ಬ್ರೇಕಿಂಗ್ ನ್ಯೂಸ್
05-10-23 09:21 pm HK News Desk ಕರ್ನಾಟಕ
ಶಿವಮೊಗ್ಗ, ಅ.5: ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಹಿಂದೂಗಳ ಮನೆ ಮೇಲೆ ದಾಳಿ ನಡೆದಿದೆ. ಇದು ಪೂರ್ವ ನಿಯೋಜಿತ ಕೃತ್ಯ. ಎರಡು ಗಂಟೆಗಳ ಕಾಲ ಅಂದು ಕಲ್ಲು ತೂರಾಟ ನಡೆದಿದೆ. ಇಂದು ನಾವು ಪ್ರತ್ಯಕ್ಷದರ್ಶಿಗಳು ಹಾಗೂ ಗಾಯಾಳುಗಳ ಭೇಟಿ ಮಾಡಿ ಚರ್ಚಿಸಿದ್ದೇನೆ. ರಾಗಿಗುಡ್ಡ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸತ್ಯಶೋಧನಾ ತಂಡ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಿದ್ದು ಅಲ್ಲಿನ ನಿವಾಸಿಗಳಿಂದ ಮಾಹಿತಿ ಸಂಗ್ರಹಿಸಿದೆ. ರಾಗಿಗುಡ್ಡದಲ್ಲಿ ಗಣಪತಿ ವಿಸರ್ಜನಾ ಸಂದರ್ಭದಲ್ಲಿ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದ್ದವು. ಈದ್ ಮಿಲಾದ್ ಮೆರವಣಿಗೆ ವೇಳೆ ಮಾತ್ರ ಕಲ್ಲು ತೂರಾಟ ಆಗಲು ಸರ್ಕಾರದ ವೈಫಲ್ಯ ಕಾರಣ. ಮೆರವಣಿಗೆ ಇದೆ ಎಂದು ಪೊಲೀಸರ ಪರ್ಮಿಷನ್ ತೆಗೆದುಕೊಳ್ಳಬೇಕಿತ್ತು. ಆದರೆ ಅದು ಆಗಿಲ್ಲ. ಗಲಭೆ ವೇಳೆ ಪೊಲೀಸರು, ಎಸ್.ಪಿ. ಮೇಲೆ ದಾಳಿಯಾಗುತ್ತೆ. ಪೊಲೀಸರ ಮೇಲೆಯೇ ದಾಳಿ ನಡೆದರೆ ಹೇಗೆ..? ಸಾಮಾನ್ಯ ಜನರಿಗೆ ರಕ್ಷಣೆ ಯಾರು ಕೊಡ್ತಾರೆ ಎಂಬುದೇ ಪ್ರಶ್ನೆಯಾಗಿದೆ.
ಇಲ್ಲಿ ಟಾರ್ಗೆಟ್ ಮಾಡಿ ಕಲ್ಲು ತೂರಾಟ ನಡೆಸಲಾಗಿದೆ. ಗಣೇಶೋತ್ಸವದಲ್ಲಿ ಭಾಗಿಯಾಗಿದ್ದ ಯುವಕರು ಹಾಗೂ ಮಹಿಳೆಯರ ಮೇಲೆ ಟಾರ್ಗೆಟ್ ಮಾಡಲಾಗಿದೆ. ಅವರ ಮನೆಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲಾಗಿದೆ. ಹಲ್ಲೆ ಕೇವಲ ಹಿಂದೂಗಳ ಮನೆಗಳ ಮೇಲೆ ನಡೆದಿದೆ. ಯಾವ ಮುಸಲ್ಮಾನರ ಮನೆ ಮೇಲೂ ನಡೆದಿಲ್ಲ. ಮಹಿಳೆಯರು, ಮಕ್ಕಳು, ಬಾಣಂತಿಯರು ನೋಡದೇ ಹಲ್ಲೆ ಮಾಡಲಾಗಿದೆ. ಏಟು ತಿಂದವರನ್ನು ಜೈಲಿಗೆ ಕಳಿಸುವ ಕೆಲಸ ಮಾಡಲಾಗಿದೆ. ಜಿಲ್ಲಾ ಮಂತ್ರಿಗಳು ಬಂದುಹೋದ ಬಳಿಕ ಹಿಂದೂ ಯುವಕರನ್ನು ಜೈಲಿಗೆ ಹಾಕುವ ಕೆಲಸ ಮಾಡಲಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಿಜಯೋತ್ಸವದ ವೇಳೆ ನಡೆದ ಸಂಭ್ರಮಾಚರಣೆ ಮಾಡಲಾಗಿತ್ತು. ಈ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಲಾಗಿದೆ. ಅವರನ್ನು ಈವರೆಗೂ ಬಂಧಿಸಲಾಗಿಲ್ಲ. ಇದರಿಂದ ಆತಂಕದ ಪರಿಸ್ಥಿತಿ ನಿರ್ಮಾಣವಾದಂತಾಗಿದೆ. ಈ ಘಟನೆಯನ್ನು ನ್ಯಾಯಾಂಗ ತನಿಖೆಗೊಳಪಡಿಸಬೇಕೆಂದು ಆಗ್ರಹಿಸುತ್ತೇನೆ. ಭಯೋತ್ಪಾದನಾ ಚಟುವಟಿಕೆಗಳಿಗೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ರಾಗಿಗುಡ್ಡ ಪ್ರಕರಣದ ಹಿಂದೆಯೂ ಭಯೋತ್ಪಾದನಾ ಸಂಘಟನೆಗಳ ಪಾತ್ರವಿದೆ. ಭಯೋತ್ಪಾದನೆ ಚಟುವಟಿಕೆಗಳು ನಡೆಸುವ ಯುವಕರೇ ಈ ಮೆರವಣಿಗೆಯಲ್ಲಿ ಪಾಲ್ಗೊಂಡು ಕೃತ್ಯ ನಡೆಸಿದ್ದಾರೆ. ಇಡೀ ಪ್ರಕರಣದಲ್ಲಿ ಅತಿ ಹೆಚ್ಚು ಮಹಿಳೆಯರ ಮೇಲೆ ಹಲ್ಲೆ ನಡೆದಿದೆ. ಒಂದೂ ಮುಸಲ್ಮಾನರ ಮನೆ ಮೇಲೆ ದಾಳಿ ನಡೆದಿಲ್ಲ. ನಾವು ಸ್ಥಳ ಪರಿಶೀಲನೆ ನಡೆಸಿದ್ದೇವೆ.
ಕೆ.ಎಫ್.ಡಿ. ಹಾಗೂ ಎಸ್.ಡಿ.ಪಿ.ಐ.ಗೆ ಕಾಂಗ್ರೆಸ್ ಬೆಂಬಲ ಇದೆ. ಬೆಂಗಳೂರಿನಲ್ಲಿ ನಡೆದ ಘಟನೆಯಲ್ಲಿ ಯಾರ ಪಾತ್ರವಿತ್ತು. ಜಮೀರ್ ಸಿದ್ಧರಾಮಯ್ಯ ಶಿಷ್ಯ, ಡಿ.ಕೆ. ಶಿವಕುಮಾರ್ ಯಾರ ಶಿಷ್ಯ ಎಂಬುದು ಗೊತ್ತಿದೆ. ಇವರೀಗ ಕೆಜೆ ಹಳ್ಳಿ, ಡಿಜೆ ಹಳ್ಳಿ ಪ್ರಕರಣವನ್ನೂ ಹಿಂಪಡೆಯಲು ಯತ್ನ ಮಾಡುತ್ತಿದ್ದಾರೆ ಎಂದು ನಳಿನ್ ಆಕ್ರೋಶ ವ್ಯಕ್ತಪಡಿಸಿದರು. ತಂಡದಲ್ಲಿ ಈಶ್ವರಪ್ಪ ಸೇರಿದಂತೆ ಬಿಜೆಪಿ ರಾಜ್ಯ ನಾಯಕರು ಇದ್ದರು.
Stone Pelting in Shivamogga no house of Muslims targeted says nalin kateel in Mangalore.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm