ಬ್ರೇಕಿಂಗ್ ನ್ಯೂಸ್
11-10-23 08:50 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.
ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ದದೊಂದಿಗೆ ಸಂದೇಶ ಫ್ಲಾಶ್ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆ ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.
ಸಂದೇಶದಲ್ಲಿ ಏನಿರಲಿದೆ?
ಸಂದೇಶದಲ್ಲಿ ದೂರಸಂಪರ್ಕ ಇಲಾಖೆಯ ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಿದ ಸ್ಯಾಂಪಲ್ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ. ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್ – ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.
ಪ್ರಯೋಜನ ಏನು?
ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ. ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಸ್ಥಳಗಳಲ್ಲಿನ ಮೊಬೈಲ್ ಬಳಕೆದಾರರಿಗೆ ಈ ಫ್ಲಾಶ್ ಸಂದೇಶದ ಮೂಲಕ ಎಚ್ಚರಿಸಲಾಗುತ್ತದೆ.
ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ಅ. 12ರಂದು ರಾಜ್ಯದಲ್ಲಿ ನಡೆಯಲಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನದಲ್ಲಿ ವಿಕೋಪವನ್ನು ಮುಂಚಿತವಾಗಿ ಗ್ರಹಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅನುಕೂಲವಾಗಲಿದೆ. ಪ್ರವಾಹಗಳಂತ ವಿಕೋಪ ಘಟಿಸುವ ಮುನ್ಸೂಚನೆ ನೀಡಲಿದೆ.
ಕರ್ನಾಟಕದಲ್ಲಿ ಅ.12ಕ್ಕೆ ;
ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್ ಪರೀಕ್ಷೆಯನ್ನು ಅ. 12ರಂದು ಕರ್ನಾಟಕದಾದ್ಯಂತ ನಡೆಸುವುದಾಗಿ ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಅ. 12 ಅಂದರೆ ನಾಡಿದ್ದು, ರಾಜ್ಯದ ಜನತೆಯ ಮೊಬೈಲ್ಗೆ ತುರ್ತು ಎಚ್ಚರಿಕೆಯ ಸಂದೇಶ ಬರಲಿದೆ. ಹೀಗಾಗಿ ಯಾರೂ ಗಾಬರಿ ಪಡಬೇಕಿಲ್ಲ. ಇದು ಸರ್ಕಾರದ ವತಿಯಿಂದಲೇ ನಡೆಯುತ್ತಿರುವ ಪರೀಕ್ಷೆಯಾಗಿದೆ.
Emergency Alert on your phone in Karnataka on October 12th, Telcom department clarifies, ‘Please ignore’. India is testing its emergency alert system by sending a test flash on several smartphones. Users heard a loud beep on their phones along with a 'emergency alert: severe' flash."This is a SAMPLE.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am