ಹಾನಿಯಾಗಿವೆ.
ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು ಎರಡು ಗುಂಪುಗಳ ಜೊತೆ ಮಾತನಾಡಿದ್ದೇನೆ. ಮೆರವಣಿಗೆ ವೇಳೆ ಯುವಕರ ಗುಂಪು ದಾಂಧಲೆ ನಡೆಸಿದೆ. ಘಟನೆಯಿಂದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆ ಹಾಗೂ ವಾಹನಗಳಿಗೆ ಹಾನಿಯಾಗಿರುವ ಕುರಿತು ದೂರ ನೀಡಲು ತಿಳಸಲಾಗಿದೆ. ಘಟನೆಯಲ್ಲಿ ನಮ್ಮ ಕೆಲ ಸಿಬ್ಬಂದಿಗೂ ಗಾಯಗಳಾಗಿವೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಡಿಯೋ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
Communal violence erupted in Shivamogga, IGP visits spot, stone pelted on 7 houses, RAP on spot, many taken to custody.
13-02-25 07:28 pm
HK News Desk
ಜನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿ...
13-02-25 05:05 pm
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬದಲಾವಣೆ ಸುಳಿವು ಕೊಟ...
12-02-25 12:55 pm
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
13-02-25 02:45 pm
HK News Desk
Maha Kumbh, Jabalpur Accident: ಪ್ರಯಾಗ್ರಾಜ್ನ...
11-02-25 04:19 pm
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
13-02-25 10:08 am
Mangalore Correspondent
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
13-02-25 05:54 pm
Bangalore Correspondent
Mangalore, Sieal Residency Bar Valachil, Crim...
12-02-25 10:28 pm
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm