Tumakuru, Commits Suicide: ಸಾಲಬಾಧೆ ; ತುಮಕೂರಿನಲ್ಲಿ ಒಂದೇ ಕುಟುಂಬದ ಮೂವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

02-10-23 06:40 pm       HK News Desk   ಕರ್ನಾಟಕ

ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.

ತುಮಕೂರು, ಅ.2: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ತಂದೆ, ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದಗಂಗಯ್ಯ (62), ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದವರು.

ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ, ಕಳೆದ ಎರಡು ವರ್ಷಗಳ ಹಿಂದೆ ಕೆಇಬಿಯಿಂದ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್​ ಇಟ್ಟುಕೊಂಡಿದ್ದರು. ಇಂದು ಬೆಳಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ.

ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳು ರವಾನೆ ಮಾಡಲಾಗಿದ್ದು, ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Three members of a family allegedly committed suicide by hanging themselves from a train near Panditanahalli railway track in Tumakuru. Father, mother and daughter committed suicide. The deceased have been identified as Siddagangaiah (2), Sunandamma and Geetha.