Eid violence, CM Siddamaiah: ಶಿವಮೊಗ್ಗ ಗಲಾಟೆ, ಯಾರೇ ಕೋಮು ಗಲಭೆ ಮಾಡಿದರೆ ಕಠಿಣ ಕ್ರಮ ತಗೋತೀವಿ ; ಸಿಎಂ ಸಿದ್ದರಾಮಯ್ಯ 

03-10-23 02:25 pm       HK News Desk   ಕರ್ನಾಟಕ

ನಮ್ಮ ಸರ್ಕಾರ ಕೋಮು-ಗಲಭೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಯಾರೇ ಕೋಮು ಗಲಭೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ, ಅ.3: ನಮ್ಮ ಸರ್ಕಾರ ಕೋಮು-ಗಲಭೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಯಾರೇ ಕೋಮು ಗಲಭೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಶಿವಮೊಗ್ಗದಲ್ಲಿ ಈದ್-ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆಯಲ್ಲಿ ಕಲ್ಲು ತೂರಿದವರನ್ನು ಬಂಧಿಸಿ, ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತಿದೆ' ಎಂದರು.

Shivamogga sees stone-pelting during Eid Milad rally, houses damaged; over  40 booked, says CM- The New Indian Express

ಈ ಘಟನೆ ವಿರೋಧಿಸಿ ಬಿಜೆಪಿಯವರು ಕೋಲಾರದಲ್ಲಿ ಪ್ರತಿಭಟಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ಪ್ರತಿಭಟನೆ ಮಾಡಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದಕ್ಕೆ ನಾವು ಅಡ್ಡಿ ಬರುವುದಿಲ್ಲ. ಆದರೆ, ಪ್ರತಿಭಟನೆಗೆ ಸೂಕ್ತ ಕಾರಣವಿರಬೇಕು ಮತ್ತು ಶಾಂತಿಯುತವಾಗಿ ಮಾಡಬೇಕು' ಎಂದರು.

'ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕೋಮು ಗಲಭೆ ಹೆಚ್ಚಿವೆ' ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು,'ಆರೋಪ ಮಾಡುವುದೇ ಬಿಜೆಪಿಯವರ ಕೆಲಸ. ಆದರೆ, ಆರೋಪ ಮಾಡಿದ್ದೆಲ್ಲ ಸತ್ಯವಲ್ಲ. ಅವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ' ಎಂದು ಹೇಳಿದರು.

Chief Minister Siddaramaiah said on Monday that more than 40 persons were arrested in connection with the stone pelting incident reported from Shivamogga city.