ಬ್ರೇಕಿಂಗ್ ನ್ಯೂಸ್
13-10-23 03:13 pm Bangalore Correspondent ಕರ್ನಾಟಕ
ಬೆಂಗಳೂರು, ಅ.13: ಕೇಂದ್ರ ಮೃಗಾಲಯ ಪ್ರಾಧಿಕಾರದ ಷರತ್ತುಗಳ ಅನುಗುಣವಾಗಿ ಪಿಲಿಕುಳ ಜೈವಿಕ ಉದ್ಯಾನವದ ಉತ್ತಮ ನಿರ್ವಹಣೆಗೆ ಅಗತ್ಯವಾಗಿರುವ ತಾಂತ್ರಿಕ ರೂಪುರೇಷೆಗಳನ್ನ ರೂಪಿಸುವ ನಿಟ್ಟಿನಲ್ಲಿ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟವರ ಸಭೆಯನ್ನು ಆಯೋಜಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ಸೂಚನೆ ನೀಡಿದರು.
ಬೆಂಗಳೂರಿನ ವಿಧಾನಸೌಧ ಕಟ್ಟಡದಲ್ಲಿ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ರಾಜ್ಯ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜೈವಿಕ ಉದ್ಯಾನವದ ಮಾನ್ಯತೆಯನ್ನ ಕೆಲವು ಷರತ್ತುಗಳ ಅನುಸಾರವಾಗಿ ಕೇಂದ್ರ ಮೃಗಾಲಯ ಪ್ರಾಧಿಕಾರವು 1.12.2025 ರ ವರೆಗೆ ನವೀಕರಿಸಿದೆ. ಜೈವಿಕ ಉದ್ಯಾನವನದ ದಿನನಿತ್ಯದ ನಿರ್ವಹಣೆಗಾಗಿ ಅರಣ್ಯ ಇಲಾಖೆಯ ಸಹಾಯ ಪಡೆಯುವಂತೆಯೂ ಸಲಹೆಯನ್ನು ನೀಡಿದೆ. ಈ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅರಣ್ಯ ಇಲಾಖೆ, ಮಂಗಳೂರು ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು. ಜೈವಿಕ ಉದ್ಯಾನವನವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಕುರಿತಂತೆ ಪರವಾಗಿ ಹಾಗೂ ವಿರೋಧವಾಗಿ ಸಲಹೆಗಳು ಸಭೆಯಲ್ಲಿ ವ್ಯಕ್ತವಾದವು.
ತಾಂತ್ರಿಕ ರೂಪುರೇಷೆಗಳನ್ನ ರೂಪಿಸಿ
ಕೇಂದ್ರ ಮೃಗಾಲಯ ಪ್ರಾಧಿಕಾರವು ಜೈವಿಕ ಉದ್ಯಾನವನದಲ್ಲಿರುವ ಪ್ರಾಣಿಗಳ ಸಮರ್ಥ ನಿರ್ವಹಣೆಗಾಗಿ ತಾಂತ್ರಿಕ ಷರತ್ತುಗಳನ್ನು ಪೂರೈಸುವಂತೆ ಸಲಹೆ ನೀಡಿದೆ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಪ್ರಾಧಿಕಾರದ ಮಟ್ಟದಲ್ಲಿ ವಿಸ್ತೃತ ಚರ್ಚೆಯನ್ನು ನಡೆಸುವಂತಹ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸಭೆಯನ್ನು ನಡೆಸುವಂತೆ ಸಚಿವರಾದ ಎನ್.ಎಸ್ ಭೋಸರಾಜು ಸೂಚನೆ ನೀಡಿದರು. ಸಭೆಯಲ್ಲಿ ಜೈವಿಕ ಉದ್ಯಾನವನದ ದಿನನಿತ್ಯದ ನಿರ್ವಹಣೆಗಾಗಿ ಅಗತ್ಯವಿರುವ ತಾಂತ್ರಿಕ ಸಹಾಯವನ್ನು ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ಪಡೆದುಕೊಳ್ಳುವ ನಿಟ್ಟಿನಲ್ಲಿ ಚರ್ಚಿಸಿ ರಾಜ್ಯ ಸಲಹಾ ಸಮಿತಿಗೆ ಶೀಘ್ರವಾಗಿ ವರದಿ ಸಲ್ಲಿಸುವಂತೆ ಸಚಿವರು ಸೂಚನೆ ನೀಡಿದರು.
ಪಿಲಿಕುಳ ಸಮಗ್ರ ಅಭಿವೃದ್ದಿಗೆ ಒತ್ತು ನೀಡಿ
ಕರಾವಳಿ ಭಾಗದಲ್ಲಿ ಪ್ರಮುಖ ಪ್ರವಾಸಿ ಆಕರ್ಷಣೆಯ ಕೇಂದ್ರವಾಗುವ ಎಲ್ಲಾ ಅರ್ಹತೆಗಳನ್ನ ಪಿಲಿಕುಳ ಹೊಂದಿದೆ. ವಿಶ್ವದ ಏಕೈಕ ಕಾಳಿಂಗ ಸರ್ಪ ಸಂತಾನೋತ್ಪತ್ತಿ ಕೇಂದ್ರವಿದ್ದು, ಸಂಸ್ಕೃತಿಯನ್ನ ಬಿಂಬಿಸುವ ಕೇಂದ್ರಗಳು ಇವೆ. ಇದನ್ನ ಪ್ರಚುರ ಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ ಆರ್ಥಿಕವಾಗಿ ಸಬಲವಾಗುವ ನಿಟ್ಟಿನಲ್ಲಿ ಇದು ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಏಕ್‌ರೂಪ್ ಕೌರ್, ಮಂಗಳೂರಿನ ಮಾಜಿ ಶಾಸಕರಾದ ಜಿ.ಆರ್ ಲೋಬೋ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಐಎಫ್‌ಎಸ್ ಕುಮಾರ್ ಪುಷ್ಕರ್, ಮಂಗಳೂರಿನ ಜಿಲ್ಲಾಧಿಕಾರಿಗಳು, ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಆಯುಕ್ತರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
Minister for Minor Irrigation, Science and Technology N.S. Boseraju instructed the officials to convene a meeting of dakshina Kannada Deputy Commissioners and stakeholders under the chairmanship of the Secretary of the Department to chalk out the technical modalities required for the better management of Pilikula Biological Park as per the conditions of the Central Zoo Authority.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am