CM Ibrahim: ನಾನೇ ರಾಜ್ಯಾಧ್ಯಕ್ಷ, ಕುಮಾರಸ್ವಾಮಿ ಅವರನ್ನೂ ಪಕ್ಷದಿಂದ ಉಚ್ಚಾಟಿಸುವ ಸಾಮರ್ಥ್ಯ ಇದೆ ; ಸಿಎಂ ಇಬ್ರಾಹಿಂ 

17-10-23 10:04 pm       Bangalore Correspondent   ಕರ್ನಾಟಕ

ಬಿಜೆಪಿ- ದಳದ ಮೈತ್ರಿ ಬಗ್ಗೆ ಮುನಿಸಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೊಸ ದಾಳ ಉರುಳಿಸಿದ್ದಾರೆ. ಸಿಎಂ ಇಬ್ರಾಹಿಂ ದಳಪತಿಗಳಿಗೆ ಸವಾಲ್ ಎಸೆದಿದ್ದು ಎಚ್.ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ಚಾಟಿಸುವ ಸಾಮರ್ಥ್ಯ ಇದೆಯೆಂದು ಹೇಳಿ ಕುತೂಹಲ ಮೂಡಿಸಿದ್ದಾರೆ. ‌

ಬೆಂಗಳೂರು, ಅ.17: ಬಿಜೆಪಿ- ದಳದ ಮೈತ್ರಿ ಬಗ್ಗೆ ಮುನಿಸಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೊಸ ದಾಳ ಉರುಳಿಸಿದ್ದಾರೆ. ಸಿಎಂ ಇಬ್ರಾಹಿಂ ದಳಪತಿಗಳಿಗೆ ಸವಾಲ್ ಎಸೆದಿದ್ದು ಎಚ್.ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ಚಾಟಿಸುವ ಸಾಮರ್ಥ್ಯ ಇದೆಯೆಂದು ಹೇಳಿ ಕುತೂಹಲ ಮೂಡಿಸಿದ್ದಾರೆ. ‌

ನಾನೇ ರಾಜ್ಯಾಧ್ಯಕ್ಷ.. ನಾನೇಕೆ ಪಕ್ಷ ಬಿಡಲಿ. ನಾನು ಪಕ್ಷ ಬಿಡಲ್ಲ, ಬಿಜೆಪಿ ಜೊತೆಗೂ ಹೋಗಲ್ಲ. ಶಾಸಕರ ನಿರ್ಧಾರ ಏನು ಕಾದು ನೋಡಿ ಎಂದು ಸಿಎಂ ಇಬ್ರಾಹಿಂ ಟ್ವಿಸ್ಟ್ ಕೊಟ್ಟಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿ ವಿರೋಧಿಸಿ ಮುಂದಿನ ನಡೆ ಬಗ್ಗೆ ಚರ್ಚಿಸಲು ಸಿಎಂ ಇಬ್ರಾಹಿಂ ಬೆಂಗಳೂರಿನಲ್ಲಿ ಅ.16ರಂದು ಬೆಂಬಲಿಗರು, ಕಾರ್ಯಕರ್ತರ ಜತೆ ಸಭೆಯನ್ನು ನಡೆಸಿದ್ದರು. ಸಭೆಯಲ್ಲಿ ನಮ್ಮದೇ ಒರಿಜಿನಲ್ ಜೆಡಿಎಸ್. ಬಿಜೆಪಿಗೆ ಬೆಂಬಲ ಇಲ್ಲ ಎಂದಿರುವ ಇಬ್ರಾಹಿಂ, ನಾನೇ ರಾಜ್ಯಾಧ್ಯಕ್ಷ.. ನಾನೇಕೆ ಪಕ್ಷ ಬಿಡಲಿ. ನಾನು ಪಕ್ಷ ಬಿಡಲ್ಲ, ಬಿಜೆಪಿ ಜೊತೆಗೂ ಹೋಗಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಸ್ವತಃ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇಬ್ರಾಹಿಂಗೆ ಟಾಂಗ್ ಕೊಟ್ಟಿದ್ದಾರೆ. 

H D Kumaraswamy | JD(S) leader Kumaraswamy expresses outrage over fresh  order to release Cauvery water to TN, says it's against spirit of  constitution - Telegraph India

ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿಮಗೆ ಅದು ದೊಡ್ಡದಾಗಿ ಕಾಣುತ್ತಿದೆ. ಏನು ಸರಿ ಮಾಡಬೇಕೋ ಅದನ್ನು ನಾವು ಮಾಡುತ್ತೇವೆ.. ಅವರೇ ಒರಿಜಿನಲ್ ಎಂದು ಬೋರ್ಡ್ ಹಾಕಿಕೊಳ್ಳಲಿ ಎಂದು ಟಾಂಗ್ ಕೊಟ್ಟರು.

ಪಕ್ಷದಿಂದ ಉಚ್ಚಾಟನೆ ಪ್ರಸ್ತಾಪದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ಅವರಿಗೆ ಬಿಟ್ಟದ್ದು. ದಯವಿಟ್ಟು ಇಂತಹ ಸಿಲ್ಲಿ ವಿಚಾರಕ್ಕೆ ಬರಬೇಡಿ. ನಮಗೆ ಏನು ಮಾಡಬೇಕೊ, ಮಾಡುತ್ತೇವೆ. ನೀವು ತಲೆಕೆಡಿಸಿಕೊಂಡು ಬಂದಿದ್ದೀರಾ? ಅವರು ಫ್ರೀ ಇದ್ದಾರೆ ಮಾತಾಡ್ಕೊಳ್ಳಿ. ನಮ್ಮ ಪಕ್ಷದಲ್ಲಿ ಇರುವ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ನೀವು ಯಾಕೆ ವರಿ ಮಾಡಿಕೊಳ್ಳುತ್ತೀರಿ ಎಂದರು.

Jd(S) state president C M Ibrahim, who is upset over the BJP-Dal alliance, has thrown a new dice. Chief Minister Ibrahim has challenged the dalapathis, saying that he has the potential to expel HD Kumaraswamy from the party.