ಬ್ರೇಕಿಂಗ್ ನ್ಯೂಸ್
05-10-23 09:31 pm HK News Desk ಕರ್ನಾಟಕ
ಕಲಬುರಗಿ, ಅ.5: ಶಿವಮೊಗ್ಗ ಹಾಗೂ ಕೋಲಾರದಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆಯ ಹಿಂದೆ ಪಾಕಿಸ್ತಾನ ಹಾಗೂ ಪಿಎಫ್‌ಐ ಕೈವಾಡವಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರ ಗಲಭೆಗೆ ಪರೋಕ್ಷ ಕುಮ್ಮಕ್ಕು ನೀಡುತ್ತಿದೆ' ಎಂದು ಶ್ರೀರಾಮಸೇನೆಯ ಗೌರವ ಅಧ್ಯಕ್ಷ ಸಿದ್ದಲಿಂಗ ಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಶಿವಮೊಗ್ಗ ಹಾಗೂ ಕೋಲಾರದಲ್ಲಿ ನಡರದ ಗಲಭೆ ಕುರಿತು ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಂಡ ರಾಜ್ಯವನ್ನು ಮತ್ತೊಂದು ತಾಲಿಬಾನ್ ಮಾಡಲು ಹೊರಟಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂಗಳ ಮೇಲೆ ನಡೆದ ಕಲ್ಲುತೂರಾಟ ಸರ್ಕಾರ ಪ್ರಾಯೋಜಿತ ಗಲಭೆ. ಘಟನೆ ನಡೆದು ನಾಲ್ಕೈದು ದಿನ ಗಳಿದರು ಸಹ ಗಲಭೆ ಕೊರರವಿರುದ್ದ ಯಾವುದೆ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದರು.
ಇವೆಲ್ಲ ನೋಡಿದ್ರೆ ನಾವು ಕರ್ನಾಟಕದಲ್ಲಿ ಇದ್ದೆವೋ ಅಥವ ಪಾಕಿಸ್ತಾನದ, ಅಫ್ಘಾನಿಸ್ತಾನದಲ್ಲಿದೇವೋ ಎಂದು ಅನುಮಾನ ಹುಟ್ಟಿಕೊಳ್ಳಿತ್ತಿದೆ. ಇದೆಲ್ಲವನ್ನು ಗಮನಿಸಿದರೆ ಕರ್ನಾಟಕ ಸರ್ಕಾರ ಪುಂಡರ ಹೆಡೆಮುರಿ ಕಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸರ್ಕಾರದ ವಿರುದ್ಧ ಗುಡುಗಿದರು.
ಹಿಂದೂ ಕಾರ್ಯಕರ್ತರು ಶಾಲು ಹಾಕಿಕೊಂಡು ಬಂದು ಆ ಸಂಘಟನೆ ಈ ಸಂಘಟನೆ ಎಂದರೆ ಒದ್ದು ಒಳಗೆ ಹಾಕಿ ಎಂದು ಹೇಳುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಶಿವಮೊಗ್ಗ ಗಲಭೆ ನಡೆದು ನಾಲ್ಕೈದು ದಿನಗಳು ಕಳೆದರು ಸಹ ತುಟಿ ಬಿಚ್ಚಿಲ್ಲ. ಮೌನಂ ಸಮ್ಮತಿ ಲಕ್ಷಣಂ ಎನ್ನುವ ಹಾಗೆ ಪ್ರಿಯಾಂಕ್ ಖರ್ಗೆ ಪರೋಕ್ಷವಾಗಿ ಗಲಭೆಯನ್ನು ಬೆಂಬಲಿಸುತ್ತಿದ್ದಾರೆ. ಕಾಂಗ್ರೇಸ್ ಸರ್ಕಾರದ ಮುಸ್ಲಿಂ ಗುಂಡಿಗಳನ್ನು ಪೋಷಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇಸ್ಲಾಂ ರಾಷ್ಟ್ರ ಮಾಡುವ ಹುನ್ನಾರ ಗಣೇಶ ಉತ್ಸವ ಪ್ರತಿಷ್ಠಾಪನೆಗೆ ನೂರಾರು ನಿಯಮಗಳನ್ನು ಜಾರಿಗೆ ತರಲಾಗುತ್ತದೆ. ಅದನ್ನು ಹಿಂದೂ ಕಾರ್ಯಕರ್ತರು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಾರೆ. ಆದರೆ ಈದ್ ಮಿಲಾದ್ ಹಬ್ಬಕ್ಕೂ ಕೂಡ ಪೊಲೀಸ್ ಇಲಾಖೆಯಿಂದ ಸಾಕಷ್ಟು ನಿಯಮಗಳು ಇದ್ದರು ಸಹ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಬೆದರಿಕೆ ಹುಟ್ಟು ಹಾಕುವಂತಹ ಕೃತಿಗಳು ನಡೆಯುತ್ತಿವೆ. ಇದಕ್ಕೆ ಮುಖ್ಯ ಕಾರಣ 2047ಕ್ಕೆ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ನಿಟ್ಟಿನಲ್ಲಿ ಮುಸಲ್ಮಾನರು ಕೈಗೊಂಡಿರುವಂತಹ ಗಜ್ವಾ ಹೈ ಹಿಂದ್ ಎಂಬ ಹೋರಾಟ ಎಂದು ಆದೋಲ ಸಿದ್ದಲಿಂಗ ಸ್ವಾಮೀಜಿ ಗಂಬೀರ ಆರೋಪ ಮಾಡಿದ್ದಾರೆ.
Congress government sponsored communal clash in Shivamogga, tring to make state as Taliban says Siddalinga Swami of Ram Sene. The incident clearly sends a message saying that the Siddaramaiah-led government is supporting radical Muslims in the State, he said.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am