ಬ್ರೇಕಿಂಗ್ ನ್ಯೂಸ್
03-10-23 10:37 pm Bengaluru Correspondent ಕರ್ನಾಟಕ
ಕೋಲಾರ, ಅ.3: ನನ್ನ ಜಿಲ್ಲೆಯ ಜನರ ವಿರೋಧ ಇದ್ದರೂ, ಕೋಲಾರ, ಚಿಕ್ಕಬಳ್ಳಾಪುರ ಜನರಿಗೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಎತ್ತಿನಹೊಳೆ ಯೋಜನೆಯನ್ನು ಜಾರಿಗೆ ತಂದಿದ್ದೆ. 800 ಕೋಟಿ ರೂಪಾಯಿ ಮೊತ್ತದಲ್ಲಿ ಡಿಪಿಆರ್ ತಯಾರಿಸಿ ಯೋಜನೆ ಜಾರಿ ಮಾಡಿದ್ದೆ. ಆದರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಅದು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸಿದ್ದು ಬಿಟ್ಟರೆ ನೀರು ತರಲು ಮುಂದಾಗಿಲ್ಲ. ಯೋಜನೆ ಹೆಸರಲ್ಲಿ ದುಡ್ಡು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಅವರನ್ನು ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿ ಹೊರಕ್ಕೆ ತಳ್ಳಿದ ಘಟನೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸದಾನಂದ ಗೌಡ ತನ್ನ ಸಾಧನೆಯನ್ನು ಹೇಳಿಕೊಂಡಿದ್ದಾರೆ.
ಇವತ್ತು ಕೋಲಾರದ ಜನ ಕುಡಿಯಲು ನೀರಿಲ್ಲದಿದ್ದರೂ ಹನಿ ನೀರಾವರಿ ಮೂಲಕ ಕೃಷಿ ಮಾಡಿ, ಬೆಂಗಳೂರಿನ ಜನರಿಗೆ ತರಕಾರಿ ಪೂರೈಸುತ್ತಿದ್ದಾರೆ. ಇಲ್ಲಿನ ಜನರಿಗೆ ನೀರು ಕೊಡಬೇಕೆಂದು ಎತ್ತಿನಹೊಳೆ ಯೋಜನೆಯನ್ನು ತಯಾರಿಸಿದ್ದು ನಾವು. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಐದು ವರ್ಷ ಆಡಳಿತ ನಡೆಸಿತಲ್ಲಾ.. ಯಾಕೆ ಇವರಿಗೆ ಆ ಯೋಜನೆ ಅನುಷ್ಠಾನಕ್ಕೆ ತರಲು ಸಾಧ್ಯವಾಗಿಲ್ಲ. ಯೋಜನೆಯನ್ನು ಜಾರಿಗೆ ತರುತ್ತಿದ್ದರೆ ಕೋಲಾರದ ಕೆರೆಗಳು ತುಂಬುತ್ತಿತ್ತಲ್ಲಾ.. ಇವರು ಆ ಯೋಜನೆಯನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನ ಮಾಡಿದರು. ಜೊತೆ ಜೊತೆಗೆ ಯೋಜನೆ ಹೆಸರಲ್ಲಿ ದುಡ್ಡು ಲೂಟಿ ಹೊಡೆದಿದ್ದಾರೆ. ಕಾಂಗ್ರೆಸಿನವರು ಲೂಟಿಕೋರರು ಎಂದು ಆರೋಪಿಸಿದರು.
ಯೋಜನೆ ನಿರ್ಮಾತೃಗಳು ಡೀವಿ, ಮೊಯ್ಲಿ
2011ರಲ್ಲಿ ಕರಾವಳಿ ಜಿಲ್ಲೆಗಳ ವಿರೋಧದ ನಡುವೆಯೂ ಅಂದಿನ ಮುಖ್ಯಮಂತ್ರಿಯಾಗಿದ್ದ ಡಿವಿ ಸದಾನಂದ ಗೌಡ ತರಾತುರಿಯಲ್ಲಿ ಎತ್ತಿನಹೊಳೆ ಯೋಜನೆಗೆ ಅನುಮತಿ ನೀಡಿದ್ದರು. ಆನಂತರ, 2012ರಲ್ಲಿ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿಯೇ ಶಿಲಾನ್ಯಾಸ ಮಾಡಿ, ಮತ್ತೊಂದು ಎಡವಟ್ಟು ಮಾಡಿದ್ದರು. ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಯೋಜನೆಗೆ ಹಣ ಬಿಡುಗಡೆಗೊಳಿಸಿ, ಅನುಷ್ಠಾನಕ್ಕೆ ಯತ್ನಿಸಿದ್ದರು. ಆದರೆ ಬಹುತೇಕ ಜಲತಜ್ಞರು ಎತ್ತಿನಹೊಳೆ ಯೋಜನೆಯಿಂದ ನೀರು ಸಿಗಲ್ಲ ಎಂದು ಹೇಳಿದರೂ ಸರಕಾರ ಕೇಳಿರಲಿಲ್ಲ. ಯೋಜನೆ ಹೆಸರಲ್ಲಿ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಪಕ್ಷ ಭೇದ ಇಲ್ಲದೆ ಹಣ ಕೊಳ್ಳೆ ಹೊಡೆದಿದ್ದು ಬಿಟ್ಟರೆ ನೀರು ಒಯ್ಯುವ ಕೆಲಸ ಮಾಡಿಲ್ಲ. ಈಗ ಅಂದಿನ ಸಿಎಂ ಸದಾನಂದ ಗೌಡ ಯಾವುದೇ ನಾಚಿಕೆ ಇಲ್ಲದೆ, ತಾನು ಜಾರಿಗೊಳಿಸಿದ್ದ ಯೋಜನೆಯ ಹೆಸರಲ್ಲಿ ಕಾಂಗ್ರೆಸಿಗರು ಲೂಟಿ ಹೊಡೆಯುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದ ಜನರನ್ನು ಪ್ರತಿ ಬಾರಿ ಮೋಸ ಮಾಡುತ್ತಿದ್ದಾರೆ.
Mangalore Sadananda Gowda talks about Yettinahole water project in kolar
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm