ಬ್ರೇಕಿಂಗ್ ನ್ಯೂಸ್
03-10-23 03:17 pm HK News Desk ಕರ್ನಾಟಕ
ಶಿವಮೊಗ್ಗ, ಅ.3: ಶಿವಮೊಗ್ಗ ನಗರದ ರಾಗಿಗುಡ್ಡ ಗಲಭೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ಅದ್ಧೂರಿಯಾಗಿ ನಡೆದಿದೆ. ಆದರೆ, ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಗಲಭೆ ನಡೆದಿದೆ. ಘಟನೆ ಸಂಬಂಧಿಸಿ ಈಗಾಗಲೇ 60 ಜನರನ್ನು ಬಂಧಿಸಲಾಗಿದೆ. 24 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಘಟನೆ ನಡೆಯಬಾರದಿತ್ತು. ಘಟನೆ ನಡೆದಿರುವುದಕ್ಕೆ ನನಗೆ ವಿಷಾದವಿದೆ. ಶಿವಮೊಗ್ಗದ ಹಿನ್ನೆಲೆ ಗಮನಿಸಿ ಗಲಭೆ ನಡೆದ ಪ್ರದೇಶದಲ್ಲಿ 144 ಸೆಕ್ಷನ್ ವಿಧಿಸಲಾಗಿದೆ. ಆದರೆ, ರಾಗಿಗುಡ್ಡ ಹೊರತುಪಡಿಸಿ ಬಾಕಿ ಕಡೆ ಸಡಿಲಗೊಳಿಸಲಾಗಿದೆ. ಮತ್ತೆ ಯಾವುದೇ ಘಟನೆ ನಡೆಯಬಾರದು ಎಂದು ಸೆಕ್ಷನ್ ಬಿಗಿ ಮಾಡಲಾಗಿದೆ ಎಂದ ಅವರು, ಹೊರಗಿನಿಂದ ಬಂದವರು ಕಲ್ಲು ತೂರಾಟ ನಡೆಸಿದ್ದಾರೆಂಬುದರ ಬಗ್ಗೆ ನಾನು ಮಾತನಾಡಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಿವಮೊಗ್ಗ ಜನತೆಗೆ ನಾನು ಮನವಿ ಮಾಡುತ್ತೇನೆ. ನಗರದಲ್ಲಿ ಶಾಂತಿ ಕಾಪಾಡಬೇಕು. ಕಾನೂನು ಬದ್ಧವಾಗಿರುವ ಬಂಟಿಂಗ್ಸ್, ಬ್ಯಾನರ್ ಅಳವಡಿಸಲು ಅವಕಾಶವಿದೆ. ಸಂಪ್ರದಾಯ ಪ್ರದರ್ಶನ ಮಾಡುವ ಬಗ್ಗೆ ಯಾವುದೇ ವಿರೋಧವಿಲ್ಲ. ರಾಗಿಗುಡ್ಡದಲ್ಲಿ ನಾನು ಕೆಲವಾರು ಮನೆಗಳಿಗೆ ಭೇಟಿ ನೀಡಿದ್ದು ಒಡೆದು ಹಾಕಿದ್ದನ್ನು ನೋಡಿದೆ. ಇದನ್ನು ನೋಡಿದಾಗ ಬೇಸರವಾಗುತ್ತೆ. ನಮ್ಮ, ನಿಮ್ಮ ಮನೆಗಳನ್ನು ಒಡೆದಾಗ ಬೇಸರವಾಗುವುದಿಲ್ಲವೇ.. ಪಾಪ ಕಷ್ಟಪಟ್ಟು ಮನೆಗಳನ್ನು ಕಟ್ಟಿಕೊಂಡಿರುತ್ತಾರೆ.
ಯಾರಿಂದಲೂ ಯಾರಿಗೂ ತೊಂದರೆಯಾಗಬಾರದು. ಕೆಲವು ಕಿಡಿಗೇಡಿಗಳು ಈ ಕೃತ್ಯ ಮಾಡಿದ್ದಾರೆ. ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕ್ರಮ ಆಗುತ್ತೆ. ಕಾನೂನಿನಲ್ಲಿ ಅವಕಾಶವಿದ್ರೆ ನಷ್ಟವಾದವರಿಗೆ ಪರಿಹಾರ ಕೊಡುತ್ತೇವೆ. ಇಲ್ಲವಾದರೆ ನಾವು ಸೇರಿ ಕೊಡ್ತೆವೆ. ಶಿವಮೊಗ್ಗ ಶಾಂತಿಯಿಂದ ಇರಬೇಕು. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದಿದ್ದಾರೆ.
Speaking to presspersons at the hospital, the minister said that he visited the violence-hit areas as a representative of the government, not as a politician. “Everybody is equal before the government and the law. The police have arrested 60 people and registered 24 cases. They have taken steps necessary to ensure peace in the city,” he said.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm