ಧರ್ಮಸ್ಥಳಕ್ಕೆ ಸಚಿವ ಸುರೇಶ್ ಕುಮಾರ್ ; ಶಾಲಾರಂಭದ ಬಗ್ಗೆ ಹೆಗ್ಗಡೆ ಜೊತೆ ಚರ್ಚೆ

11-11-20 02:08 pm       Headline Karnataka News Network   ಕರ್ನಾಟಕ

 ಶಿಕ್ಷಣ ಸಚಿವ ಸುರೇಶ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.

ಮಂಗಳೂರು, ನವೆಂಬರ್ 11: ಶಿಕ್ಷಣ ಸಚಿವ ಸುರೇಶ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಇದೇ ವೇಳೆ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಸುರೇಶ್ ಕುಮಾರ್, ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದು ಪೂಜೆ ಸಲ್ಲಿಸಿದ ಬಳಿಕ ಧರ್ಮಾಧಿಕಾರಿ ಅವರನ್ನು ಭೇಟಿಯಾದರು. ಇದೇ ವೇಳೆ, ಕೊರೊನಾ ನಡುವೆ ಶಾಲೆಗಳನ್ನು ತೆರೆಯಬೇಕೋ, ಬೇಡವೋ ಎನ್ನುವುದರ ಕುರಿತು ಚರ್ಚೆ ಹೆಗ್ಗಡೆ ಜೊತೆ ಚರ್ಚೆ ನಡೆಸಿದ್ದಾರೆ. ಕೊರೊನಾದಿಂದಾಗಿ ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಚರ್ಚೆ ನಡೆಸಿದ ಸಚಿವರು, ಆನ್-ಲೈನ್ ಶಿಕ್ಷಣದ ಇತಿಮಿತಿ ಬಗ್ಗೆ ಹೆಗ್ಗಡೆಯವರ ಸಲಹೆ ಪಡೆದಿದ್ದಾರೆ.  

ಶಾಲಾ ಮಕ್ಕಳಿಗೆ ಲ್ಯಾಪ್ ಟಾಪ್ ಮತ್ತು ಟ್ಯಾಬ್ ಗಳನ್ನು ವಿತರಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದಿಂದ 21 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಜ್ಞಾನ ತಾಣ ಯೋಜನೆ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ, ಮಾತನಾಡಿದ ಸಚಿವ ಸುರೇಶ್ ಕುಮಾರ್, ಎಸ್ಸೆಸ್ಸೆಲ್ಸಿ ಪರೀಕ್ಷೆಗೂ ಹಿಂದೆ ಧರ್ಮಸ್ಥಳಕ್ಕೆ ಬಂದು ಸುಸೂತ್ರವಾಗಿ ಪರೀಕ್ಷೆ ನಡೆಯುವಂತೆ ದೇವರಲ್ಲಿ ಕೇಳಿಕೊಂಡಿದ್ದೆ. ಪರೀಕ್ಷೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈಗ ಬಂದು ಪೂಜೆ ಸಲ್ಲಿಸಿದ್ದೇನೆ ಎಂದರು.

Karnataka Education Minister Suresh Kumar Visited the Shri Dharmasthala Temple and also had a meeting along with Dr Veerendra Heggade in discussing considering reopening of schools.