ಬ್ರೇಕಿಂಗ್ ನ್ಯೂಸ್
03-10-23 05:35 pm HK News Desk ಕರ್ನಾಟಕ
ಶಿವಮೊಗ್ಗ, ಅ.3: ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂಬ ಸುಳ್ಳು ಸುದ್ಧಿ ಹರಡುತ್ತಿದೆ. ಈ ಸುದ್ಧಿ ಫಾರ್ವರ್ಡ್ ಮಾಡಿರುವ ಅಜ್ಗರ್ ಎಂಬಾತನ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಮಾಡಿರುವವರ ವಿರುದ್ಧವೂ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ರಾಗುಗುಡ್ಡ ಘರ್ಷಣೆ ಹಿನ್ನೆಲೆಯಲ್ಲಿ ಬಿಗು ಬಂದೋಬಸ್ತ್ ಕೈಗೊಂಡಿರುವ ಎಸ್ಪಿ ಜಾಲತಾಣಗಳ ಮೇಲೆ ನಿಗಾ ಇಟ್ಟಿರುವುದನ್ನು ತಿಳಿಸಿದ್ದಾರೆ. ಪೊಲೀಸ್ ಎನ್ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಆಗಿದ್ದ ವಿಡಿಯೋ ಡಿಲಿಟ್ ಮಾಡಿಸಲಾಗಿದೆ. ಸುಳ್ಳು ಸುದ್ಧಿ ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಬೇರೆ ರಾಜ್ಯದ, ಬೇರೆ ಜಿಲ್ಲೆಗಳ ವಿಡಿಯೋಗಳನ್ನು ಹರಡಲಾಗುತ್ತಿದೆ. ಅಂತಹವರ ವಿರುದ್ಧ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು.
ರಾಗಿಗುಡ್ಡದಲ್ಲಿ ಎರಡು ಮಾರುತಿ ವ್ಯಾನ್ ಬಂದಿರುವ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಅವರು ನ್ಯಾಮತಿಯಿಂದ ಮೆರವಣಿಗೆ ನೋಡಲು ಬಂದಿದ್ದವರಾಗಿದ್ದರು. ಅವರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಕಾನೂನು ಕ್ರಮ ಜರುಗಿಸಲಾಗತ್ತೆ. ಅನೇಕರು ಸುಳ್ಳು ವಿಡಿಯೋಗಳನ್ನು ಹರಡುತ್ತಿದ್ದಾರೆ. ಮೆರವಣಿಗೆಯಲ್ಲಿ ಕತ್ತಿಗಳನ್ನು ಝಳಪಿಸಿರುವುದಕ್ಕೆ ಆಕ್ಷೇಪ ಮಾಡಲಾಗಿದೆ. ಆದರೆ, ಕೆಲವು ಕಡೆ ಆಟಿಕೆ ಕತ್ತಿಗಳನ್ನು ತರಲಾಗಿದೆ. ಇದು ಒರಿಜಿನಲ್ ಕತ್ತಿ ಅಲ್ಲ ಎಂಬುದು ತಿಳಿದುಬಂದಿದೆ. ಅಕಸ್ಮಾತ್ ಒರಿಜಿನಲ್ ಕತ್ತಿ ಎಂದು ಕಂಡು ಬಂದರೆ, ಅಂತಹ ವಿಡಿಯೋ ನನಗೆ ಕಳಿಸಿ. ನಾನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಸುಳ್ಳು ಸುದ್ಧಿ, ವಿಡಿಯೋಗಳನ್ನು ನಂಬಬೇಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ.
ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ, 24 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ. ಒಟ್ಟು 60 ಜನರನ್ನು ಬಂಧಿಸಲಾಗಿದೆ. ಸಾರ್ವಜನಿಕರು ಸುಳ್ಳು ಸುದ್ಧಿಗಳನ್ನು ನಂಬಬೇಡಿ. ಇನ್ನೂ ಹಲವರನ್ನು ಬಂಧಿಸಲಿದ್ದೆವೆ. ಘಟನೆಗೆ ಕಾರಣರಾದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಹೊರಗಿನಿಂದ ಬಂದವರು ಯಾರಿದ್ದಾರೆಂದು ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲಿ ಸಾಕ್ಷಿಗಳು ನಮಗೆ ಸಿಕ್ಕಿದೆ. ಯಾರು ಕಾರಣಕರ್ತರಿದ್ದಾರೆ, ಅವರ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಮೆರವಣಿಗೆಯಲ್ಲಿ ಮಚ್ಚು, ಲಾಂಗು ತೋರಿಸಿದವರ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
Stone pelting, Miscreants share false news as encounter in Shivamogga, SP clarifies.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm