Cracker shop fire, Bangalore: ಅತ್ತಿಬೆಲೆ ಪಟಾಕಿ ದುರಂತ ; 14 ಜನರ ಬಲಿ ಪಡೆದ ಪ್ರಕರಣ ಈಗ ಸಿಐಡಿಗೆ ಹಸ್ತಾಂತರ, ಕರ್ನಾಟಕ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ, ತಮಿಳುನಾಡಿನಲ್ಲಿ 3 ಲಕ್ಷ ಪರಿಹಾರಕ್ಕೆ ಆಕ್ರೋಶ !

08-10-23 08:11 pm       Bangalore Correspondent   ಕರ್ನಾಟಕ

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಶನಿವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು, ಅ.8: ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಶನಿವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಟಾಕಿ ದುರಂತ ಪ್ರಕರಣವನ್ನು ಸಿಐಡಿಗೆ ವಹಿಸುವುದಾಗಿ ಎಂದು ಹೇಳಿದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ಅವಘಡ ಪ್ರಕರಣದಲ್ಲಿ ಒಟ್ಟು 14 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು. ಸಿಐಡಿಯು ಘಟನೆ ಹಿಂದಿರುವ ಕಾರಣ ಮತ್ತು ಆರೋಪಿಗಳ ವಿರುದ್ಧ ತನಿಖೆ ನಡೆಸಲಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ಮೃತರ ಗುರುತು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

Tragic inferno at illegal firecracker storage claims 14 lives near Bengaluru  - The South First

Most victims are poor students: Bengaluru Chief Minister after fire kills 14  - India Today

ಅಕ್ಟೋಬರ್ 7ರಂದು ಮಧ್ಯಾಹ್ನ 3.15 ರಿಂದ 3.30ರ ವೇಳೆ ಬೆಂಕಿ ಅನಾಹುತ ನಡೆದಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ರಾಮುಸ್ವಾಮಿರೆಡ್ಡಿ ಎಂಬುವರು ಪರವಾನಗಿ ಪಡೆದು ಪಟಾಕಿ ಮಾರಾಟದ ವ್ಯವಹಾರ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ತಮಿಳುನಾಡಿನಿಂದ ಟ್ರಕ್ ಗಳಲ್ಲಿ ಪಟಾಕಿಗಳು ಬಂದಿದ್ದು, ಬೆಂಕಿ ಹೇಗೆ ಪಟಾಕಿಗೆ ತಗುಲಿತು ಎನ್ನುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅಧಿಕಾರಿಗಳು ಇಲ್ಲಿ ಪರಿಶೀಲಿಸಿದ ಮೇಲೆ, ಸ್ಫೋಟಕಗಳ ಮಾರಾಟ ಮಾಡುವ ಗೋದಾಮಿನಲ್ಲಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ ಎಂದು ಕಂಡುಬಂದಿದೆ.

ಗೋದಾಮಿನ ಸ್ಥಳ ಬಹಳ ಕಿರಿದಾಗಿದ್ದು, ಇದರಲ್ಲಿ 14 ಜನರು ಮೃತಪಟ್ಟಿದ್ದಾರೆ. ಎಲ್ಲರೂ ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿಯವರು. ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳು. ರಜಾ ಸಮಯದಲ್ಲಿ ಓದಿಗಾಗಿ ಹಣ ಸಂಪಾದನೆಗಾಗಿ ಬಂದವರು. ಒಬ್ಬ ಮ್ಯಾನೇಜರನ್ನು ಹೊರತುಪಡಿಸಿ ಯಾರೂ ಖಾಯಂ ನೌಕರರಿಲ್ಲ. ಸ್ಫೋಟಕಗಳಿಗೆ ಅಗತ್ಯವಾದ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಗೋದಾಮು ಅಧಿಕೃತವೋ ಅಲ್ಲವೋ ಎಂಬುದನ್ನು ಪರಿಶೀಲಿಸಬೇಕು ಎಂದು ಹೇಳಿದರು.

Cracker shop fire: Toll rises to 14; Karnataka, TN promise compensation

ಘಟನೆಯ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ, ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರೆಲ್ಲರ ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ. ಮತ್ತೆ ಇಂತಹ ದುರ್ಘಟನೆಗಳು ಮರುಕಳಿಸದಿರಲಿ ಎಂದು ಪ್ರಾರ್ಥಿಸುತ್ತೇನೆ. ಈ ಸಂಬಂಧ ರಾಮುಸ್ವಾಮಿರೆಡ್ಡಿ, ನವೀನ್, ಅನಿಲ್ ರೆಡ್ಡಿ ಎಂಬುವರನ್ನು ಬಂಧಿಸಲಾಗಿದೆ. ಐಪಿಸಿ ಸೆಕ್ಷನ್ 285, 286, 337, 338, 437, 304 ಎಫ್ ಐ.ಆರ್ ಕೂಡ ದಾಖಲಾಗಿದೆ. ಪ್ರಕರಣದ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ಇದೊಂದು ಘೋರ ಘಟನೆ. ಘಟನೆ ಸಂಬಂಧ ಇನ್ನೆರಡು ಮೂರು ದಿನಗಳಲ್ಲಿ ಸೂಕ್ತ ಕ್ರಮಕೈಗೊಳ್ಳುತ್ತೇವೆ. ಮತ್ತು ಗಾಯಾಳುಗಳ ಆಸ್ಪತ್ರೆ ವೆಚ್ಚವನ್ನು ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

Ma Subramanian on NEET bill: Governor has nothing to do anymore with NEET  bill, says TN health minister - The Economic Times

ಕರ್ನಾಟಕದಲ್ಲಿ 5ಲಕ್ಷ, ತಮಿಳುನಾಡಿನಲ್ಲಿ 3ಲಕ್ಷ ಪರಿಹಾರಕ್ಕೆ ಅಸಮಾಧಾನ ;

ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟಿರುವವರ ಕುಟುಂಬಗಳಿಗೆ ತಮಿಳುನಾಡು ಸರ್ಕಾರ 3 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ಇದಕ್ಕೆ ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತ್ತಿಬೆಲೆ ಆಕ್ಸ್‌ಫರ್ಡ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿರುವ ಶವಾಗಾರಕ್ಕೆ ಭೇಟಿ ನೀಡಿದ್ದ ತಮಿಳುನಾಡಿನ ಆರೋಗ್ಯ ಸಚಿವ ಮಾ. ಸುಬ್ರಹ್ಮಣ್ಯನ್ ಅವರನ್ನು ಸುತ್ತುವರೆದಿದ್ದ ಸಂಬಂಧಿಕರು, ‘ಕರ್ನಾಟಕ ಸರ್ಕಾರ  5 ಲಕ್ಷ ಪರಿಹಾರ ಘೋಷಿಸದೆ. ಕರ್ನಾಟಕಕ್ಕೆ ಇರುವವಷ್ಟು ಕರುಣೆ ನಿಮಗಿಲ್ಲವೇ?’ ಎಂದು ತರಾಟೆಗೆ ತೆಗೆದುಕೊಂಡರು. ಮಧ್ಯಪ್ರವೇಶಿಸಿದ ಪೊಲೀಸರು, ಸಂಬಂಧಿಕರನ್ನು ಸಮಾಧಾನಪಡಿಸಿದರು. ನಂತರ, ಸಚಿವರು ಸ್ಥಳದಿಂದ ಹೊರಟು ಹೋದರು.

ಆಂಬುಲೆನ್ಸ್ ಅಡ್ಡಗಟ್ಟಿ ಪ್ರತಿಭಟನೆ ; 

3 ಲಕ್ಷ ಪರಿಹಾರ ನಮಗೆ ಬೇಡ. ಅದಕ್ಕಿಂತ ಹೆಚ್ಚಿನ ಪರಿಹಾರ ನೀಡಬೇಕು. ಮೃತರ ಕುಟುಂಬದವ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಿಸಬೇಕು ಎಂದು ಆಗ್ರಹಿಸಿ ಕೆಲ ಸಂಬಂಧಿಕರು, ಶವ ಸಾಗಿಸುತ್ತಿದ್ದ ಆಂಬುಲೆನ್ಸ್‌ಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರನ್ನು ಚದುರಿಸಿದ ಪೊಲೀಸರು, ಆಂಬುಲೆನ್ಸ್ ಹೋಗಲು ದಾರಿ ಮಾಡಿಕೊಟ್ಟರು.

The death count in the fire accident at a cracker shop near Bengaluru reached 14 on Sunday following the death of two more people, police sources said. While 12 people were charred to death on the spot at the shop-cum-godown at Attibele in Anekal Taluk on Saturday, two others died while undergoing treatment today.