ಬ್ರೇಕಿಂಗ್ ನ್ಯೂಸ್
13-10-23 11:13 pm Bangalore Correspondent ಕರ್ನಾಟಕ
ಬೆಂಗಳೂರು, ಅ.13: ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ! ಐಟಿ ದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ, ಐಟಿ ದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ಕೇಳಿದ್ದಾರೆ. ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು? ಎಂದು ಪ್ರಶ್ನಿಸಿದ್ದಾರೆ.
23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ 'ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ'ಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ ಕಾಂಗ್ರೆಸ್ ಸರಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು? ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಈಗ ಹೇಳಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ.. 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಇಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು..? ದಯಮಾಡಿ ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಕುಟುಕಿದ್ದಾರೆ. ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ' ಕೈ ' ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಗೆ ಕರ್ನಾಟಕ ಸಮೃದ್ಧ ಎಟಿಎಮ್!! ಕಾವೇರಿ ನೀರು ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆ ಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ.
ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ ಎಂದು ಹೇಳುವ ಮೂಲಕ ಕರ್ನಾಟಕಕ್ಕೆ ಕಾಂಗ್ರೆಸ್ ಕನ್ನ ಎಂದು ಹ್ಯಾಶ್ ಟ್ಯಾಗ್ ಬಳಸಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ!!
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 13, 2023
ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ.
ಆಯ್ದ ಗುತ್ತಿಗೆದಾರರಿಗೆ…
As soon as the five-state elections are announced, a blind kanchana is dancing in cotton boxes in the state. That too under the bed! Whose money was found in the contractor's house during the IT raid? Former Chief Minister HD Kumaraswamy asked.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am